ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 (Champions Trophy 2025) ವೀಕ್ಷಣೆಗೆ ಆಗಮಿಸಿರುವ ವಿದೇಶಿಯರನ್ನು ಅಪಹರಿಸಿ ಸುಲಿಗೆ ಮಾಡಲು ಸಂಚು ರೂಪಿಸಲಾಗುತ್ತಿದೆ ಎಂದು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿದೆ. ಇಸ್ಲಾಮಿಕ್ ಸ್ಟೇಟ್ (Islamic State) ಖೊರಾಸನ್ ಪ್ರಾಂತ್ಯದಿಂದ ಸಂಭಾವ್ಯ ಬೆದರಿಕೆಯ ಬಗ್ಗೆ ಪಾಕ್ ಇಂಟಲಿಜೆನ್ಸ್ ವರದಿ ನೀಡಿದೆ.
ಭಯೋತ್ಪಾದಕ ಸಂಘಟನೆಯು ನಿರ್ದಿಷ್ಟವಾಗಿ ಚೀನೀ ಮತ್ತು ಅರಬ್ ಪ್ರಜೆಗಳನ್ನು ಗುರಿಯಾಗಿಸಿಕೊಂಡಿದ್ದು ಬಂದರುಗಳು (Port), ವಿಮಾನ ನಿಲ್ದಾಣಗಳು, ಕಚೇರಿಗಳು ಮತ್ತು ಈ ದೇಶಗಳ ಸಂದರ್ಶಕರು ಹೆಚ್ಚಾಗಿ ಬಳಸುವ ವಸತಿ ಪ್ರದೇಶಗಳಲ್ಲಿ ಕಣ್ಗಾವಲು ನಡೆಸುತ್ತಿದೆ ಎಂದು ಮಾಹಿತಿ ನೀಡಿದೆ.
Advertisement
Advertisement
ಗುಪ್ತಚರ ವರದಿಗಳ ಪ್ರಕಾರ, ISKP ಕಾರ್ಯಕರ್ತರು ನಗರಗಳ ಹೊರವಲಯದಲ್ಲಿರುವ ಆಸ್ತಿಗಳನ್ನು ಸುರಕ್ಷಿತ ಮನೆಗಳಾಗಿ ಬಾಡಿಗೆಗೆ ಪಡೆಯಲು ಯೋಜಿಸಿದ್ದಾರೆ, ಕ್ಯಾಮೆರಾ ಕಣ್ಗಾವಲು ಇಲ್ಲದ ಮತ್ತು ರಿಕ್ಷಾ ಅಥವಾ ಮೋಟಾರ್ ಸೈಕಲ್ ಮೂಲಕ ಮಾತ್ರ ಪ್ರವೇಶಿಸಬಹುದಾದ ಸ್ಥಳಗಳನ್ನು ಉದ್ದೇಶಪೂರ್ವಕವಾಗಿ ಆಯ್ಕೆ ಮಾಡಿದ್ದಾರೆ. ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಈ ಸಂಚು ರೂಪಿಸಿದ್ದಾರೆ. ಇದನ್ನೂ ಓದಿ: HALನಲ್ಲಿ ಲಘು ಯುದ್ಧ ವಿಮಾನಗಳ ಉತ್ಪಾದನೆಯಲ್ಲಿ ವಿಳಂಬ – ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ ರಚನೆ
Advertisement
Advertisement
ಪ್ರಮುಖ ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಪಾಕಿಸ್ತಾನ ನಡೆಸುವ ಸಾಮರ್ಥ್ಯದ ಬಗ್ಗೆ ಕಳವಳಗಳ ಹೆಚ್ಚುತ್ತಿರುವ ಹೊತ್ತಲ್ಲೇ ಈ ಎಚ್ಚರಿಕೆ ಬಂದಿದೆ. 2024ರಲ್ಲಿ ಶಾಂಗ್ಲಾದಲ್ಲಿ ಚೀನಾದ ಎಂಜಿನಿಯರ್‌ಗಳ ಮೇಲಿನ ದಾಳಿ ಮತ್ತು 2009 ರಲ್ಲಿ ಲಾಹೋರ್‌ನಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಮೇಲಿನ ದಾಳಿಯಂತಹ ಘಟನೆಗಳು ಪಾಕಿಸ್ತಾನ ಭದ್ರತಾ ವ್ಯವಸ್ಥೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿಸಿತ್ತು. ಇದನ್ನೂ ಓದಿ: ಯುಎಸ್‌ಏಡ್ ಉದ್ಯೋಗಿಗಳಿಗೆ ಟ್ರಂಪ್ ಶಾಕ್ – 1,600ಕ್ಕೂ ಹೆಚ್ಚು ಮಂದಿ ವಜಾ
ಗುಪ್ತಚರ ವರದಿ ಬೆನ್ನಲ್ಲೇ ಅಫ್ಘಾನಿಸ್ತಾನದ ಗುಪ್ತಚರ ಸಂಸ್ಥೆ (ಜಿಡಿಐ) ಪ್ರಮುಖ ಸ್ಥಳಗಳ ಮೇಲೆ ಸಂಭಾವ್ಯ ಐಎಸ್‌ಕೆಪಿ ದಾಳಿಗಳ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ ಮತ್ತು ಈ ಗುಂಪಿನೊಂದಿಗೆ ಸಂಪರ್ಕ ಹೊಂದಿರುವ ಕಾಣೆಯಾದ ಕಾರ್ಯಕರ್ತರನ್ನು ಪತ್ತೆಹಚ್ಚುವ ಪ್ರಯತ್ನಗಳನ್ನು ಚುರುಕುಗೊಳಿಸಿದೆ. ಇದನ್ನೂ ಓದಿ: ಕನ್ನಡಿಗರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು: ರಾಮಲಿಂಗಾ ರೆಡ್ಡಿ