ನವದೆಹಲಿ: ಪಾಕಿಸ್ತಾನದ (Pakistan) ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ (Bilawal Bhutto Zardari) ಅವರು ಗೋವಾದಲ್ಲಿ (Goa) ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ (Shanghai Cooperation Organisation) ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಮೇ ತಿಂಗಳಲ್ಲಿ ಭಾರತಕ್ಕೆ (India) ಭೇಟಿ ನೀಡಲಿದ್ದಾರೆ.
ಜರ್ದಾರಿ ಅವರು ಮೇ 4 ಹಾಗೂ 5 ರಂದು ಗೋವಾದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ನಿರ್ವಹಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ (Mumtaz Zahrah Baloch) ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಲೆಕ್ಷನ್ ಹೊತ್ತಿನಲ್ಲೇ ಡಿಕೆಶಿಗೆ ಶಾಕ್ – CBI ತನಿಖೆಗೆ ಕೋರ್ಟ್ ಅಸ್ತು
Advertisement
ಸಭೆಯಲ್ಲಿನ ನಮ್ಮ ಭಾಗವಹಿಸುವಿಕೆಯು ಎಸ್‍ಸಿಓ ಚಾರ್ಟರ್ ಹಾಗೂ ಅದರ ಪ್ರಕ್ರಿಯೆಗಳಿಗೆ ಪಾಕಿಸ್ತಾನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಪಾಕಿಸ್ತಾನವು ತನ್ನ ವಿದೇಶಾಂಗ ನೀತಿಯ ಆದ್ಯತೆಗಳಲ್ಲಿ ಪ್ರಾದೇಶಿಕವಾಗಿ ನೀಡುವ ಪ್ರಾಮುಖ್ಯತೆಯನ್ನು ಅದು ಎತ್ತಿ ಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ.
Advertisement
Advertisement
2014ರಲ್ಲಿ ನವಾಜ್ ಷರೀಫ್ (Nawaz Sharif) ಭಾರತಕ್ಕೆ ಭೇಟಿ ನೀಡಿದ್ದರು. ಅವರ ನಂತರ ಪಾಕಿಸ್ತಾನದ ಯಾವ ನಾಯಕರೂ ಭೇಟಿ ನೀಡಿರಲಿಲ್ಲ. ಈಗ ಜರ್ದಾರಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.
Advertisement
ಪ್ರಸ್ತುತ ಶಾಂಘೈ ಸಹಕಾರ ಸಂಸ್ಥೆ ಅಧ್ಯಕ್ಷ ಸ್ಥಾನವನ್ನು ಹೊಂದಿರುವ ಭಾರತವು, ಜನವರಿಯಲ್ಲಿ ಚೀನಾದ ನೂತನ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಸೇರಿದಂತೆ ಸದಸ್ಯ ರಾಷ್ಟ್ರಗಳಿಗೆ ಆಹ್ವಾನವನ್ನು ಕಳುಹಿಸಿತ್ತು.
ಪ್ರಸ್ತುತ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದೇವೆ. ನಾವು ಪಾಕಿಸ್ತಾನ ಸೇರಿದಂತೆ ಎಲ್ಲಾ ಸದಸ್ಯ ದೇಶಗಳಿಗೆ ಆಹ್ವಾನಗಳನ್ನು ನೀಡಿದ್ದೇವೆ. ಅವರೆಲ್ಲರೂ ಕಾರ್ಯಕ್ರಮಗಳಿಗೆ ಹಾಜರಾಗಬೇಕೆಂದು ನಿರೀಕ್ಷಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಫೆಬ್ರವರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ನಡೆಸಿದ್ದ ದಾಳಿ ಹಾಗೂ ಪಾಕಿಸ್ತಾನದ ಬಾಲಾಕೋಟ್‍ನಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ತೀವ್ರ ಹದಗೆಟ್ಟಿತ್ತು. ನಂತರ 2019ರ ಆಗಸ್ಟ್‌ನಲ್ಲಿ ಭಾರತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಅಧಿಕಾರವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ ಸಂಬಂಧಗಳು ಮತ್ತಷ್ಟು ಹಾಳಾಗಿತ್ತು.
ಎಂಟು ಸದಸ್ಯ ರಾಷ್ಟ್ರಗಳ ಶಾಂಘೈ ಸಹಕಾರ ಸಂಸ್ಥೆಯು ತನ್ನ ಸದಸ್ಯ ರಾಷ್ಟ್ರಗಳ ನಡುವೆ ಆರ್ಥಿಕ, ರಾಜಕೀಯ ಮತ್ತು ಮಿಲಿಟರಿ ಸಹಕಾರವನ್ನು ಉತ್ತೇಜಿಸುವ ಉದ್ದೇಶದಿಂದ ಎರಡು ದಶಕಗಳ ಹಿಂದೆ ಸ್ಥಾಪಿಸಲಾದ ಪ್ರಮುಖ ಪ್ರಾದೇಶಿಕ ಶಕ್ತಿ ಕೇಂದ್ರವಾಗಿದೆ. ಇದನ್ನೂ ಓದಿ: ಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವದಹನ