ಇಸ್ಲಾಮಾಬಾದ್: ಪಹಲ್ಗಾಮ್ ಪ್ರವಾಸಿಗರ ದಾಳಿಯ (Pahalgam Terror Attack) ಬಳಿಕ ಯುದ್ಧದ ಭೀತಿಯಲ್ಲಿರುವ ಪಾಕಿಸ್ತಾನವು (Pakistan) ಮುಂಜಾಗ್ರತಾ ಕ್ರಮವಾಗಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) 10 ದಿನಗಳ ಕಾಲ ಮದರಸಾ ಮುಚ್ಚುವ ನಿರ್ಧಾರವನ್ನು ಕೈಗೊಂಡಿದೆ.
ಭಾರತವು ಎಲ್ಲಾ ಮದರಸಾಗಳನ್ನು ಗುರಿಯಾಗಿರಿಸಿಕೊಳ್ಳುವ ಭಯವನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಸರ್ಕಾರವು ಗುರುವಾರ ತಿಳಿಸಿದೆ. ಅಲ್ಲದೇ ಭಾರತ ಶೀಘ್ರದಲ್ಲೇ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂದು ಗುಪ್ತಚರ ಮಾಹಿತಿ ಇದೆ ಎಂದು ಹೇಳಿದೆ. ಇದನ್ನೂ ಓದಿ: ರಕ್ಷಣೆಗೆ ಅಮೆರಿಕ, ಚೀನಾಗೆ ಪಾಕ್ ಮೊರೆ – ಪ್ರತೀಕಾರ ಕಟ್ಟಿಟ್ಟಬುತ್ತಿ: ಭಾರತ ಗುಡುಗು
ಭಾರತೀಯ ಪಡೆಗಳು ಮದರಸಾಗಳನ್ನು ಗುರಿಯಾಗಿಸಿಕೊಂಡು ಅವುಗಳನ್ನು ಭಯೋತ್ಪಾದಕ ತರಬೇತಿ ಕೇಂದ್ರಗಳೆಂದು ದಾಳಿ ಮಾಡಬಹುದು ಎಂದು ಭದ್ರತಾ ಅಧಿಕಾರಿಗಳು ಭಯಪಡುತ್ತಿದ್ದಾರೆ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಧಾರ್ಮಿಕ ವ್ಯವಹಾರಗಳ ಇಲಾಖೆಯ ನಿರ್ದೇಶಕ ಹಫೀಜ್ ನಜೀರ್ ಅಹ್ಮದ್ ಏಜೆನ್ಸಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ನೀವು ಬರೋದು ಬೇಡ – ತನ್ನ ಪ್ರಜೆಗಳನ್ನೇ ದೇಶಕ್ಕೆ ಸೇರಿಸದ ಪಾಕ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ 445 ನೋಂದಾಯಿತ ಮದರಸಾಗಳಿದ್ದು, 26,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ನಾವು ಬುಧವಾರ ಸಭೆ ನಡೆಸಿದ್ದು, ಮುಗ್ಧ ಮಕ್ಕಳನ್ನು ಅಪಾಯದಿಂದ ಕಾಪಾಡಲು ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ, ಬುಡ ಸಮೇತ ಕಿತ್ತುಹಾಕ್ತೀವಿ: ಅಮಿತ್ ಶಾ ಗುಡುಗು
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಕೇಂದ್ರ ಸರ್ಕಾರವು ಪ್ರತೀಕಾರ ತೀರಿಸಿಕೊಳ್ಳಲು ಎದುರು ನೋಡುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಪಾಕ್ ಪತರುಗುಟ್ಟಿದೆ.