ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿ ಕುರಿತು ಮಾತನಾಡುವ ಯಾವುದೇ ಹಕ್ಕು ಪಾಕಿಸ್ತಾನಕ್ಕೆ ಇಲ್ಲ ಎಂದು ಭಾರತ ತಿರುಗೇಟು ನೀಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಕುರಿತು ಪಾಕಿಸ್ತಾನದ ಟೀಕೆ ವ್ಯಕ್ತಪಡಿಸಿತ್ತು. ಟೀಕೆಗೆ ಪ್ರತಿಕ್ರಿಯಿಸಿರುವ ಭಾರತ, ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ ಎಂದು ಕುಟುಕಿದೆ. ಇದನ್ನೂ ಓದಿ: ಹಿಂಸಾಚಾರದಿಂದ ಯಾರಿಗೂ ಪ್ರಯೋಜನವಾಗಲ್ಲ: ಮೋಹನ್ ಭಾಗವತ್
Advertisement
Advertisement
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಾತನಾಡಿ, ಪ್ರಧಾನಿಗೆ ದೊರೆತ ಸ್ವಾಗತ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಆಗಿರುವ ಬದಲಾವಣೆಗಳು, ಭೇಟಿ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವಾಗಿದೆ ಎಂದು ಪಾಕಿಸ್ತಾನಕ್ಕೆ ಟಾಂಗ್ ಕೊಟ್ಟಿದ್ದಾರೆ.
Advertisement
ಜಮ್ಮು ಮತ್ತು ಕಾಶ್ಮೀರ ಭೇಟಿ ವೇಳೆ ಪ್ರಧಾನಿ ಮೋದಿ ಅವರಿಗೆ ಸಿಕ್ಕ ಸ್ವಾಗತ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ವಿಷಯಗಳು ನಿಮ್ಮ ಯಾವುದೇ ಪ್ರಶ್ನೆಗಳಿಗೆ ಬಹಳ ಸ್ಪಷ್ಟ ಉತ್ತರವಾಗಿದೆ ಎಂದು ನಾನು ಭಾವಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತನಾಡಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: PSI ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್
Advertisement
ಕಳೆದ ಭಾನುವಾರ ಪ್ರಧಾನಿ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ ಕೇಂದ್ರಾಡಳಿತ ಪ್ರದೇಶದಲ್ಲಿ ಸುಮಾರು 20,000 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದರು.