ಇಸ್ಲಾಮಾಬಾದ್: ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಗೆ ನಡೆದ ಚುನಾವಣೆಯಲ್ಲಿ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಿಎಂಎಲ್ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಷರೀಫ್ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಪಾಕ್ ನ್ಯಾಷನಲ್ ಅಸೆಂಬ್ಲಿ ಚುನಾವಣೆಯ ಮತ ಎಣಿಕೆ ಇಂದು (ಶುಕ್ರವಾರ) ನಡೆಯಿತು. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆಲುವಿನ ನಗೆ ಬೀರಿದ್ದಾರೆ. ತಮ್ಮ ರಾಜಕೀಯ ಪಕ್ಷವು ಮತಗಳಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸಮ್ಮಿಶ್ರ ಸರ್ಕಾರವನ್ನು ರಚಿಸುವ ಬಗ್ಗೆ ಚರ್ಚಿಸುವುದಾಗಿ ಅವರು ತಿಳಿಸಿದ್ದಾರೆ.
Advertisement
Advertisement
ಷರೀಫ್ ತಮ್ಮ ಪಕ್ಷ ಎಷ್ಟು ಸ್ಥಾನಗಳನ್ನು ಗೆದ್ದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಅಸೆಂಬ್ಲಿಯ 265 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಇನ್ನೂ ಕೆಲವು ಸ್ಥಾನಗಳಲ್ಲಿ ಎಣಿಕೆ ನಡೆಯುತ್ತಿದೆ.
Advertisement
ಚುನಾವಣಾ ಸಮಿತಿಯು ಪ್ರಕಟಿಸಿದ ಎಣಿಕೆಯಲ್ಲಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) 61 ಸ್ಥಾನಗಳನ್ನು ಗೆದ್ದಿದೆ ಎಂದು ತೋರಿಸಿದೆ. ಇದು ಸರ್ಕಾರ ರಚನೆಗೆ ಹಕ್ಕು ಸಾಧಿಸಲು ಬೇಕಾದ 133 ಸ್ಥಾನಗಳಿಗಿಂತ ಕಡಿಮೆಯಾಗಿದೆ.
Advertisement
ತಮ್ಮ ಪಕ್ಷಕ್ಕೆ ಅಗತ್ಯವಿರುವ ಸ್ಥಾನಗಳು ಬಂದಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಕುರಿತು ಚರ್ಚಿಸಲು ನಮ್ಮ ಪ್ರತಿನಿಧಿಗಳು, ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸೇರಿದಂತೆ ಇತರ ಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಷರೀಫ್ ತಿಳಿಸಿದ್ದಾರೆ.
ಪಾಕ್ ನ್ಯಾಷನಲ್ ಅಸೆಂಬ್ಲಿಯ 266 ಸ್ಥಾನಗಳ (ಮೀಸಲು ಕ್ಷೇತ್ರಗಳನ್ನು ಬಿಟ್ಟು) ಪೈಕಿ ಸದ್ಯ 265 ರಲ್ಲಿ ಚುನಾವಣೆ ನಡೆದಿದೆ. ಅಧಿಕಾರದ ಗದ್ದುಗೆ ಏರಲು ಯಾವುದೇ ಪಕ್ಷ 133 ಸ್ಥಾನಗಳನ್ನು ಗೆಲ್ಲಬೇಕಿದೆ.