ಶ್ರೀನಗರ: ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೂಂಚ್ ಪ್ರದೇಶದ ಗಡಿ ನಿಯಂತ್ರಣ ರೇಖೆಯ (LOC) ಉದ್ದಕ್ಕೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೇನೆಯಿಂದ (Pakistan Army) ಅಪ್ರಚೋದಿತ ಗುಂಡಿನ ದಾಳಿ ಮತ್ತು ಅತಿಕ್ರಮಣ ನಡೆದಿದೆ. ಭಾರತದ ಗಡಿಯೊಳಗೆ ನುಗ್ಗಲು ನೋಡಿದ ಪಾಕ್ ಸೇನೆಯನ್ನು ಭಾರತೀಯ ಸೇನೆ ಹಿಮ್ಮೆಟ್ಟಿಸಿದೆ.
ಭಾರತದ ನೆಲಕ್ಕೆ ನುಗ್ಗಿದ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯೂ (Indian Army) ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬರ್ತ್ವಾಲ್ ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಎನ್‌ಜಿಒಗಳಿಗೆ ಜಾರ್ಜ್ ಸೊರೊಸ್ ನಿಧಿಯಿಂದ ಹಣ ವರ್ಗಾವಣೆ – ಪತ್ತೆ ಹಚ್ಚಿದ ಇಡಿ
- Advertisement -
- Advertisement -
ಏಪ್ರಿಲ್ 1 ರಂದು ಗಡಿ ನಿಯಂತ್ರಣ ರೇಖೆಯಾದ್ಯಂತ ದಾಟಿ ಪಾಕಿಸ್ತಾನ ಸೇನೆಯ ಒಳನುಸುಳುವಿಕೆಯ ಪರಿಣಾಮವಾಗಿ ಕೃಷ್ಣ ಘಾಟಿ ವಲಯದಲ್ಲಿ ಗಣಿ ಸ್ಫೋಟ ಸಂಭವಿಸಿದೆ. ಇದರ ನಂತರ ಕದನ ವಿರಾಮ ಒಪ್ಪಂದದ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಾವು ನೋವಿನ ಬಗ್ಗೆ ಯಾವುದೇ ವರದಿ ಆಗಿಲ್ಲ. ಭಾರತ ಪಾಕಿಸ್ತಾನದೊಂದಿಗೆ ಒಟ್ಟು 3,323 ಕಿಮೀ ಗಡಿಯನ್ನು ಹಂಚಿಕೊಂಡಿದೆ. ಇದನ್ನೂ ಓದಿ: ಆರ್‌ಬಿಐ ನೂತನ ಡೆಪ್ಯೂಟಿ ಗವರ್ನರ್ ಆಗಿ ಪೂನಮ್ ಗುಪ್ತಾ ನೇಮಕ
- Advertisement -