ಸಿಡ್ನಿ: ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ(Australia Bondi Beach) ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರ ಈ ಹತ್ಯಾಕಾಂಡವನ್ನು ಭಯೋತ್ಪದನಾ ಕೃತ್ಯ(Terrorist Attack) ಎಂದು ಪರಿಗಣಿಸಿದ್ದು ಪಾಕಿಸ್ತಾನ (Pakistan) ಮೂಲದ ತಂದೆ ಮತ್ತು ಪುತ್ರ ಜೊತೆಯಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ.
ಯಹೂದಿಗಳ ಹನುಕ್ಕಾ ಹಬ್ಬದ ಆಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
The gunmen who carried out the Sydney attack are a father and son, ages 50 and 24, according to police pic.twitter.com/ESYrdOe7C1
— BNO News Live (@BNODesk) December 14, 2025
50 ವರ್ಷದ ಸಾಜಿದ್ ಅಕ್ರಮ್ ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನ 24 ವರ್ಷದ ಮಗ ನವೀದ್ ಅಕ್ರಮ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ನ್ಯೂ ಸೌತ್ ವೇಲ್ಸ್ ಪೊಲೀಸ್ ಆಯುಕ್ತ ಮಾಲ್ ಲ್ಯಾನ್ಯನ್ ಹೇಳಿದ್ದಾರೆ. ಇದನ್ನೂ ಓದಿ: ಸಿಡ್ನಿಯಲ್ಲಿ ಜನಸಮೂಹದ ಮೇಲೆ ಗುಂಡಿನ ದಾಳಿ
‘TARGETED ATTACK’: Australian Prime Minister Anthony Albanese calls mass shooting at Hanukkah event, which has left at least 11 dead, “an act of evil antisemitism, terrorism that has struck the heart of our nation.” pic.twitter.com/vhX05R4aYs
— Fox News (@FoxNews) December 14, 2025
ಆಸ್ಟ್ರೇಲಿಯಾ ಕಠಿಣ ಬಂದೂಕು ನಿಯಂತ್ರಣ ಕಾನೂನುಗಳನ್ನು ಹೊಂದಿದೆ. ಸುಮಾರು ಮೂರು ದಶಕಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಅತ್ಯಂತ ಮಾರಕ ಗುಂಡಿನ ದಾಳಿ ಎಂದು ಪರಿಗಣಿಸಲಾಗಿದೆ.
10 ನಿಮಿಷಗಳ ಕಾಲ ಈ ದಾಳಿ ನಡೆದಿದೆ. ಬೀಚ್‌ನ ಹೊರಗಿನ ಒಂದು ಸಣ್ಣ ಉದ್ಯಾನವನದಲ್ಲಿ ನಡೆದ ಹನುಕ್ಕಾ ಕಾರ್ಯಕ್ರಮದಲ್ಲಿ ಸುಮಾರು 1,000 ಜನರು ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

