ಇಸ್ಲಾಮಾಬಾದ್: ಮುಂಬೈ ದಾಳಿಯ (Mumbai Attack) ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸೋದರ ಮಾವ ಮತ್ತು ನಿಷೇಧಿತ ಜಮಾತ್-ಉದ್-ದವಾ ಉಪ ಮುಖ್ಯಸ್ಥ ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ( Abdul Rehman Makki) ಶುಕ್ರವಾರ ಲಾಹೋರ್‌ನಲ್ಲಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾನೆ.
ಕಳೆದ ಕೆಲವು ದಿನಗಳಿಂದ ಮಧುಮೇಹ, ಅನಾರೋಗ್ಯದಿಂದ ಬಳಲುತ್ತಿದ್ದ ಅಬ್ದುಲ್ ರಹಮಾನ್ ಮಕ್ಕಿ ಲಾಹೋರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇಂದು (ಡಿ.27) ಮುಂಜಾನೆ ಮಕ್ಕಿ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದ ಮೇಲೆ ಪಾಕ್ ಏರ್‌ಸ್ಟ್ರೈಕ್, 15 ಮಂದಿ ಸಾವು
ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸಿನ ನೆರವು ಒದಗಿಸುತ್ತಿದ್ದ ಈತನಿಗೆ 2020 ರಲ್ಲಿ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.
2023 ರಲ್ಲಿ ಮಕ್ಕಿಯನ್ನು ವಿಶ್ವಸಂಸ್ಥೆಯು ಜಾಗತಿಕ ಭಯೋತ್ಪಾದಕ ಘೋಷಿಸಿ ಆತನ ಸ್ವತ್ತುಗಳ ಜಪ್ತಿ ಮಾಡಿ ಪ್ರಯಾಣ ನಿಷೇಧ ಹೇರಿತ್ತು.