ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ ತೋಷಖಾನಾ ಕೇಸ್‌ನಲ್ಲಿ (Toshakhana Case) ತಪ್ಪಿತಸ್ಥನೆಂದು ಸಾಬೀತಾಗಿದ್ದು ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನದ ರಾಜಕೀಯ ಪಕ್ಷವಾದ PTIನ ಅಧ್ಯಕ್ಷರೂ ಆಗಿದ್ದ ಇಮ್ರಾನ್ ಖಾನ್‌ರನ್ನ, ಲಾಹೋರ್‌ನಲ್ಲಿರುವ ಜಮಾನ್ ಪಾರ್ಕ್ ಮನೆಯಲ್ಲಿ ಬಂಧಿಸಲಾಗಿದೆ ಎಂದು ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷ ಟ್ವೀಟ್ ಮೂಲಕ ತಿಳಿಸಿದೆ.
ಲಾಹೋರ್‌ನಲ್ಲಿ ಬಂಧಿಸಿದ ಬಳಿಕ ರಾಜಧಾನಿ ಇಸ್ಲಾಮಾಬಾದ್‌ಗೆ ಕರೆತರಲಾಗಿದ್ದು, ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು (Islamabad Trial Court) 5 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರಿದೆ. ಈ ನಡುವೆ ಪಿಟಿಐ ಪ್ರಧಾನ ಕಾರ್ಯದರ್ಶಿ ಒಮರ್ ಅಯೂಬ್ ಖಾನ್, ಇಮ್ರಾನ್ ಖಾನ್ ಬಂಧನ ವಿರೋಧಿಸಿ ಶಾಂತಿಯುತ ಪ್ರತಿಭೆನಟಗೆ ಕರೆ ನೀಡಿದ್ದಾರೆ.
Advertisement
Advertisement
1992ರ ಪಾಕಿಸ್ತಾನ ವಿಶ್ವಕಪ್ ವಿಜೇತ ತಂಡದ ನಾಯಕ ಹಾಗೂ 70 ವರ್ಷದ ಹಿರಿಯ ರಾಜಕಾರಣಿ ಇಮ್ರಾನ್ ಖಾನ್, ಕೋಟ್ಯಂತರ ರೂ. ಮೌಲ್ಯದ ಉಡುಗೊರೆಯನ್ನ ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪದ ಮೇಲೆ ಅವರನ್ನ ಬಂಧಿಸಲಾಗಿತ್ತು. ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿನ ಪ್ರಕರಣವನ್ನ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಪಾಕಿಸ್ತಾನ ಸುಪ್ರೀಂ ಕೋರ್ಟ್ ಇಮ್ರಾನ್ ಖಾನ್ ಮನವಿಯನ್ನ ತಿರಸ್ಕರಿಸಿತ್ತು. ಇದನ್ನೂ ಓದಿ: ವಿಶ್ವದ ಅತಿಸಣ್ಣ ದೇಶ ಯಾವ್ದು..? ಎಲ್ಲಿದೆ ಗೊತ್ತಾ..? – ಅಚ್ಚರಿಯಾದ್ರೂ ಇದು ನಿಜ!
Advertisement
Advertisement
ಶನಿವಾರ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನ ತಪ್ಪಿತಸ್ಥ ಎಂದು ಘೋಷಿಸಿದೆ. ಇಸ್ಲಾಮಾಬಾದ್ ಮೂಲದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹೆಚ್ಚುವರಿ ನ್ಯಾಯಾಧೀಶ ಹುಮಾಯೂನ್ ದಿಲಾವರ್ ಅವರು ಖಾನ್‌ಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲರಾದಲ್ಲಿ ಇನ್ನೂ ಹೆಚ್ಚುವರಿ 6 ತಿಂಗಳು ಜೈಲಿನಲ್ಲಿ ಇರಿಸುವುದಾಗಿ ಹೇಳಿದ್ದಾರೆ.
ಪೊಲೀಸರಿಂದ ಬಿಗಿ ಭದ್ರತೆ:
ಇಮ್ರಾನ್ ಬಂಧನದ ನಂತರ ಅವರ ಮನೆಯ ಹೊರಗೆ ಭಾರೀ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಜೊತೆಗೆ ಜಮಾನ್ ಪಾರ್ಕ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಗಿಫ್ಟ್ ಆಗಿ ಬಂದ ನೆಕ್ಲೆಸ್‌ನ್ನು 18 ಕೋಟಿಗೆ ಮಾರಿದ್ದಕ್ಕೆ ಇಮ್ರಾನ್ ಖಾನ್ ವಿರುದ್ಧ ತನಿಖೆ
140ಕ್ಕೂ ಹೆಚ್ಚು ಕೇಸ್‌ಗಳಲ್ಲಿ ವಾಂಟೆಡ್:
ಮಾಜಿ ಕ್ರಿಕೆಟಿಗನೂ ಆಗಿರುವ ಇಮ್ರಾನ್ ಖಾನ್, ಭಯೋತ್ಪಾದನೆ, ಹಿಂಸಾಚಾರ, ಧರ್ಮನಿಂದನೆ, ಭ್ರಷ್ಟಾಚಾರ ಮತ್ತು ಕೊಲೆ ಆರೋಪಗಳು ಸೇರಿದಂತೆ ದೇಶಾದ್ಯಂತ 140ಕ್ಕೂ ಹೆಚ್ಚು ಕೇಸ್‌ಗಳನ್ನ ಎದುರಿಸುತ್ತಿದ್ದಾರೆ. ಕಳೆದ ಮೇ 9ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸೇನಾ ರೇಂಜರ್‌ಗಳಿಂದ ಬಂಧಿಸಲ್ಪಟ್ಟ ನಂತರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆದಿತ್ತು.
Web Stories