ನವದೆಹಲಿ: ಕಾಶ್ಮೀರದಲ್ಲಿ ನಡೆಯುತ್ತಿರುವ ಇತ್ತಿಚೀನ ದಾಳಿಗಳ ಹಿಂದೆ ಪಾಕಿಸ್ತಾನದ ಕೈವಾಡ ಇದೆ ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ವೀಡಿಯೋಯೊಂದನ್ನು ಬಿಡುಗಡೆ ಮಾಡಿರುವ ವಾಹಿನಿ ಈ ಸಾಕ್ಷ್ಯವನ್ನು ಪಾಕ್ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ವೀಡಿಯೋ ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ಮೂಲದ ಉಗ್ರರು ತರಬೇತಿ ನೀಡುತ್ತಿರುವ ಅಂಶ ಒಳಗೊಂಡಿದೆ. ಕಾಶ್ಮೀರದಲ್ಲಿ ಇತ್ತಿಚೆಗೆ ಬಂಧಿಸಲಾಗಿದ್ದ ಉಗ್ರನಿಂದ ವಶ ಪಡೆಸಿಕೊಂಡಿದ್ದ ಮೊಬೈಲ್‍ನಿಂದ ಈ ವೀಡಿಯೋ ಪಡೆಯಲಾಗಿದೆ ಎಂದು ವಾಹಿನಿ ಹೇಳಿದೆ. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ
Advertisement
Advertisement
ವಿಚಾರಣೆ ವೇಳೆ ಉಗ್ರನಿಂದ ಪೊಲೀಸರು ಮೊಬೈಲ್ ವಶಪಡಿಸಿಕೊಂಡಿದ್ದು ಆ ಮೊಬೈಲ್‍ನಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೇಗೆ ಲೋಡ್ ಮಾಡುವುದು, ಅದನ್ನು ಬಳಕೆ ಮಾಡುವುದು ಹೇಗೆ ಎಂದು ವೀಡಿಯೋ ಕಾಲ್ ಮೂಲಕ ತರಬೇತಿ ನೀಡಲಾಗುತ್ತಿತ್ತು ಎನ್ನಲಾಗಿದೆ. ಹೀಗೆ ತರಬೇತು ನೀಡುತ್ತಿರುವ ವ್ಯಕ್ತಿ ಜೈಶ್-ಎ-ಮೊಹಮ್ಮದ್ ಎಂಬ ಭಯೋತ್ಪಾದಕ ಸಂಘಟನೆಯವನು ಎಂದು ಹೇಳಲಾಗಿದೆ. ಇದನ್ನೂ ಓದಿ: ಜೈಲಿಗೆ ಹೋಗೋ ಸ್ಥಿತಿ ಬಂದರೆ ಹೋಗೋಕೆ ಸಿದ್ಧವಾಗಿದ್ದೇನೆ: ರಮೇಶ್ ಕುಮಾರ್
Advertisement
Advertisement
ಉಗ್ರರ ದಾಳಿ ಹೆಚ್ಚಾಗುತ್ತಿರುವ ಬೆನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರಕ್ಕೆ ತೆರಳಲು ಮುಂದಾಗಿದ್ದಾರೆ. ಅಕ್ಟೋಬರ್ 23-25 ವರೆಗೂ ಅವರು ಕಾಶ್ಮೀರದಲ್ಲಿ ಇರಲಿದ್ದು, ಭದ್ರತಾ ವ್ಯವಸ್ಥೆಗಳ ಬಗ್ಗೆ ಸಭೆಗಳನ್ನು ನಡೆಸಲಿದ್ದಾರೆ. ಅಮಿತ್ ಶಾ ಭೇಟಿ ಹಿನ್ನಲೆ ಈಗಾಗಲೇ ಭದ್ರತೆಯನ್ನು ಹೆಚ್ಚು ಮಾಡಲಾಗುತ್ತಿದ್ದು, ಜಮ್ಮು ಕಾಶ್ಮೀರ ಪ್ರಮುಖ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಕೋಬಿಂಗ್ ನಡೆಸಲಾಗುತ್ತಿದೆ. ಕಳೆದ ವಾರ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಂಬತ್ತು ಸೇನಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ನಿಮ್ಮಪ್ಪನ ಮನೆ ಆಸ್ತಿನಾ? – ರಮೇಶ್ ಕುಮಾರ್ ವಿರುದ್ಧ ಸುಧಾಕರ್ ವಾಗ್ದಾಳಿ