– ಬಾಲಿವುಡ್ ನಟ – ನಟಿಯರನ್ನ ಉದಾಹರಣೆ ನೀಡಿ ರಾಷ್ಟ್ರಪತಿಗಳಿಗೆ ಕ್ಷಮಾಧಾನ ಅರ್ಜಿ
ಲಕ್ನೋ: ಪಬ್‌ಜಿ (PUBG) ಪ್ರಿಯಕರನಿಗಾಗಿ ಅಕ್ರಮವಾಗಿ ಪ್ರವೇಶಿಸಿರುವ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ (Seema Haider) ಭಾರತದಲ್ಲೇ ಉಳಿಯಲು ಅವಕಾಶ ನೀಡುವಂತೆ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ.
ತಾನು ಎಂದೂ ಕಾಣದ ಪ್ರೀತಿಯನ್ನು ನನ್ನ ಪತಿ ಸಚಿನ್ ಮೀನಾ ಹಾಗೂ ಅವರ ತಂದೆ-ತಾಯಿಯಿಂದ ಕಂಡಿದ್ದೇನೆ. ತನ್ನ ನಾಲ್ವರು ಮಕ್ಕಳೊಂದಿಗೆ ಭಾರತದಲ್ಲೇ ಉಳಿಯಲು ಅವಕಾಶ ನೀಡಬೇಕು ಎಂದು ರಾಷ್ಟ್ರಪತಿ ಅವರಿಂದ ಮೌಖಿಕ ವಿಚಾರಣೆಗೆ ಒತ್ತಾಯಿಸಿದ್ದಾರೆ. ಸೀಮಾ ಹೈದರ್ ಪರ ವಕೀಲ ಎ.ಪಿ ಸಿಂಗ್ ಸಲ್ಲಿಸಿದ 38 ಪುಟಗಳ ಅರ್ಜಿಯಲ್ಲಿ ಅನೇಕ ಬಾಲಿವುಡ್ ನಟ-ನಟಿಯರನ್ನ ಉದಾಹರಣೆಯಾಗಿ ನೀಡಿದ್ದಾರೆ.
Advertisement
Advertisement
ಭಾರತದ ಸಂಸ್ಕೃತಿಯ ಉದ್ದೇಶ ವಸುದೈವ ಕುಟುಂಬಕಂ (ಜಗತ್ತು ಒಂದೇ ಕುಟುಂಬ) ಎಂಬಂತೆ ತನ್ನನ್ನು ಗಂಡನ ಮನೆಯಲ್ಲೇ ಉಳಿಯಲು ಅವಕಾಶ ಮಾಡಿಕೊಡಬೇಕು. ಸೀಮಾ ಮದುವೆಯಾಗುವುದಕ್ಕೂ ಮುನ್ನವೇ ಸ್ವಇಚ್ಛೆಯಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಅರ್ಜಿದಾರರಿಗೆ ಭಾರತಕ್ಕೆ ಬರಲು ವೀಸಾ ಸಿಕ್ಕಿಲ್ಲದಿದ್ದರಿಂದ ನೇಪಾಳ ವೀಸಾ ತೆಗೆದುಕೊಂಡು ಭಾರತಕ್ಕೆ ಬಂದಿದ್ದಾರೆ. ಇಸ್ಲಾಂ ಧರ್ಮವನ್ನ ತೊರೆದಿದ್ದಾರೆ. ಕಠ್ಮಂಡುವಿನ ಪವಿತ್ರ ದೇವಾಲಯ ಭಗವಾನ್ ಪಶುಪತಿ ನಾಥ ಮಂದಿರದಲ್ಲಿ ಹಿಂದೂ ವಿಧಿ ವಿಧಾನಗಳ ಪ್ರಕಾರ ಸಚಿನ್ ಮೀನಾ ಅವರನ್ನ ವಿವಾಹವಾಗಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮೋದಿ ಜೀ, ಯೋಗಿ ಜೀ ನನ್ನನ್ನ ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಬೇಡಿ – ಸೀಮಾ ಹೈದರ್ ಮನವಿ
Advertisement
Advertisement
ಪ್ರಸಿದ್ಧ ಗಾಯಕ ಅದ್ನಾನ್ ಸಾಮಿ (Adnan Sami) ದೇಶದಲ್ಲಿ ದೀರ್ಘಕಾಲ ನೆಲೆಸಿರುವ ಅವರಿಗೆ ಭಾರತದ ಪೌರತ್ವ ನೀಡಲಾಗಿದೆ. ಬಾಲಿವುಡ್ ನಟಿ ಆಲಿಯಾ ಭಟ್ (Alia Bhatt) ಭಾರತವು ವಿಶ್ವದ ಇತರ ದೇಶಗಳಂತೆ ದ್ವಿಪೌರತ್ವವನ್ನ ನೀಡದ ಕಾರಣ ಭಾರತದಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ (Akshay Kumar) ಕೆನಡಾ ಪೌರತ್ವವನ್ನ ಪಡೆದು ಭಾರತಲ್ಲಿ ನೆಲೆಸಿದ್ದಾರೆ. ಆದ್ದರಿಂದ ತಮ್ಮನ್ನೂ ಭಾರತಲ್ಲೇ ಉಳಿಯಲು ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಸೀಮಾ ಹೈದರ್ ತನ್ನನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ
Web Stories