ಇಸ್ಲಾಮಾಬಾದ್: ಪಾಕಿಸ್ತಾನ ಪುರುಷರ ಕ್ರಿಕೆಟ್ ತಂಡವು (Pakistan Cricket Team) 2023ರ ವಿಶ್ವಕಪ್ ಟೂರ್ನಿಗೆ ಭಾರತಕ್ಕೆ ಪ್ರಯಾಣಿಸಲಿದೆ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ಖಚಿತಪಡಿಸಿದೆ.
2023ರ ಏಕದಿನ ವಿಶ್ವಕಪ್ (ICC World Cup 2023) ಟೂರ್ನಿಗಾಗಿ ಪಾಕಿಸ್ತಾನ ತಂಡವು ಭಾರತಕ್ಕೆ ಪ್ರಯಾಣಿಸಲಿದೆ. ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳು ಕ್ರೀಡೆಗೆ ಅಡ್ಡಿಯಾಗುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಪಂದ್ಯದಲ್ಲಿ ಪಾಕ್ ತಂಡ ಭಾರತದ ವಿರುದ್ಧ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಆದ್ರೆ ಅಕ್ಟೋಬರ್ 15 ರಂದು ನವರಾತ್ರಿ ಉತ್ಸವದ ಆರಂಭದ ದಿನ ಆಗಿರುವುದರಿಂದ ದಿನಾಂಕ ಬದಲಾಯಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾರು ಅಪಘಾತ – ಇಬ್ಬರು ಮಕ್ಕಳು ಸೇರಿ 6 ಮಂದಿ ನೇಪಾಳಿ ಪ್ರಜೆಗಳು ದುರ್ಮರಣ
Advertisement
Advertisement
ಕ್ರೀಡೆಯನ್ನು (Sports) ರಾಜಕೀಯದಿಂದೊಗೆ ಬೆರಸಬಾರದು ಎಂಬುದನ್ನ ಪಾಕಿಸ್ತಾನ ನಿರಂತರವಾಗಿ ಸಮರ್ಥಿಸಿಕೊಂಡಿದೆ. ಆದ್ದರಿಂದ ಮುಂಬರುವ ಐಸಿಸಿ ಟೂರ್ನಿಯಲ್ಲಿ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಲು ನಿರ್ಧರಿಸಿದೆ ಎಂದು ಹೇಳಿದೆ.
Advertisement
ಏಕದಿನ ಏಷ್ಯಾಕಪ್ (ODI AsiaCup) ಟೂರ್ನಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದ್ರೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ನಿರಾಕರಿಸಿತು. ಆದ್ದರಿಂದ ಶ್ರೀಲಂಕಾದಲ್ಲಿ ನಿಗದಿಯಾಗಿದೆ. ಭಾರತ ಕಠಿಣ ನಿರ್ಧಾರ ತೋರಿದ ಹೊರತಾಗಿಯೂ ಪಾಕಿಸ್ತಾನದ ಈ ನಿರ್ಧಾರ ತನ್ನ ಜವಾಬ್ದಾರಿಯನ್ನ ತೋರಿಸಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆ
Advertisement
ಕಳೆದ ಕೆಲವು ದಿನಗಳಲ್ಲಿ ಪಾಕಿಸ್ತಾನದ ಅಧಿಕಾರಿಗಳ ಸಮಿತಿ ಭಾರತಕ್ಕೆ ಭೇಟಿ ನೀಡಿತ್ತು. ಇಲ್ಲಿ ಪಾಕ್ ತಂಡಕ್ಕೆ ನೀಯೋಜಿಸಲಾದ ಭದ್ರತಾ ವ್ಯವಸ್ಥೆಯ ಬಗ್ಗೆ ಪರಿಶೀಲಿಸಲು ವಿವಿಧ ಸ್ಥಳಗಳಿಗೆ ಅಧಿಕಾರಿಗಳ ತಂಡ ಪ್ರಯಾಣಿಸಿತ್ತು. 2016ರಲ್ಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಈಡನ್ ಗಾರ್ಡನ್‌ನಲ್ಲಿ ಸೆಣಸಾಟ ನಡೆಸಿತ್ತು. ಆ ನಂತರ ಇದೇ ಮೊದಲಿಗೆ ಭಾರತಕ್ಕೆ ಪಾಕ್ ತಂಡ ಪ್ರಯಾಣಿಸುತ್ತಿದೆ.
ಭಾರತದಲ್ಲಿ ಪಾಕ್ ತಂಡದ ವೇಳಾಪಟ್ಟಿ ಹೀಗಿದೆ…
ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ
Web Stories