ಡೇಂಜರ್‌ನಲ್ಲಿದ್ದರೂ ದೆಹಲಿ-ಶ್ರೀನಗರ ಇಂಡಿಗೋ ವಿಮಾನಕ್ಕೆ ತನ್ನ ವಾಯುಸೀಮೆ ಬಳಸಲು ನಿರಾಕರಿಸಿದ ಪಾಕ್‌

Public TV
2 Min Read
IndiGo Flight 1

ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಗಾಳಿಯಲ್ಲಿ ತೀವ್ರ ಹವಾಮಾನ ಪ್ರಕ್ಷುಬ್ಧತೆ ಅನುಭವಿಸಿತು. ಈ ಸಂದರ್ಭದಲ್ಲಿ ಪ್ರಕ್ಷುಬ್ಧತೆ ತಪ್ಪಿಸಲು ಪಾಕ್‌ ವಾಯುಸೀಮೆ ಬಳಸಲು ಇಂಡಿಗೋ ಮಾಡಿದ್ದ ಮನವಿಯನ್ನು ಪಾಕಿಸ್ತಾನ ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

ಹೌದು… ಇಂಡಿಗೋ ವಿಮಾನವು ಪ್ರಕ್ಷುಬ್ಧತೆಯನ್ನು ತಪ್ಪಿಸಲು ಸ್ವಲ್ಪ ಸಮಯದವರೆಗೆ ಪಾಕಿಸ್ತಾನದ ವಾಯುಸೀಮೆ ಬಳಸಲು ಅನುಮತಿ ಕೋರಿತ್ತು. ಆದ್ರೆ ಲಾಹೋರ್‌ ವಾಯು ಸಂಚಾರ ನಿಯಂತ್ರಣವು ಈ ವಿನಂತಿಯನ್ನು ತಿರಸ್ಕರಿಸಿತು ಎನ್ನಲಾಗಿದೆ. ಇದನ್ನೂ ಓದಿ: ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

IndiGo Flight Damege

ಅಮೃತಸರದ ಬಳಿಕ ನಡೆಸುತ್ತಿರುವಾಗ ಅಸ್ಥಿರ ಹವಾಮಾನವನ್ನು ಗಮನಿಸಿದ ಪೈಲಟ್, ಸುರಕ್ಷತಾ ಕಾರಣಗಳಿಗಾಗಿ ತನ್ನ ವಾಯುಸೀಮೆ ಮೂಲಕ ಹಾರಾಟ ನಟಡೆಸಲು ಪಾಕಿಸ್ತಾನಿ ವಾಯು ಸಂಚಾರ ನಿಯಂತ್ರಣ ಸಂಪರ್ಕಿಸಿದರು. ಆದಾಗ್ಯೂ, ವಿನಂತಿಯನ್ನು ಪಾಕ್‌ ನಿರಾಕರಿಸಿತು. ಆದಾಗ್ಯೂ ವಿಮಾನವು ತನ್ನ ನಿಗದಿತ ಮಾರ್ಗದಲ್ಲಿ ತಲುಪಿ ಶ್ರೀನಗರದಲ್ಲಿ ಸುರಕ್ಷಿತವಾಗಿ ಲ್ಯಾಂಡ್‌ ಆಯಿತು. ಇದನ್ನೂ ಓದಿ: ಜ್ಯೋತಿಗೆ ಒಡಿಶಾ ಲಿಂಕ್ – ‘ಪಾಕ್‌ನಲ್ಲಿ ಒಡಿಶಾ ಹುಡುಗಿ’ ವೀಡಿಯೋ ಮಾಡಿದ್ದ ಯೂಟ್ಯೂಬರ್ ವಿಚಾರಣೆ

6E2142 ವಿಮಾನವು ಐದು ಸದಸ್ಯರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಯೋಗ ಸೇರಿದಂತೆ 227 ಮಂದಿಯನ್ನ ಹೊತ್ತೊಯ್ಯುತ್ತಿತ್ತು. ದೆಹಲಿಯಿಂದ ಹೊರಟು ಶ್ರೀನಗರ ಸಮೀಪಿಸುತ್ತಿದ್ದಾಗ ಆಲಿಕಲ್ಲು ಮಳೆಯಿಂದ ತೀವ್ರ ಹಾನಿಗೆ ಒಳಗಾಯಿತು. ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಡ್ಯಾಮೇಜ್‌ ಆಯಿತು. ಆದರೆ ಸಿಬ್ಬಂದಿ ಸಂಜೆ 6:30 ಕ್ಕೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾದರು. ವಿಮಾನ ಇಳಿದ ನಂತರ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

ವಿಮಾನದಲ್ಲಿದ್ದ ಎಲ್ಲ 227 ಮಂದಿಯೂ‌ ಸೇಫ್ ಆಗಿದ್ದಾರೆ. ಪೈಲಟ್‌ಗಳ‌ ಚಾಕಚಕ್ಯತೆಯಿಂದ ಎಲ್ಲ ಪ್ರಯಾಣಿಕರು ಸೇಫ್ ಆಗಿ ಬದುಕುಳಿದಿದ್ದಾರೆ. ವಿಮಾನದ ಮುಂಭಾಗ (Nose damage) ಭಾರೀ ಪ್ರಮಾಣದಲ್ಲಿ‌ ಹಾನಿಗೀಡಾಗಿದ್ದು, ಈ ಹಾನಿಯನ್ನು ನೋಡಿದವರು ಪ್ರಯಾಣಿಕರು ಪವಾಡಸದೃಶರಾಗಿ ಬದುಕುಳಿದಿದ್ದಾರೆ ಎನ್ನುವಷ್ಟು ಗಂಭೀರ ಪ್ರಮಾಣದಲ್ಲಿ ವಿಮಾನ ಹಾನಿಗೊಳಗಾಗಿದೆ. ಇದನ್ನೂ ಓದಿ: ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ

Share This Article