ನವದೆಹಲಿ: ಮುಂದೆ ಶಾಂತಿ ಮಂತ್ರ, ಹಿಂದೆ ಕುತಂತ್ರ ಮಾಡುತ್ತಿರುವ ಪಾಕಿಸ್ತಾನದ ಅಸಲಿ ಬಣ್ಣವನ್ನು ಅಲ್ಲಿನ ಮಾಜಿ ಅಧ್ಯಕ್ಷರೇ ಬಿಚ್ಚಿಟ್ಟಿದ್ದಾರೆ. ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್‍ಐ ಭಾರತದ ಮೇಲೆ ದಾಳಿ ನಡೆಸಲು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯನ್ನು ಬಳಸಿಕೊಳ್ಳುತ್ತಿತ್ತು ಎಂದು ಮಾಧ್ಯಮವೊಂದರ ಸಂದರ್ಶನದಲ್ಲಿ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನೀಡಿರುವ ಹೇಳಿಕೆ ಈಗ ಭಾರಿ ಸದ್ದು ಮಾಡುತ್ತಿದೆ.
Advertisement
ಹೌದು, ಬುಧವಾರದಂದು ಪಾಕಿಸ್ತಾನದ ಪತ್ರಕರ್ತರೊಬ್ಬರು ದೂರವಾಣಿ ಮೂಲಕ ಪರ್ವೇಜ್ ಮಷರಫ್ ಅವರ ಸಂದರ್ಶನ ನಡೆಸಿದ್ದರು. ಈ ವೇಳೆ ಮುಷರಫ್ ಅವರು ಪಾಕಿಸ್ತಾನದ ನಿಜ ಸ್ವರೂಪವನ್ನು ಬಯಲು ಮಾಡಿದ್ದಾರೆ. “ನನ್ನ ಅಧಿಕಾರವಧಿಯಲ್ಲಿ ಪಾಕ್‍ನ ಗುಪ್ತಚರ ಇಲಾಖೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಸಹಾಯ ಪಡೆದು ಭಾರತದ ಮೇಲೆ ದಾಳಿ ನಡೆಸುತ್ತಿತ್ತು. ಈಗ ಈ ಉಗ್ರ ಸಂಘಟನೆಯ ವಿರುದ್ಧ ತೆಗೆದುಕೊಂಡಿರುವ ನಿರ್ಧಾರ ನಿಜಕ್ಕೂ ಸ್ವಾಗತಾರ್ಹ” ಎಂದು ಹೇಳಿದ್ದಾರೆ.
Advertisement
Pakistan intelligence used JeM for carrying out attacks in India during my tenure, says Pervez Musharraf
Read @ANI Story | https://t.co/JcReB7yMlM pic.twitter.com/L9zyZzzaVW
— ANI Digital (@ani_digital) March 7, 2019
Advertisement
1999-2008ರ ಅವಧಿಯಲ್ಲಿ ನೀವು ಅಧ್ಯಕ್ಷರಾಗಿದ್ದೀರಿ. ನಿಮ್ಮ ಅಧಿಕಾರದಲ್ಲಿ ನೀವು ಯಾಕೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ ಅಂತ ಪ್ರಶ್ನಿಸಿದಕ್ಕೆ, ಆಗಿನ ಚಿತ್ರಣವೇ ಬೇರೆಯಾಗಿತ್ತು. ಆಗ ಭಾರತ ಹಾಗೂ ಪಾಕಿಸ್ತಾನ ಎರಡೂ ರಾಷ್ಟ್ರಗಳು ಒಬ್ಬರ ಮೇಲೊಬ್ಬರು ರಹಸ್ಯವಾಗಿ ದಾಳಿ ನಡೆಯುತಿತ್ತು. ನಮ್ಮ ದೇಶದ ಗುಪ್ತಚರ ಇಲಾಖೆಗಳು ಕೂಡ ಭಾಗಿಯಾಗಿತ್ತು. ಆದರಿಂದ ಜೈಷ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆಗಲಿಲ್ಲ ಎಂದು ಉತ್ತರಿಸಿದ್ದಾರೆ.
Advertisement
ಫೆ. 14ರಂದು ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40ಕ್ಕೂ ಹೆಚ್ಚು ಮಂದಿ ಭಾರತೀಯ ಯೋಧರು ಮೃತಪಟ್ಟಿದ್ದರು. ಈ ದಾಳಿಯನ್ನು ಮೌಲಾನ ಮಸೂದ್ ಅಜಾರ್ ಮುಖ್ಯಸ್ಥನಾಗಿರು ಜೈಷ್ ಉಗ್ರ ಸಂಘಟನೆಯೇ ನಡೆಸಿರುವುದಾಗಿ ಒಪ್ಪಿಕೊಂಡಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv