- ಪಾಕಿಸ್ತಾನ ಸರ್ಕಾದಿಂದಲೇ 25 ಕೋಟಿ ನೆರವು
ಇಸ್ಲಾಮಾಬಾದ್: 2025ರ ಮೇ 7 ರಂದು ಭಾರತ ನಡೆಸಿದ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಧ್ವಂಸಗೊಂಡಿದ್ದ ಜೈಶ್ ಎ ಮೊಹಮ್ಮದ್ (JeM) ಉಗ್ರ ಸಂಘಟನೆಯ ಪ್ರಧಾನ ಕಚೇರಿ 15 ತಿಂಗಳ ಬಳಿಕ ಮತ್ತೆ ತಲೆ ಎತ್ತಿದೆ.
#Pakistan didn’t just fail to dismantle #JaishEMohammed, it rebuilt their #Bahawalpur headquarters with 25cr of state money.
Marble floors over craters. Fresh paint over rubble.
State patronage of terrorism, plain and simple.#CrossBorderTerrorism #OperationSindoor pic.twitter.com/pAQEdzU1SL— ManhasAnupama (@manhas_anupama) August 23, 2026
ಬಹಾವಲ್ಪುರದಲ್ಲಿ ಜೈಶ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ಮೊದಲಿನಂತೆಯೇ ನಿರ್ಮಾಣ ಮಾಡಲಾಗಿದ್ದು, ಅದರ ಫೋಟೋ ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ (Social Media) ಹರಿದಾಡುತ್ತಿವೆ. ಇದರ ಹಿಂದೆ ಪಾಕ್‌ನ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಹಾಗೂ ಪಾಕಿಸ್ತಾನ ಸರ್ಕಾರ ಇದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: ಪಾಕ್ ಹುಟ್ಟಡಗಿಸಲು ಐಎಎಫ್ ಬಳಸಿದ್ದು 50ಕ್ಕಿಂತಲೂ ಕಡಿಮೆ ಶಸ್ತ್ರಾಸ್ತ್ರ: ವಾಯುಪಡೆಯ ಉಪಮುಖ್ಯಸ್ಥ ಮಾಹಿತಿ
ಪಾಕ್ ಸರ್ಕಾರದಿಂದ 25 ಕೋಟಿ ನೆರವು
ಗುಪ್ತಚರ ವರದಿಗಳ ಪ್ರಕಾರ, ಪಾಕಿಸ್ತಾನ ಸರ್ಕಾರವೇ ಜೈಶ್ ಪ್ರಧಾನ ಕಚೇರಿ ನಿರ್ಮಿಸಲು ಹಂತ ಹಂತವಾಗಿ 25 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಸುಮಾರು 11 ಕೋಟಿ ರೂ.ಗಳನ್ನು ಮರ್ಕಜ್ ಸಭಾನಲ್ಲಾದ ಕೇಂದ್ರ ಸಭಾಂಗಣ ಸ್ಥಾಪಿಸುವುದಕ್ಕೇ ಖರ್ಚು ಮಾಡಲಾಗಿದೆ ಎಂದು ಹೇಳಲಾಗಿದೆ. ಕಚೇರಿಯ ಮುಖ್ಯ ಸಭಾಂಗಣವನ್ನು ಮೊದಲಗಿಂತಲೂ ಹೆಚ್ಚು ವಿಸ್ತಾರವಾಗಿ ನಿರ್ಮಿಸಲಾಗಿದೆ. ನೆಲಹಾಸಿಗೆ ಅಮೃತ ಶಿಲೆಗಳನ್ನ ಬಳಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ಹಿಂದೆ ಬಹವಾಲ್ಪುರ್‌ನಲ್ಲಿದ್ದ ಜೈಶ್ ಉಗ್ರ ಸಂಘಟನೆಯ ಈ ಕಚೇರಿಯಲ್ಲಿ ಮದರಸಾ ನಡೆಸಲಾಗುತ್ತಿತ್ತು. ಉಗ್ರ ಸಂಘಟನೆಗೆ ನೇಮಕಾತಿಗಳನ್ನೂ ಇಲ್ಲಿ ನಡೆಸಲಾಗುತ್ತಿತ್ತು. ಜೊತೆಗೆ ಯೋಜನಾ ಸೌಲಭ್ಯ ಸೇರಿದಂತೆ ಬಹು ಕಾರ್ಯಗಳನ್ನು ಇಲ್ಲಿ ನಿರ್ವಹಿಸಲಾಗುತ್ತಿತ್ತು. ಇದನ್ನೂ ಓದಿ: ಆಪರೇಷನ್ ಸಿಂಧೂರಕ್ಕೆ ಜೈಶ್ ನೆಲೆಗಳು ಉಡೀಸ್ – ಪುನರ್ ನಿರ್ಮಾಣಕ್ಕೆ ನಿಧಿ ಕೋರಿದ ಉಗ್ರ ಸಂಘಟನೆ
ʻಸಿಂಧೂರʼ – ಭಾರತದ ಪ್ರತೀಕಾರ
ಏಪ್ರಿಲ್ 22ರ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಮೇ 7ರ ತಡರಾತ್ರಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ರಾತ್ರೋ ರಾತ್ರಿ ನಡೆಸಿದ್ದ ದಾಳಿಯಲ್ಲಿ ನಿಷೇಧಿತ ಮೂರು ಉಗ್ರ ಸಂಘಟನೆಗಳಾದ ಜೈಶ್ ಎ ಮೊಹಮ್ಮದ್, ಲಷ್ಕರ್ ಎ ತೈಬಾ (LET) ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಪ್ರಧಾನ ಕಚೇರಿಗಳು ಧ್ವಂಸವಾಗಿದ್ದವು. ಪಾಕಿಸ್ತಾನ ಮತ್ತು ಪಾಕ್ ಅಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಭಾರತೀಯ ವಾಯು ಸೇನೆ (IAF) ದಾಳಿ ನಡೆಸಿತ್ತು. ಭಾರತ ಧ್ವಂಸ ಮಾಡಿರುವ ಈ ಉಗ್ರರ (Terrorist) ನೆಲೆಗಳು ಮೋಸ್ಟ್ ಡೇಂಜರಸ್ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿತ್ತು. ಅದಕ್ಕಾಗಿ ಭಾರತೀಯ ಸೇನೆಯು ನಾಗರಿಕರು ಮತ್ತು ಸೇನೆಯನ್ನ ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನ ಗುರಿಯಾಗಿಸಿ ದಾಳಿ ನಡೆಸಿತ್ತು.
