ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಪಾಕಿಸ್ತಾನಕ್ಕೆ ಚುನಾವಣೆಯ ಅತಂತ್ರ ತೀರ್ಪಿನಿಂದ ಮತ್ತೊಂದು ಹೊಡೆತ ಬಿದ್ದಿದೆ. ಇತ್ತ ಪಕ್ಷಗಳು ಬಹುಮತಕ್ಕಾಗಿ ನಾಯಕರನ್ನು ಒಗ್ಗೂಡಿಸಲು ಮುಂದಾಗಿದ್ದು, ಕುದುರೆ ವ್ಯಾಪಾರದ ಪರಿಸ್ಥಿತಿ ಎದುರಾಗಿದೆ.
ಜೈಲಿನಲ್ಲಿರುವ ಇಮ್ರಾನ್ ಖಾನ್‌ಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲಾಗಿತ್ತು. ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಅವರದೇ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇನ್ಸಾಫ್ (ಪಿಟಿಐ) ಅನ್ನು ಬೆಂಬಲಿಸುವ ಸ್ವತಂತ್ರ ಅಭ್ಯರ್ಥಿಗಳು 101 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಆದರೆ ಸರ್ಕಾರ ರಚನೆಗೆ ಬೇಕಾದ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿದೆ. ಇದನ್ನೂ ಓದಿ: ಪಾಕ್ ಚುನಾವಣಾ ಫಲಿತಾಂಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಅಭ್ಯರ್ಥಿಗಳು
Advertisement
Advertisement
ಗುರುವಾರ ಸಂಜೆ ಮತದಾನ ಮುಗಿದ ಸುಮಾರು 60 ಗಂಟೆಗಳ ನಂತರ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಯಿತು. ಪಾಕಿಸ್ತಾನ ಚುನಾವಣಾ ಆಯೋಗವು, ಇಂಟರ್ನೆಟ್ ಸಮಸ್ಯೆಯು ವಿಳಂಬಕ್ಕೆ ಕಾರಣವಾಗಿದೆ. ಇದರಿಂದಾಗಿ ಮತದಾನ ಕೇಂದ್ರಗಳು ಫಲಿತಾಂಶ ರವಾನಿಸಲು ತೊಂದರೆ ಎದುರಿಸುತ್ತಿವೆ ಎಂದು ತಿಳಿಸಿದೆ.
Advertisement
ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್), ಸೇನೆಯ ಬೆಂಬಲ ಹೊಂದಿದೆ. 266 ಸ್ಥಾನಗಳ ಅಸೆಂಬ್ಲಿಯಲ್ಲಿ ಕೇವಲ 73 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನಗಳನ್ನು ಗೆದ್ದಿದೆ. ಇದನ್ನೂ ಓದಿ: ಲಂಡನ್ ಪ್ಲಾನ್ ವಿಫಲವಾಗಿದೆ- ಫಲಿತಾಂಶ ಘೋಷಣೆಗೂ ಮುನ್ನ ಇಮ್ರಾನ್ ವಿಜಯದ ಭಾಷಣ
Advertisement
ಖಾನ್ ಮತ್ತು ಮಾಜಿ ಪ್ರಧಾನಿ ನವಾಜ್ ಷರೀಫ್ ಇಬ್ಬರೂ ಶನಿವಾರ ತಮ್ಮ ವಿಜಯ ಘೋಷಿಸಿಕೊಂಡಿದ್ದರು. ಮುಂದಿನ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬುದು ಅನಿಶ್ಚಿತತೆಯಿಂದ ಕೂಡಿದೆ.