– ಐಪಿಎಲ್‌ನಲ್ಲಿ ಪಾಕ್ ಆಟಗಾರರೂ ಆಡಬೇಕಂತೆ – ಪಾಕ್ ಅಭಿಮಾನಿಗಳ ಬಯಕೆ
ಇಸ್ಲಾಮಾಬಾದ್: ಇದೇ ಮಾರ್ಚ್ 22 ರಿಂದ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಗೊಳ್ಳುತ್ತಿದೆ. ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (CSK vs RCB) ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಚೆನ್ನೈನ ಚಿದಂಬರಂ (ಚೆಪಾಕ್) ಕ್ರಿಕೆಟ್ ಕ್ರೀಡಾಂಗಣದಲ್ಲಿ ಇತ್ತಂಡಗಳು ನಡುವೆ ಕಾದಾಟ ನಡೆಸಲಿವೆ.
No indian hv such dreams .. you guys plz stop dreaming 😴😂😂 wake up now https://t.co/EmraFXiIah
— Harbhajan Turbanator (@harbhajan_singh) March 15, 2024
Advertisement
ಈ ನಡುವೆ ಐಪಿಎಲ್‌ನಲ್ಲಿ (IPL) ತಮ್ಮ ದೇಶದ ಆಟಗಾರರು ಪಾಲ್ಗೊಳ್ಳಬೇಕು ಎಂದು ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಗಳು ಬಯಕೆ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿಯೇ ವಿಶೇಷ ಪೋಸ್ಟರ್‌ಗಳನ್ನು ತಾವೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಅವರೊಂದಿಗೆ ಪಾಕ್ ತಂಡದ ಮಾಜಿ ನಾಯಕ ಬಾಬರ್ ಆಜಂ (Babar Azam) ಇರಬೇಕು ಅನ್ನೋ ಬಯಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೆರ್ರಿ ಆಲ್‌ರೌಂಡರ್ ಆಟ – ಮುಂಬೈ ವಿರುದ್ಧ ಜಯ, ಪ್ಲೇ ಆಫ್‌ಗೆ ಆರ್‌ಸಿಬಿ
Advertisement
Advertisement
ಅಲ್ಲದೇ ಮುಂಬೈ ಇಂಡಿಯನ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಜೊತೆಗೆ ಶಾಹೀನ್ ಶಾ ಅಫ್ರಿದಿ, ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಧೋನಿಯೊಂದಿಗೆ ಮೊಹಮ್ಮದ್ ರಿಜ್ವಾನ್ ಅವರನ್ನು ನೋಡಲು ಬಯಸುತ್ತೇನೆ ಎಂದು ಅಭಿಮಾನಿಯೊಬ್ಬರು X ಖಾತೆಯಲ್ಲಿ ವಿಶೇಷ ಫೋಟೋಗಳೊಂದಿಗೆ ಹಂಚಿಕೊಂಡಿದ್ದಾರೆ. ಆದ್ರೆ ಪಾಕ್ ಅಭಿಮಾನಿಗಳ ಆಸೆಗೆ ಹರ್ಭಜನ್ ಸಿಂಗ್ ತಣ್ಣೀರು ಎರಚಿದ್ದಾರೆ. ಭಾರತೀಯರಿಗೆ ಅಂತಹ ಯಾವುದೇ ಕನಸುಗಳು ಇಲ್ಲ. ನೀವು ಕನಸು ಕಾಣೋದನ್ನ ನಿಲ್ಲಿಸಿ, ಈಗಲೇ ಎದ್ದೇಳಿ ಎಂದು ಟಾಂಗ್ ಕೊಟ್ಟಿದ್ದಾರೆ.
Advertisement
ಐಪಿಎಲ್ ಆರಂಭ ಯಾವಾಗ?
ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 22 ರಿಂದ ಆರಂಭವಾಗಲಿದೆ. ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಮೊದಲ 15 ದಿನಗಳು ಕಾಲ ನಡೆಯುವ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಮುಂದಿನ ವೇಳಾಪಟ್ಟಿ ಪ್ರಕಟಿಸುವುದಾಗಿ ಬಿಸಿಸಿಐ (BCCI) ಸ್ಪಷ್ಟಪಡಿಸಿದೆ. 2019ರ ಲೋಕಸಭಾ ಚುನಾವಣೆ ಅವಧಿಯಲ್ಲೂ ಇದೇ ವಿಧಾನ ಅನುಸರಿ ಎರಡು ಹಂತಗಳಲ್ಲಿ ಟೂರ್ನಿಯನ್ನು ನಡೆಸಲಾಗಿತ್ತು.
ಸದ್ಯ ಮಾ. 22ರಿಂದ ಏಪ್ರಿಲ್ 7ರ ತನಕ 21 ಪಂದ್ಯಗಳು ನಡೆಯಲಿದ್ದು, ಈ ಪೈಕಿ 4 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಪ್ರಾರಂಭವಾಗಲಿವೆ. ಡಬಲ್ ಹೆಡ್ಡರ್ ದಿನದಂದು ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಇದನ್ನೂ ಓದಿ: IPL 2024: ರಿಷಭ್ ಪಂತ್ ಸಂಪೂರ್ಣ ಫಿಟ್ – ಐಎಪಿಎಲ್‌ಗೆ ಬಿಸಿಸಿಐನಿಂದ ಗ್ರೀನ್ ಸಿಗ್ನಲ್
ಯಾರ ನಡುವೆ, ಯಾವ ದಿನ, ಎಲ್ಲಿ ಪಂದ್ಯ?
1. ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಮಾರ್ಚ್ 22 ಚೆನ್ನೈ,
2. ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 23, ಮೊಹಾಲಿ,
3. ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ರೈಸರ್ಸ್ ಹೈದರಾಬಾದ್, ಮಾರ್ಚ್ 23, ಕೋಲ್ಕತ್ತಾ
4. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಮಾರ್ಚ್ 24, ಜೈಪುರ
5. ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್, ಮಾರ್ಚ್ 24, ಅಹಮದಾಬಾದ್
6. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಾರ್ಚ್ 25, ಬೆಂಗಳೂರು
7. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 26, ಚೆನ್ನೈ
8. ಸನ್ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್, ಮಾರ್ಚ್ 27, ಹೈದರಾಬಾದ್
9. ಆರ್‌ಆರ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 28 ಜೈಪುರ
10. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಮಾರ್ಚ್ 29 ಬೆಂಗಳೂರು
11. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್, ಮಾರ್ಚ್ 30, ಲಕ್ನೋ
12. ಗುಜರಾತ್ ಟೈಟಾನ್ಸ್ vs ಸನ್ರೈಸರ್ಸ್ ಹೈದರಾಬಾದ್, ಮಾರ್ಚ್ 31, ಅಹಮದಾಬಾದ್
13. ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮಾರ್ಚ್ 31, ವಿಶಾಖಪಟ್ಟಣಂ
14. ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 1, ಮುಂಬೈ
15. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಏಪ್ರಿಲ್ 2, ಬೆಂಗಳೂರು
16. ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಏಪ್ರಿಲ್ 3, ವಿಶಾಖಪಟ್ಟಣಂ
17. ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಏಪ್ರಿಲ್ 4, ಅಹಮದಾಬಾದ್
18. ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಏಪ್ರಿಲ್ 5, ಹೈದರಾಬಾದ್
19. ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 6, ಜೈಪುರ
20. ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 7, ಮುಂಬೈ
21. ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, ಏಪ್ರಿಲ್ 7, ಲಕ್ನೋ