ಇಸ್ಲಾಮಾಬಾದ್: ಕಿಡ್ನ್ಯಾಪ್ ಆಗಿ ಬಲವಂತವಾಗಿ ಇಸ್ಲಾಂಗೆ (Islam) ಮತಾಂತರಗೊಂಡು (Conversion) ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ 14 ವರ್ಷದ ಹಿಂದೂ ಬಾಲಕಿಯನ್ನು ಆಕೆಯ ಪೋಷಕರ ಜೊತೆಗೆ ಕಳುಹಿಸಿಕೊಡಲು ಪಾಕಿಸ್ತಾನ ಕೋರ್ಟ್ (Pakistan Court) ನಿರಾಕರಿಸಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 14 ವರ್ಷದ ಹಿಂದೂ ಬಾಲಕಿಯನ್ನು ಅಪಹರಿಸಿ, ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಲಾಗಿತ್ತು. ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪೋಷಕರ ಜೊತೆಗೆ ಹೋಗಲು ಆಕೆ ಬಯಸಿದರೂ, ಕಳುಹಿಸಲು ಪಾಕ್ ಕೋರ್ಟ್ ನಿರಾಕರಿಸಿದೆ. ಇದನ್ನೂ ಓದಿ: ಸೆಕ್ಸ್ ಕೂಡ ಒಂದು ಕೆಲಸ – ಕಾನೂನುಬದ್ಧಗೊಳಿಸಲು ಹೊಸ ಮಸೂದೆ ಮಂಡನೆ
Advertisement
Advertisement
ಜೂನ್ 2 ರಂದು ದಕ್ಷಿಣ ಸಿಂಧ್ ಪ್ರಾಂತ್ಯದ ಬೆನಜಿರಾಬಾದ್ ಜಿಲ್ಲೆಯ ನಿವಾಸಿಯಾಗಿದ್ದ ಬಾಲಕಿಯನ್ನು ಆಕೆಯ ತಾಯಿಯ ಮುಂದೆಯೇ ಗನ್ ತೋರಿಸಿ ಬೆದರಿಸಿ ಅಪಹರಿಸಲಾಗಿತ್ತು. ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ದೂರು ದಾಖಲಿಸಿದ್ದರು.
Advertisement
ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿ ಮುಸ್ಲಿಂ ವ್ಯಕ್ತಿಯೊಂದಿಗೆ ಆಕೆಯನ್ನು ಮದುವೆ ಮಾಡಲಾಗಿದೆ. ಈ ಸಂಬಂಧದ ವೀಡಿಯೋ ಕೂಡ ಮಾಡಲಾಗಿತ್ತು. ಅಪಹರಣಕ್ಕೊಳಗಾದ ಐದ ದಿನಗಳ ನಂತರ ಬಾಲಕಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಳಲು ತೋಡಿಕೊಂಡು ವೀಡಿಯೋ ಮಾಡಿದ್ದಳು. ನಂತರ ಕಾರ್ಯಪ್ರವೃತ್ತರಾದ ಮನೆಯವರು ಮನೆಯೊಂದರಿಂದ ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಜಗತ್ತಿನ ಅತ್ಯಂತ ಬಡರಾಷ್ಟ್ರ ಸೊಮಾಲಿಯಾದಲ್ಲಿ ಬಾಂಬ್ ಸ್ಫೋಟವಾಗಿ 25 ಮಕ್ಕಳು ಸಾವು
Advertisement
ನಂತರ ಆಕೆಯನ್ನು ಲರ್ಕಾನಾದ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ತನ್ನನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ್ದಾರೆ. ನಾನು ನನ್ನ ಪೋಷಕರ ಬಳಿಗೆ ಹೋಗಬೇಕು ಎಂದು ನ್ಯಾಯಾಧೀಶರ ಮುಂದೆ ಬಾಲಕಿ ಅಳಲು ತೋಡಿಕೊಂಡಿದ್ದಾಳೆ. ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಜೂ.12 ಕ್ಕೆ ಮುಂದೂಡಿದೆ.
ಹಿಂದೂಗಳು ಪಾಕಿಸ್ತಾನದಲ್ಲಿ ಅತಿ ದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿದೆ. ಅಧಿಕೃತ ಮಾಹಿತಿ ಪ್ರಕಾರ, ಮುಸ್ಲಿಂ ಬಹುಸಂಖ್ಯಾತ ದೇಶದಲ್ಲಿ 75 ಲಕ್ಷ ಹಿಂದೂಗಳು ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಟ್ರಂಪ್ ಮನೆಯ ಬೆಡ್‌ರೂಮ್, ಬಾತ್‌ರೂಮ್‌ನಲ್ಲಿ ರಹಸ್ಯ ದಾಖಲೆಗಳು