ಇಸ್ಲಾಮಾಬಾದ್: ಪೊಲೀಸ್ ಮುಖ್ಯಸ್ಥರ ಕಚೇರಿಗೆ (Police Chief’s Office) ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿದ ಘಟನೆ ಪಾಕಿಸ್ತಾನದ (Pakistan) ಕರಾಚಿಯಲ್ಲಿ (Karachi) ನಡೆದಿದೆ.
ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಕರಾಚಿಯ ಶೇರಿಯಾ ಫೈಸಲ್‍ನಲ್ಲಿರುವ ಪೊಲೀಸ್ ಮುಖ್ಯಸ್ಥರ ಕಚೇರಿಯ ಮೇಲೆ 8 ಉಗ್ರರು ದಾಳಿ ನಡೆಸಿದ್ದು, ಇಂದು (ಶುಕ್ರವಾರ) ರಾತ್ರಿ 10 ಗಂಟೆಯವರೆಗೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ.
Advertisement
Advertisement
ಘಟನೆ ಹಿನ್ನೆಲೆಯಲ್ಲಿ ಕರಾಚಿ ಪೊಲೀಸರು ಹಾಗೂ ಪಾಕಿಸ್ತಾನ ರೇಂಜರ್‌ಗಳು ಪ್ರದೇಶವನ್ನು ಸುತ್ತುವರೆದಿದ್ದಾರೆ. ದಾಳಿಗೆ 8 ಉಗ್ರರು ಹ್ಯಾಂಡ್ ಗ್ರೆನೇಡ್ ಹಾಗೂ ಬಂದೂಕುಗಳನ್ನು ಬಳಸಿದ್ದಾರೆ. ಘಟನೆ ವೇಳೆ ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವೇಳೆ ಕಿರಿಕ್ – ಇಬ್ಬರ ಹತ್ಯೆಯಲ್ಲಿ ಅಂತ್ಯ
Advertisement
Advertisement
ಸಿಂಧ್ ಮುಖ್ಯಮಂತ್ರಿ ಮುರಾದ್ ಅಲಿ ಶಾ ಅವರು ಘಟನೆಗೆ ಸಂಬಂಧಿಸಿ ತಮ್ಮ ವಲಯಗಳಿಂದ ಸಿಬ್ಬಂದಿಯನ್ನು ಕಳುಹಿಸಲು ಸಂಬಂಧಿತ ಡಿಐಜಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಪೊಲೀಸ್ ಮುಖ್ಯಸ್ಥರ ಕಚೇರಿಯ ಮೇಲಿನ ದಾಳಿಯನ್ನು ಸ್ವೀಕಾರಾರ್ಹವಲ್ಲ. ಹೆಚ್ಚುವರಿ ಐಜಿ ಕಚೇರಿಯ ಮೇಲಿನ ನಡೆದ ದಾಳಿಯ ಹಿಂದಿನ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ತಿಳಿಸಿದರು. ಇದನ್ನೂ ಓದಿ: ಆಮ್ ಆದ್ಮಿಯಿಂದ ತುರುವೇಕೆರೆಯಲ್ಲಿ ಟೆನ್ನಿಸ್ ಕೃಷ್ಣ ಸ್ಪರ್ಧೆ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k