ಇಸ್ಲಾಮಾಬಾದ್: ದೇಶದಲ್ಲಿ ಹೊಸ ವರ್ಷಾಚರಣೆ (2024) ನಿಷೇಧಿಸಲಾಗಿದೆ ಎಂದು ಹಂಗಾಮಿ ಪ್ರಧಾನ ಮಂತ್ರಿ ಅನ್ವಾರುಲ್ ಹಕ್ ಕಾಕರ್ (Anwaarul Haq Kakar) ಘೋಷಿಸಿದ್ದಾರೆ.
ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಸ್ರೇಲ್-ಹಮಾಸ್ ಯುದ್ಧದಿಂದಾಗಿ ಗಾಜಾದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಗಾಜಾ ಜನರಿಗಾಗಿ ನಾವು ದನಿ ಎತ್ತಬೇಕು. ಅದಕ್ಕಾಗಿ ಒಗಟ್ಟು ಪ್ರದರ್ಶಿಸಲು, ಹೊಸ ವರ್ಷದ ಸಂಭ್ರಮ ಬೇಡ ಎಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.
Advertisement
Advertisement
ಪ್ಯಾಲೆಸ್ತೀನ್‌ನಲ್ಲಿನ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಪ್ಯಾಲೆಸ್ತೀನ್ ಸಹೋದರ-ಸಹೋದರಿಯರೊಂದಿಗೆ ನಾವಿದ್ದೇವೆ ಎಂಬ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಹೊಸ ವರ್ಷಕ್ಕೆ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ನಡೆಸದಂತೆ ಸರ್ಕಾರವು ಕಟ್ಟುನಿಟ್ಟಾದ ನಿಷೇಧವನ್ನು ವಿಧಿಸುತ್ತದೆ ಎಂದು ತಿಳಿಸಿದ್ದಾರೆ.
Advertisement
ಅಕ್ಟೋಬರ್ 7 ರಂದು ಇಸ್ರೇಲಿ ಬಾಂಬ್ ದಾಳಿ ಪ್ರಾರಂಭವಾದಾಗಿನಿಂದ ಸುಮಾರು 9,000 ಮಕ್ಕಳು ಸೇರಿದಂತೆ 21,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಹತ್ಯೆಯಾಗಿದ್ದಾರೆ. ಹಿಂಸಾಚಾರ ಮತ್ತು ಅನ್ಯಾಯದ ಎಲ್ಲಾ ಮಿತಿಗಳನ್ನು ದಾಟಿದ ಇಸ್ರೇಲಿ ಪಡೆಗಳಿಂದ ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಇಡೀ ಪಾಕಿಸ್ತಾನಿ ರಾಷ್ಟ್ರ ಮತ್ತು ಮುಸ್ಲಿಂ ಜಗತ್ತು, ಗಾಜಾದಲ್ಲಿ ಮುಗ್ಧ ಮಕ್ಕಳ ಹತ್ಯಾಕಾಂಡ ಮತ್ತು ನಿರಾಯುಧ ಪ್ಯಾಲೆಸ್ತೀನಿಯನ್ನರ ನರಮೇಧದಿಂದಾಗಿ ದುಃಖದಲ್ಲಿದೆ. ಪ್ಯಾಲೆಸ್ತೀನ್‌ಗೆ ಸಕಾಲಿಕ ನೆರವು ನೀಡಲು ಮತ್ತು ಗಾಜಾದಲ್ಲಿರುವ ಗಾಯಾಳುಗಳನ್ನು ಸ್ಥಳಾಂತರಿಸಲು ಪಾಕಿಸ್ತಾನವು ಜೋರ್ಡಾನ್ ಮತ್ತು ಈಜಿಪ್ಟ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ಪಾಕಿಸ್ತಾನವು ವಿವಿಧ ಜಾಗತಿಕ ವೇದಿಕೆಗಳಲ್ಲಿ ಪ್ಯಾಲೆಸ್ತೀನಿಯನ್ ಜನರ ದುಃಸ್ಥಿತಿ ಬಗ್ಗೆ ಗಮನ ಸೆಳೆಯಲು ಪ್ರಯತ್ನಿಸಿದೆ. ಇಸ್ರೇಲಿ ರಕ್ತಪಾತವನ್ನು ತಡೆಯಲು ಭವಿಷ್ಯದಲ್ಲಿಯೂ ಇದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ಕಾಕರ್ ಸ್ಪಷ್ಟಪಡಿಸಿದ್ದಾರೆ.