ಪಾಕ್‌ನಲ್ಲಿ ಮೊಬೈಲ್, ಇಂಟರ್‌ನೆಟ್ ಸೇವೆ ಶೀಘ್ರವೇ ಸ್ಥಗಿತ!

Public TV
1 Min Read
MOBILE

ಇಸ್ಲಾಮಾಬಾದ್: ಶ್ರೀಲಂಕಾ ಹಾದಿಯಲ್ಲೇ ಸಾಗುತ್ತಿರುವ ಪಾಕಿಸ್ತಾನ ಇದೀಗ ತನ್ನ ದೇಶದ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಲೋಡ್ ಶೆಡ್ಡಿಂಗ್ ಕೊರತೆಯಿಂದಾಗಿ ವಿದ್ಯುತ್ ಬಿಕ್ಕಟ್ಟು ಎದುರಿಸುತ್ತಿದ್ದು, ಈ ಬೆನ್ನಲ್ಲೇ ಮೊಬೈಲ್ ಬಳಕೆ ಹಾಗೂ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸುವಂತೆ ಎಚ್ಚರಿಕೆ ನೀಡಿದೆ.

ಪಾಕಿಸ್ತಾನದ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಮಂಡಳಿ (NITB) ದೇಶದಲ್ಲಿ ವಿದ್ಯುತ್ ಕಡಿತದ ನಡುವೆ ಮೊಬೈಲ್ ಮತ್ತು ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಹೊಟ್ಟೆ ನೋವು ಅಂತ ಟಾಯ್ಲೆಟ್‍ಗೆ ಹೋದವಳು, ಮಗುವಿಗೆ ಜನ್ಮ ನೀಡಿದ್ಳು

INTERNET

ಪಾಕಿಸ್ತಾನದ ಟೆಲಿಕಾಂ ಆಪರೇಟರ್‌ಗಳು ದೀರ್ಘಾವಧಿಯ ವಿದ್ಯುತ್ ನಿಲುಗಡೆಯಿಂದಾಗಿ ಮೊಬೈಲ್ ಮತ್ತು ಇಂಟರ್ ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಏಕೆಂದರೆ ಅತಿಯಾದ ಮೊಬೈಲ್ ಬಳಕೆ ಹಾಗೂ ಇಂಟರ್‌ನೆಟ್ ಬಳಕೆಯಿಂದಾಗಿ ಟೆಲಿಕಾಂ ಕಾರ್ಯಾಚರಣೆಯಲ್ಲೂ ಸಮಸ್ಯೆಗಳಾಗುತ್ತಿವೆ ಎಂದು ಮಂಡಳಿ ಎಚ್ಚರಿಸಿದೆ.

ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಹ ಜುಲೈ ತಿಂಗಳಲ್ಲೇ ಲೋಡ್‌ಶೆಡ್ಡಿಂಗ್ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದಾಗಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಇದನ್ನೂ ಓದಿ: Exclusive- ರಮ್ಯಾ ಯಾರು? ನಾನು ಯಾಕೆ ಅವರ ಆರೋಪಕ್ಕೆ ಉತ್ತರಿಸಲಿ? : ನಟಿ ಪವಿತ್ರಾ ಲೋಕೇಶ್

MOBILE 1

ಪಾಕಿಸ್ತಾನಕ್ಕೆ ಅಗತ್ಯವಾದ ದ್ರವೀಕೃತ ನೈಸರ್ಗಿಕ ಅನಿಲ (LNG) ಪೂರೈಕೆಯನ್ನು ಪಡೆಯಲು ಸಾಧ್ಯವಾಗಲಿಲ್ಲ. ರಾಷ್ಟ್ರೀಯ ಅನಿಲ ಪೂರೈಕೆಯ ಒಪ್ಪಂದವನ್ನು ಒಪ್ಪಿಕೊಳ್ಳಲು ವಿಫಲವಾದಾಗಿನಿಂದ ವಿದ್ಯುತ್ ಬಿಕ್ಕಟ್ಟು ಎದುರಿಸಬೇಕಾಗಿದೆ. ವಿದ್ಯುತ್ ಉತ್ಪಾದನೆಗಾಗಿ ಎಲ್‌ಎನ್‌ಜಿ ಖರೀದಿಸಲು ದೇಶವು ಹೆಣಗಾಡುತ್ತಿದೆ ಎಂದು ಹೇಳಿದ್ದಾರೆ.

ಇಂಧನ ಸಂರಕ್ಷಣೆಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ, ಪಾಕಿಸ್ತಾನ ಸರ್ಕಾರವು ಸಾರ್ವಜನಿಕ ಸೇವಕರಿಗೆ ಈಗಾಗಲೇ ಕೆಲಸದ ಸಮಯವನ್ನು ಕಡಿತಗೊಳಿಸಿದೆ. ಕರಾಚಿ ಸೇರಿದಂತೆ ವಿವಿಧ ನಗರಗಳಲ್ಲಿ ಕಾರ್ಖಾನೆಗಳಿಗೆ ಶಾಪಿಂಗ್ ಮಾಲ್‌ಗಳನ್ನು ಬೇಗನೆ ಮುಚ್ಚಲು ಆದೇಶಿಸಿದೆ. 3 ತಿಂಗಳ ಸರಕುಗಳ ಪೂರೈಕೆಗಾಗಿ ಕತಾರ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಮಾತುಕತೆ ನಡೆಸುತ್ತಿದೆ ಎಂದು ಪಾಕಿಸ್ತಾನದ ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಹೇಳಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *