ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ: ವಿಕ್ರಂ ಮಿಸ್ರಿ

Public TV
2 Min Read
Capture 1

– ದಾಳಿ ಹಿಮ್ಮೆಟ್ಟಿಸಲು ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ: ವಿದೇಶಾಂಗ ಇಲಾಖೆ ಕಾರ್ಯದರ್ಶಿ

ನವದೆಹಲಿ: ಪಾಕಿಸ್ತಾನದಿಂದ (Pakistan) ಕದನ ವಿರಾಮ ಉಲ್ಲಂಘನೆಯಾಗಿದೆ. ಪಾಕ್‌ ಇದಕ್ಕೆ ಸಂಪೂರ್ಣ ಜವಾಬ್ದಾರಿ ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಂ ಮಿಸ್ರಿ (Vikram Misri) ಹೇಳಿದ್ದಾರೆ.

ಕದನ ವಿರಾಮ (Ceasefire) ಕುರಿತು ಮಾಹಿತಿ ನೀಡಿದ ವಿಕ್ರಂ ಮಿಶ್ರಿ, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಇಂದು ಸಂಜೆ ಒಪ್ಪಂದ ಮಾಡಿಕೊಳ್ಳಲಾಯಿತು. ಆದರೆ, ಕಳೆದ ಕೆಲವು ಗಂಟೆಗಳಿಂದ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ

ಭಾರತೀಯ ಸೇನೆಯು ಈ ಗಡಿ ಒಳನುಸುಳುವಿಕೆ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಸನ್ನಿವೇಶವನ್ನು ನಿಭಾಯಿಸುತ್ತಿದೆ. ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಒಳನುಸುಳುವಿಕೆ ಅತ್ಯಂತ ಖಂಡನೀಯ. ಪಾಕಿಸ್ತಾನ ಇದಕ್ಕೆ ಕಾರಣವಾಗಿದೆ. ಪಾಕಿಸ್ತಾನವು ಈ ಪರಿಸ್ಥಿತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಒಳನುಸುಳುವಿಕೆ ತಡೆಯಲು ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಒಪ್ಪಂದವಾದ ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಮತ್ತೆ ಉಲ್ಲಂಘಿಸಿ ಪಾಕಿಸ್ತಾನ ಬಾಲ ಬಿಚ್ಚಿದೆ. ಜಮ್ಮುವಿನ ಅಖ್ನೂರ್‌, ಕನಾಚಕ್‌, ಪರ್ಗ್ವಾಲ್‌, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ. ಇದನ್ನೂ ಓದಿ: ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್‌ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು

ಜಮ್ಮುವಿನ ಅಖ್ನೂರ್‌ನಲ್ಲಿ ಸಂಜೆ 7:45 ಕ್ಕೆ ಕದನ ವಿರಾಮ ಉಲ್ಲಂಘನೆಯಾದ ವರದಿಯಾಗಿದೆ. ಹಲವಾರು ಬಾರಿ ಜೋರಾಗಿ ಸ್ಫೋಟಗಳು ಕೇಳಿಬಂದವು. ಅಖ್ನೂರ್, ಕನಾಚಕ್, ಪರ್ಗ್ವಾಲ್ ಮತ್ತು ರಾಮನಗರ ವಲಯಗಳಲ್ಲಿ ಫಿರಂಗಿ ಶೆಲ್ ದಾಳಿ ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದ ಸುಮಾರು 2 ಗಂಟೆ 45 ನಿಮಿಷಗಳ ನಂತರ ಈ ಘಟನೆ ಸಂಭವಿಸಿದೆ. ಪಾಕ್‌ನ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇದನ್ನೂ ಓದಿ: ಕದನ ವಿರಾಮಕ್ಕೆ ಏನಾಯಿತು?: ಶ್ರೀನಗರದಲ್ಲಿ ಸ್ಫೋಟದ ಸದ್ದು ಕೇಳಿ ಜಮ್ಮು ಸಿಎಂ ಆತಂಕ

Share This Article