ಟ್ರಂಪ್‌ಗೆ `ಎಕ್ಸ್‌’ನಲ್ಲಿ ಪಾಕ್ ಪ್ರಧಾನಿ ಅಭಿನಂದನೆ – ಬ್ಯಾನ್ ಮಾಡಿದ್ದ ಸೋಶಿಯಲ್‌ ಮೀಡಿಯಾ ವೇದಿಕೆ ಬಳಸಿದ್ದಕ್ಕೆ ಜನರ ಆಕ್ಷೇಪ

Public TV
2 Min Read
Shehbaz Sharif

ಇಸ್ಲಾಮಾಬಾದ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ 2ನೇ ಬಾರಿಗೆ ಗೆಲುವು ಸಾಧಿಸಿದ ಡೊನಾಲ್ಡ್‌ ಟ್ರಂಪ್‌ (Donald Trump0 ಅವರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ಎಕ್ಸ್‌ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ನಿಷೇಧಿತ ಎಕ್ಸ್‌ ಖಾತೆ ಪ್ರವೇಶಿಸಲು ಪ್ರಧಾನಿಗಳು ವಿಪಿಎನ್‌ ಬಳಸಿದ್ದಾರೆ. ಇದರಿಂದ ಕಾನೂನು ಉಲ್ಲಂಘನೆಯಾಗಿದೆ ಎಂದು ಜನರಿಂಧ ಆಕ್ರೋಶ ವ್ಯಕ್ತವಾಗಿದೆ.

ಷರೀಫ್‌ ಎಕ್ಸ್‌ನಲ್ಲಿ ಹೇಳಿದ್ದೇನು?
ಇತ್ತೀಚೆಗೆ ಅಧ್ಯಕೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಟ್ರಂಪ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಪಾಕಿಸ್ತಾನ-ಅಮೆರಿಕದ (Pakistan – USA) ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 25ಕ್ಕೂ ಅಧಿಕ ಸಾವು

Shehbaz Sharif

ಈ ವರ್ಷಾರಂಭದಲ್ಲಿ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅತ್ತಾವುಲ್ಲಾ ತರಾರ್, ರಾಷ್ಟ್ರೀಯ ಭದ್ರತಾ ಸಮಸ್ಯೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ʻಎಕ್ಸ್ʼ ನಿಷೇಧಿಸುವುದಾಗಿ ಘೋಷಿಸಿದ್ದರು. ಏಕೆಂದರೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA)ಗೆ ಸೇರಿದ ಭಯೋತ್ಪಾದಕರು ದೇಶವಿರೋಧಿ ಚಟುವಟಿಕೆಗಳನ್ನು ಹರಡಲು ʻಎಕ್ಸ್‌ʼ ವೇದಿಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಇಂತಹ ಪರಿಸ್ಥಿತಿ ಇರುವಾಗ ಪಿಎಂ ಷರೀಫ್ ಅಭಿನಂದನೆ ಸಲ್ಲಿಸಲು ಎಕ್ಸ್‌ ಖಾತೆ ಬಳಸಿದ್ದು, ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡೊನಾಲ್ಡ್‌ ಟ್ರಂಪ್‌ಗೆ ರಷ್ಯಾ ಅಧ್ಯಕ್ಷ ಪುಟಿನ್‌ ವಿಶ್‌ – ಮಾತುಕತೆಗೆ ಸಿದ್ಧ ಎಂದ ನಾಯಕರು 

Donald Trump 3

ಪಾಕ್‌ ಮತ್ತು ಯುಎಸ್‌ ಹಳೆಯ ಸ್ನೇಹಿತರು:
ಪ್ರಧಾನಿ ಶೆಹಬಾಜ್‌ ಷರೀಫ್‌ ಅವರ ಎಕ್ಸ್‌ ವಿವಾದ ನಡುವೆ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಮಾತನಾಡಿ, ಪಾಕಿಸ್ತಾನ ಮತ್ತು ಯುಎಸ್ ಹಳೆಯ ಸ್ನೇಹಿತರು ಮತ್ತು ಪಾಲುದಾರರು. ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ನಮ್ಮ ಸಂಬಂಧವು ದಶಕಗಳಷ್ಟು ಹಳೆಯದಾಗಿದೆ. ಟ್ರಂಪ್ ಅವರ 2ನೇ ಅವಧಿಯು ಇಸ್ಲಾಮಾಬಾದ್‌-ಚೀನಾ ಜೊತೆಗಿನ ಸಂಬಂಧದ ಮೇಲೆ ಪರಿಣಾಮ ಬೀರಲ್ಲ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷದ ಚುನಾವಣೆಯಲ್ಲಿ ಕೆನಡಾ ಪ್ರಧಾನಿ ಟ್ರುಡೋಗೆ ಸೋಲು : ಮಸ್ಕ್‌ ಭವಿಷ್ಯ

Share This Article