ಕಾಬೂಲ್: ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದ ಮೇಲೆ ಪಾಕಿಸ್ತಾನಿ ವಿಮಾನಗಳು ವೈಮಾನಿಕ ದಾಳಿಯನ್ನು ನಡೆಸಿವೆ. ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ೩೦ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನಿ ವಿಮಾನಗಳು ಖೋಸ್ಟ್ ಪ್ರಾಂತ್ಯದ ಸ್ಪರ್ರಾ ಜಿಲ್ಲೆಯ ಪ್ರದೇಶಗಳಾದ ಮಿರ್ಪರ್, ಮಾಂಡೆ, ಶೈದಿ ಮತ್ತು ಕೈ ಗ್ರಾಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ ಎಂದು ತಾಲಿಬಾನ್ ಪೊಲೀಸ್ ಮುಖ್ಯಸ್ಥರ ವಕ್ತಾರು ತಿಳಿಸಿದ್ದಾರೆ. ಇದನ್ನೂ ಓದಿ: ಈ ಕಾಂಗ್ರೆಸ್‍ನವರು ದರಿದ್ರ ನನ್ಮಕ್ಕಳು, ಅವರ ಜೊತೆ ಹೋಗಬಾರದಿತ್ತು: ನಂಜೇಗೌಡ
ಶುಕ್ರವಾರ ಗೋರ್ಬ್ಜ್ ಜಿಲ್ಲೆಯ ಮಾಸ್ಟರ್ಬೆಲ್ ಪ್ರದೇಶದಲ್ಲಿ ಪಾಕಿಸ್ತಾನ ಮತ್ತು ತಾಲಿಬಾನ್ ಪಡೆಗಳ ಮಧ್ಯೆ ಘರ್ಷಣೆ ನಡೆದಿದೆ. ಮಾಧ್ಯಮ ವರದಿಗಳು ಮತ್ತು ಹಲವಾರು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಶುಕ್ರವಾರ ರಾತ್ರಿ ಅಫ್ಘಾನಿಸ್ತಾನದ ಪೂರ್ವ ಕುನಾರ್ ಮತ್ತು ಆಗ್ನೇಯ ಖೋಸ್ಟ್ ಪ್ರಾಂತ್ಯಗಳ ಎರಡು ಪ್ರದೇಶಗಳಲ್ಲಿ ಪಾಕಿಸ್ತಾನಿ ಪಡೆಗಳು ವೈಮಾನಿಕ ದಾಳಿ ನಡೆಸಿವೆ ಎಂದು ತಿಳಿಸಿವೆ. ಇದನ್ನೂ ಓದಿ: ಪಾಲಕ್ಕಾಡ್‍ನಲ್ಲಿ RSS ಮುಖಂಡ ಹತ್ಯೆ
ಪಾಕಿಸ್ತಾನ ಸರ್ಕಾರ ಮತ್ತು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯ ಇದುವರೆಗೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.