ಇಸ್ಲಾಮಾಬಾದ್: ತೋಶಾ-ಖಾನಾ ಪ್ರಕರಣದಲ್ಲಿ (Toshakhana Case) ಬಂಧನಕ್ಕೊಳಗಾಗಿದ್ದ ಪಾಕಿಸ್ತಾನ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರಿಗೆ ಪಾಕಿಸ್ತಾನ ಕೋರ್ಟ್ ಜಾಮೀನು ನೀಡಿದ್ದು, ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಇಸ್ಲಾಮಾಬಾದ್ ಹೈಕೋರ್ಟ್ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಅವರ ದೋಷಾರೋಪಣೆ ಮತ್ತು ತೋಶಾಖಾನಾ ಪ್ರಕರಣದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದೆ ಎಂದು ಡಾನ್ ನ್ಯೂಸ್ ವರದಿ ಮಾಡಿದೆ. ಇದನ್ನೂ ಓದಿ: ಇಮ್ರಾನ್ ಖಾನ್ ಬೆನ್ನಲ್ಲೇ ಪಾಕ್ ವಿದೇಶಾಂಗ ಮಾಜಿ ಸಚಿವ ಅರೆಸ್ಟ್ – ಅಜ್ಞಾತ ಸ್ಥಳಕ್ಕೆ ಶಿಫ್ಟ್
Advertisement
Advertisement
ತಮಗೆ ವಿಧಿಸಿರುವ ಜೈಲು ಶಿಕ್ಷೆಯ ವಿರುದ್ಧ ಮಾಜಿ ಪ್ರಧಾನಿ ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಅಮರ್ ಫಾರೂಕ್ ಮತ್ತು ನ್ಯಾಯಮೂರ್ತಿ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿ, ಜಾಮೀನು ನೀಡಿದೆ.
Advertisement
ಇಸ್ಲಾಮಾಬಾದ್‌ನ ವಿಚಾರಣಾ ನ್ಯಾಯಾಲಯವು ಪಾಕಿಸ್ತಾನದ ಚುನಾವಣಾ ಆಯೋಗ (ಇಸಿಪಿ) ಸಲ್ಲಿಸಿದ ಪ್ರಕರಣದಲ್ಲಿ ಇಮ್ರಾನ್ ಖಾನ್ ತಪ್ಪಿತಸ್ಥರೆಂದು ಘೋಷಿಸಿತ್ತು. ಅಲ್ಲದೇ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತು. ಈ ತೀರ್ಪಿನಿಂದಾಗಿ ಅವರು ಐದು ವರ್ಷಗಳ ಕಾಲ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದರು. ನಂತರ ಇಮ್ರಾನ್ ತನ್ನ ಶಿಕ್ಷೆಯ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅರೆಸ್ಟ್
Advertisement
ಉಡುಗೊರೆಯಾಗಿ ಪಡೆದ ಕೋಟ್ಯಂತರ ರೂ. ಮೌಲ್ಯದ ನೆಕ್ಲೆಸ್ ಅನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪವನ್ನು ಇಮ್ರಾನ್ ಎದುರಿಸಿದ್ದರು.
Web Stories