ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ (Narendra Modi) ಬಗ್ಗೆ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ (Bilawal Bhutto) ನೀಡಿದ ವಿವಾದಿತ ಹೇಳಿಕೆಗೆ ಭಾರತದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಪಾಕ್‌ನ ಮತ್ತೊಬ್ಬ ಸಚಿವರು, ಭಾರತಕ್ಕೆ ಪರಮಾಣು ಬಾಂಬ್ (Nuclear War) ದಾಳಿಯ ಬೆದರಿಕೆ ಹಾಕಿದ್ದಾರೆ.
ಬೋಲ್ ನ್ಯೂಸ್ ಜೊತೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ನಾಯಕಿ ಶಾಜಿಯಾ ಮಾರಿ (Shazia Marri), ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ – ಪಾಕ್ ಸಚಿವರಿಗೆ ಮುಸ್ಲಿಂ ಧರ್ಮಗುರು ತಿರುಗೇಟು
Advertisement
Advertisement
ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಸ್ಥಿತಿಯು ಮೌನವಾಗಿರಲು ಅಲ್ಲ. ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ’’ ಎಂದು ಎಚ್ಚರಿಕೆ ನೀಡಿದ್ದಾರೆ.
Advertisement
ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್‌ನ ಕಟುಕ ಜೀವಂತವಾಗಿದ್ದಾನೆ: ಮೋದಿ ವಿರುದ್ಧ ಪಾಕ್ ವಿದೇಶಾಂಗ ಸಚಿವ ವಿವಾದಿತ ಹೇಳಿಕೆ
Advertisement
ಶಾಜಿಯಾ ಭಾರತಕ್ಕೆ ಬೆದರಿಕೆ ಹಾಕಿದ್ದು, ಮೋದಿ ಸರ್ಕಾರ ಹೋರಾಡಿದರೆ ಉತ್ತರ ಸಿಗುತ್ತದೆ ಎಂದು ಹೇಳಿದ್ದಾರೆ. ಪಾಕಿಸ್ತಾನಕ್ಕೆ ಪರಮಾಣು ರಾಷ್ಟ್ರದ ಸ್ಥಾನಮಾನ ನೀಡಿ ಸುಮ್ಮನಿರಲು ಆಗಿಲ್ಲ. ಪಾಕಿಸ್ತಾನಕ್ಕೂ ಹೇಗೆ ಉತ್ತರಿಸಬೇಕು ಎಂಬುದು ಗೊತ್ತಿದೆ ಎಂದು ಹೇಳಿದ್ದಾರೆ.
ನೀವು ಪಾಕಿಸ್ತಾನದ ವಿರುದ್ಧ ಪದೇ ಪದೇ ಆರೋಪಗಳನ್ನು ಮಾಡುತ್ತಿದ್ದರೆ, ಪಾಕಿಸ್ತಾನವು ಮೌನವಾಗಿ ಕೇಳಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.