ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ದೇವಾಲಯ ಧ್ವಂಸ – ವಿಗ್ರಹ ವಿರೂಪಗೊಳಿಸಿದ ದುಷ್ಕರ್ಮಿಗಳು

Public TV
1 Min Read
pak hindu temple

ಇಸ್ಲಾಮಾಬಾದ್‌: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಕರಾಚಿಯಲ್ಲಿ ಕೆಲವು ದುಷ್ಕರ್ಮಿಗಳು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ ದೇವಾಲಯದಲ್ಲಿದ್ದ ವಿಗ್ರಹಗಳನ್ನು ವಿರೂಪಗೊಳಿಸಿದ್ದಾರೆ.

ಹಿಂದೂ ಅರ್ಚಕರ ನಿವಾಸವಿರುವ ಶ್ರೀ ಮಾರಿ ಮಾತಾ ಮಂದಿರದ ಮೇಲೆ ಬುಧವಾರ ತಡರಾತ್ರಿ ದಾಳಿ ನಡೆದಿದ್ದು, ಹಿಂದೂ ಸಮುದಾಯದವರಲ್ಲಿ ಭಯ ಹುಟ್ಟಿಸಿದೆ. ಇದನ್ನೂ ಓದಿ: ಯಾವುದೇ ದೇಶ ನಮಗೆ ಹಣ ನೀಡುತ್ತಿಲ್ಲ, ಆದರೆ ಭಾರತ ನೀಡುತ್ತಿದೆ: ಲಂಕಾ ಪ್ರಧಾನಿ

ಗುಂಪೊಂದು ಅರ್ಚಕರ ಮನೆಯ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ. ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ಪ್ರತಿಷ್ಠಾಪಿಸಲು ಕೆಲವು ದಿನಗಳ ಹಿಂದೆ ಅರ್ಚಕರು ವಿಗ್ರಹಗಳನ್ನು ತಂದಿದ್ದರು.

ದಾಳಿ ಮಾಡಿದವರು ಯಾರು ಮತ್ತು ಯಾಕೆ ಮಾಡಿದರು ಎಂಬುದು ನಮಗೆ ಗೊತ್ತಿಲ್ಲ. ಮೋಟಾರು ಸೈಕಲ್‌ಗಳಲ್ಲಿ ಬಂದ ಆರರಿಂದ ಎಂಟು ವ್ಯಕ್ತಿಗಳು ಸಂಕೀರ್ಣದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಐದರಿಂದ ಆರು ಅಪರಿಚಿತ ಶಂಕಿತರು ದೇವಸ್ಥಾನಕ್ಕೆ ನುಗ್ಗಿ ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ ಎಂದು ಕೋರಂಗಿ ಎಸ್‌ಎಚ್‌ಒ ಫಾರೂಕ್ ಸಂಜರಾಣಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆಯ ಸಹೋದರ ಸಂಸತ್ ಸ್ಥಾನಕ್ಕೆ ರಾಜೀನಾಮೆ

ಪಾಕಿಸ್ತಾನದಲ್ಲಿರುವ ದೇವಾಲಯಗಳು ಸಾಮಾನ್ಯವಾಗಿ ಗುಂಪು ಹಿಂಸಾಚಾರಕ್ಕೆ ಗುರಿಯಾಗುತ್ತಿವೆ. ಕಳೆದ ಅಕ್ಟೋಬರ್‌ನಲ್ಲಿ ಸಿಂಧ್‌ನ ಕೊಟ್ರಿಯಲ್ಲಿರುವ ಐತಿಹಾಸಿಕ ದೇವಾಲಯವನ್ನು ಅಪರಿಚಿತರು ಅಪವಿತ್ರಗೊಳಿಸಿದ್ದರು. ಸಿಂಧ್‌ನಲ್ಲಿ, ಬಲವಂತದ ಮತಾಂತರ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಗಳು ಇನ್ನಷ್ಟು ತೀವ್ರಗೊಂಡಿವೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *