ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ದಲ್ಲಿ (Pahalgam) ಭಯೋತ್ಪಾದಕರ ದಾಳಿಗೆ 26 ಅಮಾಯಕ ಹಿಂದೂಗಳು ಜೀವ ತೆತ್ತಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ (Indian Army) ಪ್ರತೀಕಾರ ಪ್ರಾರಂಭಿಸಿದೆ. ಉಗ್ರರ ಸದೆಬಡಿಯುವ ಶಪಥಗೈಯ್ದಿರುವ ಭಾರತೀಯ ಸೇನೆ ಮೊದಲ ದಿಟ್ಟ ಹೆಜ್ಜೆ ಇರಿಸಿದೆ. ಪಹಲ್ಗಾಮ್‌ನ ದಾಳಿಯಲ್ಲಿ ಭಾಗಿ ಆಗಿದ್ದಾನೆ ಎನ್ನಲಾದ ಲಷ್ಕರ್-ಇ-ತೈಬಾ ಉಗ್ರ ಆಸೀಫ್ ಶೇಖ್ ಮತ್ತು ಆದಿಲ್ ಮನೆಗಳನ್ನು ಸೇನೆ ಉಡಾಯಿಸಿದೆ.
ಬಿಹಾರದಲ್ಲಿ (Bihar) ಪ್ರಧಾನಿ ನರೇಂದ್ರ ಮೋದಿ (PM Narendra Modi), ಅಮಾಯಕರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳೋದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಇವತ್ತು ಸೇನೆ ಅಖಾಡಕ್ಕೆ ಇಳಿದಿದೆ. ಕಾಶ್ಮೀರದ (Kashmir) ಟ್ರಾಲ್‌ನಲ್ಲಿರುವ ಎಲ್‌ಇಟಿ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆ, ಅನಂತ್‌ನಾಗ್ ಜಿಲ್ಲೆಯಲ್ಲಿರುವ ಆದಿಲ್ ಮನೆಯನ್ನು ಸ್ಫೋಟಿಸಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಶೇಖ್ ಭಾಗಿಯಾಗಿದ್ದಾನೆಂದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಭಾಗವಾಗಿ ಅಧಿಕಾರಿಗಳು ಶೇಖ್ ಮನೆ-ಆಸ್ತಿಯನ್ನು ನಾಶಪಡಿಸಿದ್ದಾರೆ. ಟ್ರಾಲ್ ಮತ್ತು ಅನಂತ್‌ನಾಗ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ.ಇದನ್ನೂ ಓದಿ: ನಾನು ಒಂದು ಧರ್ಮದ ಪರ ಅಲ್ಲ: ಸಿದ್ದರಾಮಯ್ಯ
ಪಹಲ್ಗಾಮ್‌ನಲ್ಲಿ ಗುಂಡಿನ ಸುರಿಮಳೆ ಸುರಿಸಿ ಹಿಂದೂಗಳ ಹತ್ಯೆಗೈಯ್ದ ಉಗ್ರರಿಗೆ ಪಾಕಿಸ್ತಾನದಲ್ಲಿ ತರಬೇತಿ ನೀಡಲಾಗಿದೆ ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಹೊರಬಿದ್ದಿದೆ. 5 ರಿಂದ 7 ಭಯೋತ್ಪಾದಕರು ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪೈಕಿ ಇಬ್ಬರು ಸ್ಥಳೀಯ ಉಗ್ರರೇ ಆಗಿದ್ದಾರೆ ಎಂಬ ಸುಳಿವು ಸಿಕ್ಕಿದೆ. ಈಗಾಗಲೇ ಇಬ್ಬರು ಉಗ್ರರ ಮನೆಗಳನ್ನು ಧ್ವಂಸ ಮಾಡಿರುವ ಸೇನೆ ಭಯೋತ್ಪಾದಕರ ಜಾಲ ಭೇದಿಸಲು ಕಾರ್ಯಾಚರಣೆ ಶುರು ಮಾಡಿದೆ.
ಅಮಾಯಕ 26 ಮಂದಿ ಹಿಂದೂಗಳ ಕಗ್ಗೊಲೆ ಮಾಡಿದ ಕಡುಪಾಪಿಗಳ ಹುಟ್ಟಡಗಿಸಲು ಭಾರತೀಯ ಸೇನೆ ಶಪಥ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಎನ್‌ಕೌಂಟರ್ ಆರಂಭಿಸಲಾಗಿದೆ. ಅಡಗಿ ಕುಳಿತಿರುವ ಉಗ್ರರು ಹಾಗೂ ಭಾರತೀಯ ಸೇನಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆ ವೇಳೆ ಲಷ್ಕರ್-ಎ ತೊಯ್ಬಾ ಸಂಘಟನೆಯ ಕಮಾಂಡರ್ ಅಲ್ತಫಾ ಲಲ್ಲಿಯನ್ನು ಫಿನಿಶ್ ಮಾಡಲಾಗಿದೆ.
ಬಂಡಿಪೋರಾ ಜಿಲ್ಲೆಯ ಬಾಜಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆ ಭದ್ರತಾ ಪಡೆಗಳು ಕೂಂಬಿAಗ್ ಕಾರ್ಯಾಚರಣೆ ಆರಂಭಿಸಿದೆ. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಪರಿಣಾಮ ಇಬ್ಬರು ಭದ್ರತಾಪಡೆ ಸಿಬ್ಬಂದಿಗೆ ಗಾಯಗಳಾಗಿವೆ. ಉಗ್ರರು ಅಡಗಿರುವ ಸ್ಥಳವನ್ನು ಸುತ್ತುವರೆದಿರುವ ಸೇನಾಪಡೆ ಕಾರ್ಯಾಚರಣೆಯನ್ನು ಎನ್‌ಕೌಂಟರ್ ಆಗಿ ಬದಲಿಸಿದ್ದು, ಪಾಕ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಒಟ್ಟಿನಲ್ಲಿ ಭಾರತ ಪಾಕಿಸ್ತಾನದ ಮಧ್ಯೆ ಆತಂಕದ ವಾತಾವರಣವಿದ್ದು, ಇದು ಯಾವ ಹಂತ ತಲುಪುತ್ತದೆ ಎಂದು ಕಾದು ನೋಡಬೇಕಿದೆ.ಇದನ್ನೂ ಓದಿ: ಉಗ್ರರ ದಾಳಿ ನಡೆದ ಪಹಲ್ಗಾಮ್‌ನಲ್ಲಿ ನಿಮ್ಮ ʻPublic TVʼ; ಬೈಸರನ್ ವ್ಯಾಲಿಯಿಂದ ಕನ್ನಡದ ಏಕೈಕ ಚಾನಲ್ ಪ್ರತ್ಯಕ್ಷ ವರದಿ..!