ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಕಥುವಾದಲ್ಲಿ (Kathua) ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್-ಎ-ಮೊಹಮ್ಮದ್ (JeM) ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು (Terrorist) ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಶುಕ್ರವಾರ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಉಸ್ಮಾನ್ ಎಂಬ ಉಗ್ರ ಸಾವನ್ನಪ್ಪಿದ್ದಾನೆ. ಮೃತ ಉಗ್ರನಿಂದ ಎಂ4 ಸ್ವಯಂಚಾಲಿತ ರೈಫಲ್ ಸೇರಿದಂತೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ
ಕಥುವಾ ಜಿಲ್ಲೆಯ ಬಿಲ್ಲಾವರ್ ಪ್ರದೇಶದ ಪರ್ಹೇಟರ್ ಎಂಬಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಸೇನೆ ಮತ್ತು ಸಿಆರ್‌ಪಿಎಫ್ ಪಡೆಗಳು ಜಂಟಿ ಕಾರ್ಯಾಚರಣೆ ಆರಂಭಿಸಿ ಪ್ರದೇಶವನ್ನು ಸುತ್ತುವರಿದಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಸದ್ಯ ಈ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:

