ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಪಾಕ್ ಸಂಸತ್‍ನಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಒಂದು ವಾರದ ಒಳಗೆ ಪ್ರಧಾನಿ ಸ್ಥಾನಕ್ಕೆ ಇಮ್ರಾನ್ ಖಾನ್ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.
Advertisement
ಅವಿಶ್ವಾಸ ನಿರ್ಣಯಕ್ಕೆ 161 ಸದಸ್ಯರು ಬೆಂಬಲ ಸೂಚಿಸಿದ್ದಾರೆ. ಇಮ್ರಾನ್ ಖಾನ್ ವಿರುದ್ಧ ಎರಡೂ ಡಜನ್‍ಗೂ ಹೆಚ್ಚು ಸಂಸದರ ಬಂಡಾಯ ಎದ್ದಿದ್ದಾರೆ. ಇದೀಗ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ. ಇದನ್ನೂ ಓದಿ: ಮೆಕ್ಸಿಕೋದಲ್ಲಿ ಗುಂಡಿನ ದಾಳಿ – 19 ಜನರ ಸಾವು
Advertisement
342 ಸ್ಥಾನಗಳ ಪೈಕಿ ಬಹುಮತಕ್ಕೆ 172 ಸ್ಥಾನಗಳು ಅವಶ್ಯಕತೆ ಇತ್ತು. ಸದ್ಯ ಇಮ್ರಾನ್ ಖಾನ್ ಪರ 155 ಸಂಸದರಿದ್ದಾರೆ. ಕಲಾಪವನ್ನು ಮಾರ್ಚ್ 31ರ ವರೆಗೆ ಮುಂದೂಡಲಾಗಿದ್ದು, ಏಪ್ರಿಲ್ 3 ಅಥವಾ 4ರಂದು ಅವಿಶ್ವಾಸ ನಿರ್ಣಯದ ಮೇಲೆ ಮತದಾನ ನಡೆಯುವ ಸಾಧ್ಯತೆ ಇದೆ.
Advertisement
Advertisement
ಸದ್ಯ ವಿಪಕ್ಷ ನಾಯಕರಾಗಿರುವ ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಪಕ್ಷದ ಷಹಬಾಜ್ ಷರೀಫ್ ಪಾಕಿಸ್ತಾನದ ಮುಂದಿನ ಪ್ರಧಾನಿ ಆಗಬಹುದು ಎಂದು ಹೇಳಲಾಗುತ್ತಿದೆ. ಸದ್ಯ ಮಿತ್ರಪಕ್ಷಗಳ ವಿಶ್ವಾಸ ಕಳೆದುಕೊಂಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ಭಾಗವಾಗಿದ್ದ ಪಿಎಂಎಲ್ ಕ್ಯೂ ಪಕ್ಷದ ಸದಸ್ಯರು ಸಂಸತ್ ಕಲಾಪದಲ್ಲಿ ವಿಪಕ್ಷಗಳ ಜೊತೆ ಕಾಣಿಸಿಕೊಂಡು ಇಮ್ರಾನ್ ಖಾನ್‍ಗೆ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ವುಹಾನ್ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್: 2.6 ಕೋಟಿ ಜನ ಮನೆಯಲ್ಲೇ ಲಾಕ್
ಕಾರಣ ಏನು?
ಇಮ್ರಾನ್‍ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಪಾಕಿಸ್ತಾನ ಅಳಿವಿನ ಅಂಚಿನತ್ತ ಸಾಗುತ್ತಿದೆ ಮತ್ತು ಹಣದುಬ್ಬರ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಆರೋಪಿಸಿ ಮಾರ್ಚ್ 8 ರಂದು ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿ ಸಚಿವಾಲಯದ ಮುಂದೆ ಅವಿಶ್ವಾಸ ನಿರ್ಣಯ ಸಲ್ಲಿಸಿದ್ದವು. ಇದರಿಂದಾಗಿ ಮಾರ್ಚ್ 25ರಂದು ಇಮ್ರಾನ್ ಖಾನ್‍ರನ್ನು ಪದಚ್ಯುತಿಗೊಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಲು ದಿನಾಂಕ ನಿಗದಿಪಡಿಸಲಾಗಿತ್ತು.
The Sitting of the National Assembly has been adjourned to meet again on Thursday, the 31st March, 2022 at 4:00 p.m.#NASession #NAatWork
— National Assembly of ???????? (@NAofPakistan) March 28, 2022
ಪಾಕಿಸ್ತಾನದ ಸಂಸತ್ತು 15 ಅಂಶಗಳ ಅಜೆಂಡಾ ಬಿಡುಗಡೆ ಮಾಡಿತ್ತು. ಇದರಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿಯೂ ಸೇರಿದೆ. ಆರ್ಥಿಕತೆಯನ್ನೂ ಇಮ್ರಾನ್ ಖಾನ್ ಸಮರ್ಪಕವಾಗಿ ನಿರ್ವಹಿಸಿಲ್ಲ. ಹಣದುಬ್ಬರ ಪ್ರಮಾಣ ಎರಡಂಕಿಗೆ ಹೆಚ್ಚಾಗಿರುವ ಕಾರಣ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನಸಾಮಾನ್ಯರಲ್ಲಿ ಸರ್ಕಾರದ ಬಗ್ಗೆ ಅಸಮಾಧಾನ ಮನೆಮಾಡಿದ್ದು, ರಾಜಕೀಯ ಭವಿಷ್ಯಕ್ಕೆ ಆತಂಕ ತಂದೊಡ್ಡಿದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ಆಡಳಿತಾರೂಢ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ವಿರೋಧ ಪಕ್ಷಗಳು ಒಗ್ಗೂಡಲು ಸಹ ಇದು ಮುಖ್ಯಕಾರಣವಾಗಿದೆ ಎಂಬ ಅಂಶವನ್ನು ಇದರಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ತಾಲಿಬಾನ್ ಹೊಸ ಕಾನೂನು – ಪುರುಷರೊಂದಿಗೆ ಮಹಿಳೆಯರು ಪಾರ್ಕ್‌ಗೆ ಹೋಗುವಂತಿಲ್ಲ
ಪಾಕಿಸ್ತಾನದ ಸಂಸತ್ತು 342 ಸದಸ್ಯಬಲ ಹೊಂದಿದೆ. ಅಧಿಕಾರಕ್ಕೆ ಬರಲು 172 ಸದಸ್ಯ ಬಲ ಅಗತ್ಯವಿದೆ. ಇಮ್ರಾನ್ ಖಾನ್‍ರ ಪಿಟಿಐ ನೇತೃತ್ವದ ಮೈತ್ರಿಕೂಟವು ಈ ಹಿಂದೆ 179 ಸದಸ್ಯಬಲ ಹೊಂದಿತ್ತು. ಪಿಟಿಐ ಪಕ್ಷದ 155 ಸಂಸದರು ಸಂಸತ್ತಿನಲ್ಲಿದ್ದರು. ಅವಿಶ್ವಾಸ ಗೊತ್ತುವಳಿಯಲ್ಲಿ ಪಾಲ್ಗೊಳ್ಳುವುದಾಗಿ 3 ಪ್ರಮುಖ ಮಿತ್ರಪಕ್ಷಗಳು ಹೇಳಿಕೆ ನೀಡಿದ್ದವು. ಪಾಕಿಸ್ತಾನದ ಸಂಸತ್ತಿನಲ್ಲಿ ವಿರೋಧ ಪಕ್ಷಗಳು 163 ಸ್ಥಾನಗಳನ್ನು ಹೊಂದಿವೆ. ಪಿಟಿಐ ಪಕ್ಷ ತೊರೆದಿರುವ ಸಂಸದರು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿರುವುದರ ಪರಿಣಾಮ ಇದೀಗ ಇಮ್ರಾನ್ ಖಾನ್ ಪಿಎಂ ಕುರ್ಚಿ ಬಿಟ್ಟು ಕೊಡಬೇಕಾಗಿದೆ.