ಇಸ್ಲಾಮಾಬಾದ್: ಇನ್ಮುಂದೆ ವಿಮಾನದ (AirCraft) ಕ್ಯಾಬಿನ್ ಸಿಬ್ಬಂದಿ ಸೂಕ್ತವಾದ ಒಳಉಡುಪುಗಳನ್ನು ಧರಿಸಲೇಬೇಕು ಎಂದು ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯು (PIA) ಆದೇಶಿಸಿದೆ.
ಈ ಆದೇಶವು ವಿಚಿತ್ರ ಹಾಗೂ ವಿಲಕ್ಷಣ ಎಂದೇ ಅನ್ನಿಸಬಹುದು. ಆದರೆ ಕ್ಯಾಬಿನ್ ಸಿಬ್ಬಂದಿಗೆ ಡ್ರೆಸ್ಸಿಂಗ್ (Dress) ಸೆನ್ಸ್ ತುಂಬಾನೇ ಮುಖ್ಯ. ಇಲ್ಲವಾದಲ್ಲಿ ಸಂಸ್ಥೆಯ ಬಗ್ಗೆ ಪ್ರಯಾಣಿಕರು ನಕಾರಾತ್ಮಕ ಧೋರಣೆ ತಾಳುತ್ತಾರೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದೆ. ಈ ಹೊಸ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತನ್ನ ವಿಮಾನ ಸಿಬ್ಬಂದಿಗೆ ಕೇಳಿಕೊಂಡಿದೆ. ಇದನ್ನೂ ಓದಿ: ಕಿಡ್ನಿ ಕಸಿ ಮಾಡಿಸಿಕೊಂಡು 4 ವರ್ಷದ ಬಳಿಕ ಮಗುವಿಗೆ ಜನ್ಮ ನೀಡಿದ ಮಹಿಳೆ
Advertisement
Advertisement
ಕೆಲ ಕ್ಯಾಬಿನ್ ಸಿಬ್ಬಂದಿ ಇಂಟರ್‌ಸಿಟಿ ಪ್ರಯಾಣ ಮಾಡುವಾಗ, ಹೋಟೆಲ್‌ಗಳಲ್ಲಿ ಉಳಿದುಕೊಳ್ಳುವಾಗ ಮತ್ತು ವಿವಿಧ ಭೇಟಿಗಳ ಸಂದರ್ಭದಲ್ಲಿ ತಮ್ಮಿಚ್ಛೆಯಂತೆ ಉಡುಗೆ ಧರಿಸುತ್ತಾರೆ. ಇಂತಹ ಡ್ರೆಸ್ಸಿಂಗ್ ಸೆನ್ಸ್ ನೋಡುಗರಲ್ಲಿ ಮುಜುಗರ ಉಂಟುಮಾಡುತ್ತದೆ. ಅಷ್ಟೇ ಅಲ್ಲ, ಸಂಸ್ಥೆಯ ಬಗ್ಗೆ ಪ್ರಯಾಣಿಕರಲ್ಲಿ ತಪ್ಪು ಗ್ರಹಿಕೆಗೆ ಈಡುಮಾಡುತ್ತದೆ. ಆದ್ದರಿಂದ ಪುರುಷರೇ ಆಗಲಿ ಮಹಿಳೆಯರೇ ಆಗಲಿ ಸೂಕ್ತ ಒಳಉಡುಪು ಮತ್ತು ಸರಳವಾದ ಉಡುಪುಗಳನ್ನು ಧರಿಸಬೇಕು. ಈ ಧರಿಸುವಿಕೆ ನಮ್ಮ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ನೈತಿಕತೆಗೆ ಅನುಗುಣವಾಗಿರಬೇಕು. ಈ ಕುರಿತು ಅಧಿಕಾರಿಗಳು ಗಮನಿಸಬೇಕು ಎಂದು ಪಿಐಎ ಪ್ರಧಾನ ವ್ಯವಸ್ಥಾಪಕ ಅಮೀರ್ ಬಶೀರ್ (Aamir Bashir) ಹೇಳಿದ್ದಾರೆ. ಇದನ್ನೂ ಓದಿ: ಪ್ರೀತಿಸಿದವಳಿಂದ ಕಪಾಳಮೋಕ್ಷ – ಅವಮಾನ ಸಹಿಸಲಾರದೇ ಪ್ರಿಯಕರ ಆತ್ಮಹತ್ಯೆ
Advertisement
Advertisement
ಪಿಐಎ ಪಾಕಿಸ್ತಾನದ (Pakistan) ಅತಿದೊಡ್ಡ ವಿಮಾನಯಾನ ಸಂಸ್ಥೆಯಾಗಿದ್ದು, 30 ವಿಮಾನಗಳನ್ನ ಲಾಂಚ್ ಮಾಡಿದೆ. ಪ್ರತಿದಿನ 100 ವಿಮಾನಗಳು ಕಾರ್ಯಾಚರಣೆ ನಡೆಸಲಿದ್ದು, ಏಷ್ಯಾ, ಯುರೋಪ್, ಮಧ್ಯಪ್ರಾಚ್ಯ ಮತ್ತು ಉತ್ತರ ಅಮೆರಿಕಾ ಸೇರಿದಂತೆ 18 ದೇಶೀಯ ಸ್ಥಳಗಳು ಹಾಗೂ 25 ಅಂತರರಾಷ್ಟ್ರೀಯ ಸ್ಥಳಗಳಿಗೆ ಪ್ರಯಾಣಿಸುತ್ತದೆ.