ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ವಿರುದ್ಧ ವಿಶ್ವಸಂಸ್ಥೆಗೆ ಪಾಕಿಸ್ತಾನ ದೂರು ಸಲ್ಲಿಸಿದೆ.
ಸದ್ಯ ಪ್ರಿಯಾಂಕ ಯೂನಿಸೆಫ್‍ನ ಸೌಹಾರ್ದಯುತ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಪ್ರಿಯಾಂಕರನ್ನು ರಾಯಭಾರಿ ಸ್ಥಾನದಿಂದ ತೆಗೆಯುವಂತೆ ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವ ಶಿರೀನ್ ಮಝಾರಿ ವಿಶ್ವಸಂಸ್ಥೆಗೆ ಪತ್ರ ಬರೆದಿದ್ದಾರೆ.
Advertisement
Sent letter to UNICEF chief regarding UN Goodwill Ambassador for Peace Ms Chopra pic.twitter.com/PQ3vwYjTVz
— Shireen Mazari (@ShireenMazari1) August 21, 2019
Advertisement
ಪ್ರಿಯಾಂಕ ಚೋಪ್ರಾ ಅವರು ಕಾಶ್ಮೀರದ ಬಗ್ಗೆ ಭಾರತ ಸರ್ಕಾರ ಕೈಗೊಂಡಿರುವ ನಿರ್ಧಾರದ ಕುರಿತು ತಮ್ಮ ನಿಲುವನ್ನು ಬಹಿರಂಗವಾಗಿ ತಿಳಿಸಿದ್ದಾರೆ. ಭಾರತೀಯ ಸಚಿವರು ಪಾಕಿಸ್ತಾನಕ್ಕೆ ನೀಡಿರುವ ನ್ಯೂಕ್ಲಿಯರ್ ಬೆದರಿಕೆಯನ್ನು ಬೆಂಬಲಿಸಿದ್ದಾರೆ. ಈ ಎಲ್ಲ ವಿಚಾರಗಳು ಶಾಂತಿ ಹಾಗೂ ಸದ್ಭಾವನೆಗೆ ವಿರುದ್ಧವಾಗಿವೆ. ಅಲ್ಲದೆ ವಿಶ್ವಸಂಸ್ಥೆಯ ನಿಯಮಗಳಿಗೂ ವಿರುದ್ಧವಾಗಿವೆ. ಹೀಗಾಗಿ ಪ್ರಿಯಾಂಕ ಚೋಪ್ರಾ ಅವರನ್ನು ರಾಯಭಾರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಮಝಾರಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಇದನ್ನು ಓದಿ: ‘ಜೈ ಹಿಂದ್’ ಎಂದ ಪ್ರಿಯಾಂಕ ಚೋಪ್ರಾ ವಿರುದ್ಧ ಪಾಕ್ ಗರಂ
Advertisement
Jai Hind #IndianArmedForces ???????? ????????
— PRIYANKA (@priyankachopra) February 26, 2019
Advertisement
ಫೆ.26ರಂದು ಬಾಲಾಕೋಟ್ ಮೇಲೆ ಭಾರತೀಯ ವಾಯುಪಡೆ ನಡೆಸಿದ ಏರ್ ಸ್ಟ್ರೈಕ್ ನಂತರ ಅದೇ ದಿನ ಅವರು ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ. ಭಾರತೀಯ ಯುದ್ಧ ವಿಮಾನಗಳು ಬಾಲಕೋಟ್‍ನ ಜೈಶ್-ಇ-ಮೊಹಮ್ಮದ್ ಸಂಘಟನೆಯ ಟೆರರಿಸ್ಟ್ ಕ್ಯಾಂಪ್ ಮೇಲೆ ದಾಳಿ ನಡೆಸಿ, ಉಗ್ರರ ಅಡಗುದಾಣಗಳನ್ನು ಧ್ವಂಸಗೊಳಿಸಿದ್ದವು. ಇದಕ್ಕೆ ಪಾಕ್ ಪ್ರತಿಕ್ರಿಯಿಸಿ, ಭಾರತೀಯ ವಾಯು ಸೇನೆ ಖಾಲಿ ಜಾಗದಲ್ಲಿ ಬಾಂಬ್ ಹಾಕಿದೆ ಎಂದು ತಿಳಿಸಿತ್ತು. ಈ ವೇಳೆ ಪ್ರಿಯಾಂಕಾ ಚೋಪ್ರಾ ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದರು.