ಇಸ್ಲಾಮಾಬಾದ್: ನಿಧಾನವಾಗಿ ಹೃದಯಾಘಾತವನ್ನು ಉಂಟುಮಾಡಲು ತನಗೆ ಚುಚ್ಚು ಮದ್ದನ್ನು ನೀಡಲಾಯಿತು ಜೊತೆಗೆ ವಾಶ್ ರೂಂ ಅನ್ನು ಬಳಸಲು ಅನುಮತಿ ನೀಡಿರಲಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದರು.
ಈ ಬಗ್ಗೆ ಇಮ್ರಾನ್ ಖಾನ್ ಅವರ ವಕೀಲರು ಮಾತನಾಡಿ, ಬಿಡುಗಡೆ ನಂತರ 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದೇವೆ. ಈ ವೇಳೆ ಇಮ್ರಾನ್ ಖಾನ್ ಎದೆ ನೋವಿನ ಬಗ್ಗೆ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಇಮ್ರಾನ್ ಖಾನ್‍ಗೆ ಜೈಲಿನಲ್ಲಿ ಚಿತ್ರಹಿಂಸೆ ನೀಡಲಾಯಿತು. ಅಷ್ಟೇ ಅಲ್ಲದೇ ನಿಧಾನವಾಗಿ ಹೃದಯಾಘಾತವಾಗಲು ಊಟದಲ್ಲಿ ಇನ್ಸುಲಿನ್ ಅನ್ನು ನೀಡಲಾಗಿದೆ. ಇಮ್ರಾನ್ ಖಾನ್‍ನನ್ನು ಕೊಲ್ಲುವ ಯತ್ನ ನಡೆಯುತ್ತಿದೆ. ಅವರಿಗೆ ಮಲುಗಲು ಬಿಡುತ್ತಿಲ್ಲ. ಶೌಚಾಲಯ ಹಾಗೂ ಹಾಸಿಗೆ ಇಲ್ಲದ ಕೊಳಕು ಕೊಣೆಯಲ್ಲಿ ಇರಿಸಲಾಗಿತ್ತು. ಅವರಿಗೆ ತಿನ್ನಲು ಏನನ್ನು ನೀಡಿರಲಿಲ್ಲ ಎಂದು ಕಿಡಿಕಾರಿದರು.
ಇಮ್ರಾನ್ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿದ್ದ ವೇಳೆ ಜೈಲಿನಲ್ಲಿ ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದರು. ಅಷ್ಟೇ ಅಲ್ಲದೇ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿದೆ. ಇದನ್ನೂ ಓದಿ: ಪಾಕ್‌ನಲ್ಲಿ ಹಿಂಸಾಚಾರಕ್ಕೆ ಆರ್‌ಎಸ್‌ಎಸ್, ಬಿಜೆಪಿಯೇ ಹೊಣೆ – ಶೆಹಬಾಜ್ ಷರೀಫ್ ಆಪ್ತ
ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ (Former Prime Minister) ಇಮ್ರಾನ್ ಖಾನ್ (Imran Khan) (70) ಅವರ ಬಂಧನ ಕಾನೂನು ಬಾಹಿರವಾಗಿದೆ. ಅವರನ್ನೂ ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಾಕ್‍ನ ಸುಪ್ರೀಂ ಕೋರ್ಟ್ (Pakistan Supreme Court) ಗುರುವಾರ ಆದೇಶಿಸಿತ್ತು. ಅಲ್ಲದೆ ಹೈಕೋರ್ಟ್‍ಗೆ (High Court) ಹಾಜರಾಗಲು ಬಂದಿದ್ದ ವೇಳೆ, ಕೋರ್ಟ್ ಆವರಣದಲ್ಲಿಯೇ ಅವರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಛೀಮಾರಿ ಹಾಕಿತ್ತು. ಇದನ್ನೂ ಓದಿ: ಇಮ್ರಾನ್‍ಖಾನ್‍ರನ್ನು ತಕ್ಷಣ ಬಿಡುಗಡೆಗೊಳಿಸಿ – ಪಾಕ್ ಸುಪ್ರೀಂ ಕೋರ್ಟ್