ಶ್ರೀನಗರ: ಐಎಂಎಫ್ ನೀಡಿರುವ ಸಾಲವನ್ನು ಪಾಕಿಸ್ತಾನ ಪರೋಕ್ಷವಾಗಿ ಉಗ್ರರ ಕುಟುಂಬಗಳಿಗೆ ಹಾಗೂ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಆರೋಪಿಸಿದರು.
ಇಂದು ಗುಜರಾತ್‌ನ (Gujarat) ಭುಜ್ (Bhuj) ವಾಯುನೆಲೆಗೆ ಭೇಟಿ ನೀಡಿ ಭಾರತೀಯ ವಾಯುಪಡೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಿಕ್ಷೆ ಬೇಡುತ್ತಿದ್ದ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯು ವಿಸ್ತೃತ ನಿಧಿ ಸೌಲಭ್ಯದಡಿಯಲ್ಲಿ ಎರಡು ಕಂತುಗಳಲ್ಲಿ 2.1 ಬಿಲಿಯನ್ ಡಾಲರ್‌ಗಳನ್ನು ವಿತರಿಸಿದೆ. ಇದನ್ನು ಪಾಕಿಸ್ತಾನ ಪರೋಕ್ಷವಾಗಿ ಭಯೋತ್ಪಾದನೆಗೆ ನೀಡುತ್ತಿದೆ. ಈ ಮೂಲಕ ಪಾಕಿಸ್ತಾನ ಸರ್ಕಾರ ಭಾರತೀಯರ ವಿರುದ್ಧ ದಾಳಿ ನಡೆಸಲು ಅವಕಾಶ ನೀಡುತ್ತಿದೆ. ಹೀಗಾಗಿ ನೀಡಿರುವ ಸಾಲವನ್ನು ಐಎಂಎಫ್ ಮರುಪರಿಶೀಲಿಸಬೇಕೆಂದು ಕೇಳಿಕೊಂಡರು.ಇದನ್ನೂ ಓದಿ: ಬೆಂಗಳೂರಿನ ಇಸ್ಕಾನ್ ಆಸ್ತಿ ಮುಂಬೈ ಇಸ್ಕಾನ್‌ಗೆ ಸೇರಿದ್ದಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಪಾಕ್ ಹಣವನ್ನು ಭಯೋತ್ಪಾದಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಬಳಕೆ ಮಾಡುತ್ತಿದೆ. ಮೃತ ಭಯೋತ್ಪಾದಕರ ಕುಟುಂಬಗಳಿಗೆ ಈ ಹಣವನ್ನು ಪಾಕ್ ಪರಿಹಾರವಾಗಿ ನೀಡುತ್ತಿದೆ. ಈಗಾಗಲೇ ಮೋಸ್ಟ್ ವಾಂಟೆಡ್ ಉಗ್ರ ಮಸೂದ್‌ಗೆ ಪಾಕಿಸ್ತಾನ 14 ಕೋಟಿ ರೂ. ಪರಿಹಾರ ನೀಡಿದೆ ಎಂದರು.
ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ಆರಂಭಿಸಿದ `ಆಪರೇಷನ್ ಸಿಂಧೂರ’ ಕಾರ್ಯಾಚರಣೆ ವೇಳೆ ಐಎಂಎಫ್ ಪಾಕಿಸ್ತಾನಕ್ಕೆ ಸಾಲ ಘೋಷಿಸಿತು. ಈ ವೇಳೆ ಪಾಕ್ ಕೂಡ ಉತ್ತರ ಭಾರತದ ನಾಗರಿಕರ ವಾಸಸ್ಥಾನ ಹಾಗೂ ಮಿಲಿಟರಿ ಪ್ರದೇಶಗಳ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸುತ್ತಿತ್ತು.ಇದನ್ನೂ ಓದಿ: ಆಪರೇಷನ್ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್