ಬಲೂಚಿಸ್ತಾನ್: ಪಾಕಿಸ್ತಾನದ (Pakistan) ಬಲೂಚಿಸ್ತಾನ್ ಮುಸಾಖೆಲ್ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು ಕನಿಷ್ಠ 23 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಭಯೋತ್ಪಾದಕರು ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿಸಲು ಒತ್ತಾಯಿಸಿ, ಅವರ ಗುರುತುಗಳನ್ನು ಪರಿಶೀಲಿಸಿದ ನಂತರ ಗುಂಡು ಹಾರಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದ.ಕೊರಿಯಾ ಆಟಗಾರರ ಜೊತೆ ಸೆಲ್ಫಿ – ಕ್ರೀಡಾಪಟುಗಳ ವಿರುದ್ಧ ಕ್ರಮಕ್ಕೆ ಮುಂದಾದ ಉ.ಕೊರಿಯಾ
Advertisement
ಮುಸಖೇಲ್‌ನ ರಾರಶಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಅಂತರ-ಪ್ರಾಂತೀಯ ಹೆದ್ದಾರಿಯನ್ನು ತಡೆದು ಪ್ರಯಾಣಿಕರನ್ನು ಬಸ್‌ಗಳಿಂದ ಕೆಳಗಿಳಿಸಿದರು ಎಂದು ಸಹಾಯಕ ಕಮಿಷನರ್ ಮುಸಖೈಲ್ ನಜೀಬ್ ಕಾಕರ್ ಉಲ್ಲೇಖಿಸಿ ಡಾನ್ ವರದಿ ಮಾಡಿದೆ. ಇದನ್ನೂ ಓದಿ: ಫುಟ್‌ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್ – ಮೂವರ ದುರ್ಮರಣ
Advertisement
Advertisement
ಮೃತರು ಪಂಜಾಬ್ (Panjab) ಮೂಲದವರು ಎಂದು ಗುರುತಿಸಲಾಗಿದೆ. ಇದರ ಜೊತೆಗೆ ಉಗ್ರರು 10 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇಲ್ಲಿಯವರೆಗೆ ಯಾವುದೇ ಗುಂಪು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಘಟನೆಯನ್ನು ಖಂಡಿಸಿರುವ ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಮೃತರ ಕುಟುಂಬಗಳಿಗೆ ಸಹಾನುಭೂತಿ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ಸ್ಥಾಪನೆ: ಅಮಿತ್ ಶಾ ಘೋಷಣೆ
Advertisement
ಪಾಕಿಸ್ತಾನದ ಫೆಡರಲ್ ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್, ಮುಸಖೈಲ್ ಬಳಿ ಮುಗ್ಧ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಭಯೋತ್ಪಾದಕರ ಕ್ರೂರತೆಯನ್ನು ತೋರಿಸಿದೆ. ಭಯೋತ್ಪಾದಕರು ಮತ್ತು ಅವರ ಸಹಾಯಕರನ್ನು ತಪ್ಪಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆ: ಇಂದು ಬೆಳಗ್ಗೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿ ಹಿಂಪಡೆದ ಬಿಜೆಪಿ
ಸುಮಾರು ನಾಲ್ಕು ತಿಂಗಳ ಹಿಂದೆ ಇದೇ ರೀ ತಿಯ ಕ್ರೂರ ಘಟನೆ ನಡೆದಿತ್ತು. ಏಪ್ರಿಲ್‌ನಲ್ಲಿ(April) ಒಂಬತ್ತು ಪ್ರಯಾಣಿಕರನ್ನು ನೋಶ್ಕಿ ಬಳಿ ಬಸ್‌ನಿಂದ ಬಲವಂತವಾಗಿ ಹೊರ ಕರೆದು ಬಂದೂಕುಧಾರಿಗಳು ಐಡಿ ತಪಾಸಣೆಯನ್ನು ಮಾಡಿ, ಗುರುತನ್ನು ಪರಿಶೀಲಿಸಿದ ಬಳಿ ಹತ್ಯೆ ಮಾಡಿದ್ದರು ಎಂದು ಡಾನ್ ವರದಿ ಮಾಡಿದೆ. ಇದನ್ನೂ ಓದಿ: ಕೀಬೋರ್ಡ್‌ನಲ್ಲಿ ಡಾಲರ್ ಬದಲು ರೂಪಿ ಚಿಹ್ನೆ ಯಾಕಿಲ್ಲ – ಓಲಾ ಸಿಇಒ ಪ್ರಶ್ನೆ