ಇಸ್ಲಾಮಾಬಾದ್: ಪಾಕಿಸ್ತಾನ (Pakistan Crisis) ಸರ್ಕಾರವು ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯನ್ನು ಲೀಟರ್‌ಗೆ 35 ರೂ. (ಪಾಕಿಸ್ತಾನ ರೂಪಾಯಿ- PKR) ಹೆಚ್ಚಿಸಿದೆ. ಇಂಧನ ಬೆಲೆಗಳು ಭಾನುವಾರದಿಂದಲೇ (ಜ.29) ಜಾರಿಗೆ ಬಂದಿದೆ.
ಪಾಕಿಸ್ತಾನದ ಹಣಕಾಸು ಸಚಿವ ಇಶಾಕ್ ದಾರ್ ಅವರು ಇಂಧನ ಬೆಲೆಗಳ ಏರಿಕೆ ಬಗ್ಗೆ ಘೋಷಣೆ ಮಾಡಿದ್ದಾರೆ. ಸೀಮೆಎಣ್ಣೆ ಮತ್ತು ಲೈಟ್ ಡೀಸೆಲ್ ಆಯಿಲ್ ಬೆಲೆಯನ್ನು ಲೀಟರ್‌ಗೆ 18 ರೂ. (PKR) ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಪೆಟ್ರೋಲ್ ಬೆಲೆ ಲೀಟರ್‌ಗೆ 249.80 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 262.80 ರೂ. ಪಿಆರ್‌ಕೆ ಇದೆ ಎಂದು ಪಾಕಿಸ್ತಾನದ ಹಣಕಾಸು ಸಚಿವಾಲಯವು ಟ್ವೀಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಆರ್ಥಿಕ, ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕ್‌ಗೆ ಮತ್ತೊಂದು ಸಂಕಷ್ಟ – ನಿಗೂಢ ಕಾಯಿಲೆಗೆ 18 ಸಾವು
Advertisement
Advertisement
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸೂಚನೆ ನೀಡಿದ ಬೆನ್ನಲ್ಲೇ ಈ ನಾಲ್ಕು ಉತ್ಪನ್ನಗಳ ಕನಿಷ್ಠ ಬೆಲೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಕಳೆದ ವಾರ ಪಾಕಿಸ್ತಾನದ ರೂಪಾಯಿ ಅಪಮೌಲ್ಯಕ್ಕೆ ಸಾಕ್ಷಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿ ಶೇ.11 ರಷ್ಟು ಏರಿಕೆಯಾಗುತ್ತಿದೆ ಎಂದು ಇಶಾಕ್ ದಾರ್ ಸ್ಪಷ್ಟಪಡಿಸಿದ್ದಾರೆ.
Advertisement
ಹೊಸ ಬೆಲೆಗಳ ಘೋಷಣೆಯು ಪೆಟ್ರೋಲ್ ಪೂರೈಕೆಯ ಕೊರತೆಯ ಬಗ್ಗೆ ಎದ್ದಿರುವ ವದಂತಿಗಳನ್ನು ಹೋಗಲಾಡಿಸುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 50 ರೂಪಾಯಿ ಏರಿಕೆಯಾಗಲಿದೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!
Advertisement
ಪೆಟ್ರೋಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗಲಿದೆ ಎಂಬ ವದಂತಿಗಳು ಪಾಕಿಸ್ತಾನದ ಹಲವು ಭಾಗಗಳಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಉದ್ದನೆಯ ಸರತಿಗೆ ಕಾರಣವಾಗಿತ್ತು. ಫೆಬ್ರವರಿ 1 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 45 ರಿಂದ 80 ರೂಪಾಯಿ ವರೆಗೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡಿತ್ತು.
ಗುಜ್ರಾನ್‌ವಾಲಾದಲ್ಲಿ ಶೇ.20 ರಷ್ಟು ಪೆಟ್ರೋಲ್ ಬಂಕ್‌ಗಳಲ್ಲಿ ಮಾತ್ರ ಪೆಟ್ರೋಲ್ ಲಭ್ಯವಿದೆ. ಪಾಕಿಸ್ತಾನದ ರಹೀಮ್ ಯಾರ್ ಖಾನ್, ಬಹವಲ್ಪುರ್, ಸಿಯಾಲ್ಕೋಟ್ ಮತ್ತು ಫೈಸಲಾಬಾದ್ ಪ್ರದೇಶಗಳಲ್ಲಿ ಇಂಧನ ಕೊರತೆಯಾಗಿದೆ ಎಂದು ಡಾನ್ ಜಿಯೋ ನ್ಯೂಸ್ ವರದಿ ಮಾಡಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k