Connect with us

International

ಮತ್ತೊಮ್ಮೆ ತನ್ನ ಮಾನವನ್ನು ತಾನೇ ಹರಾಜು ಹಾಕಿದ ಪಾಕ್!

Published

on

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತೊಮ್ಮೆ ತನ್ನ ಮಾನವನ್ನು ತಾನೇ ಹರಾಜು ಹಾಕಿ ಸಾಮಾಜಿಕ ಜಾಲತಾಣದಲ್ಲಿ ನಗೆಪಾಟಲಿಗೆ ಗುರಿಯಾಗಿದೆ.

ಪಾಕಿಸ್ತಾನ ಸರ್ಕಾರ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ದೇಶದ ಪಾರಂಪರೆಯ ತಾಣಗಳ ವಿಡಿಯೋದಲ್ಲಿ ಅಫ್ಘಾನಿಸ್ತಾನದ ಮಸೀದಿಯನ್ನು ಪ್ರಕಟಿಸಿ ಎಡವಟ್ಟು ಮಾಡಿಕೊಂಡಿದೆ.

ಪಾಕ್ ಸರ್ಕಾರದ ಅಧಿಕೃತ ಟ್ವಿಟ್ಟರ್ ಖಾತೆ ಯಲ್ಲಿ ಒಂದು ವಿಡಿಯೋ ಅಪ್ಲೋಡ್ ಆಗಿತ್ತು. ಈ ಪಾರಂಪರೆಯ ತಾಣಗಳನ್ನು ವಿವರಿಸುವ ವಿಡಿಯೋ ಗೆ ದೇಶದ ನಾಗರಿಕತೆ, ಪರಂಪರೆ, ಸಂಸ್ಕೃತಿಯನ್ನು ತೋರಿಸುವ ಸುಂದರ ದೃಶ್ಯಗಳು ಎನ್ನುವ ಶೀರ್ಷಿಕೆಯನ್ನು ಹಾಕಿತ್ತು. ಆದರೆ ಈ ವಿಡಿಯೋದಲ್ಲಿ ಅಫ್ಘಾನಿಸ್ತಾನದ ಪ್ರಸಿದ್ಧ ಹಜರ್ ಅಲಿ ಮಸೀದಿಯ ಫೋಟೋವನ್ನು ತೋರಿಸಿತ್ತು. ಈ ಫೋಟೋ ನೋಡಿದ ಜನರು ಪಾಕ್ ಸರ್ಕಾರದ ಎಡವಟ್ಟನ್ನು ತೋರಿಸಿದ ಕೂಡಲೇ ಈ ವಿಡಿಯೋ ಖಾತೆಯಿಂದ ಈಗ ಡಿಲೀಟ್ ಆಗಿದೆ.

ಪಾಕ್ ಈ ರೀತಿ ಫೋಟೋ ಎಡವಟ್ಟು ಮಾಡುವುದು ಹೊಸದೆನಲ್ಲ. ಸೆಪ್ಟೆಂಬರ್ ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಪ್ರತಿನಿಧಿ ಮಲೇಹಾ ಲೋಧಿ ಭಾರತದ ಕಾಶ್ಮೀರದಲ್ಲಿ ಹೇಗೆ ಹಿಂಸಾಚಾರ ನಡೆಯುತ್ತಿದೆ ಎನ್ನುವುದನ್ನು ವಿಶ್ವಕ್ಕೆ ತೋರಿಸಲು ಪೆಲೆಟ್ ಗನ್‍ನಿಂದ ಗಾಯಗೊಂಡಿದ್ದ ಯುವತಿ ಫೋಟೋವನ್ನು ಪ್ರದರ್ಶಿಸಿದ್ದರು. ಆದರೆ ಈ ಫೋಟೋ ಗಾಜಾ ಯುದ್ಧ ಸಂದರ್ಭದಲ್ಲಿನ ಫೋಟೋ ಎಂದು ಮಾಧ್ಯಮಗಳು ಪ್ರಕಟಿಸುವ ಮೂಲಕ ಪಾಕ್ ನೈಜ ಬಣ್ಣವನ್ನು ಬಯಲು ಮಾಡಿತ್ತು. ಗಾಜಾ ಯುದ್ಧದ ಸಂದರ್ಭದಲ್ಲಿ ದಾವಿ ಅಬು ಜೊಮ್(17) ಯುವತಿ ಗಾಯಗೊಂಡಿದ್ದಳು. ಈ ಫೋಟೋವನ್ನು ಪಾಕ್ ಅಧಿಕಾರಿ ಪ್ರದರ್ಶಿಸಿದ ಬಳಿಕ ವಿಶ್ವದಾದ್ಯಂತ ಪಾಕ್ ವಿರುದ್ಧ ಟೀಕೆಗಳು ವ್ಯಕ್ತವಾಗಿತ್ತು.

 

Click to comment

Leave a Reply

Your email address will not be published. Required fields are marked *