ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದ ಯುವಕನ ವಶ

Public TV
1 Min Read
CKB POST copy

ಚಿಕ್ಕಬಳ್ಳಾಪುರ: ವಾಟ್ಸಪ್ ನಲ್ಲಿ ದೇಶದ್ರೋಹಿ ಪೋಸ್ಟ್ ಹಾಕಿದ ಯುವಕನನ್ನ ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಅಂದಹಾಗೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲ್ಲಿಪುರ ಗ್ರಾಮದ 17 ವರ್ಷದ ಹೈದರ್ ಆಲಿ ಪಾಕ್ ಧ್ವಜವುಳ್ಳ ಸಿಂಹ ಭಾರತದ ಧ್ವಜ ಇರುವ ಹುಲಿಯನ್ನು ಕಚ್ಚಿ ತಿನ್ನುತ್ತಿರುವ ಫೋಟೋ ಅಪ್ಲೋಡ್ ಮಾಡಿದ್ದನು. ವಾಟ್ಸಪ್ ನಲ್ಲಿ ದೇಶದ್ರೋಹಿ ಪೋಸ್ಟ್ ಹಾಕಿದ ಕೂಡಲೇ ಅಲ್ಲಿಪುರ ಗ್ರಾಮದಲ್ಲಿ ಕೆಲ ಸಂಘಟನೆಗಳು ಕಾರ್ಯಕರ್ತರು ಹಾಗೂ ಅಲ್ಲೀಪುರದ ಗ್ರಾಮದ ಸುತ್ತಮುತ್ತಲ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Pulwama terror attack kashmir

ಈತ ಪೋಸ್ಟ್ ವಿಚಾರದಿಂದ ಅಲ್ಲಿಪುರ ದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಆತಂಕ ಮೂಡಿಸಿತ್ತು. ಹೀಗಾಗಿ ಸ್ವತಃ ಎಸ್‍ಪಿ ಕಾರ್ತಿಕ್ ರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೇಚೆಗೆ ಜಮ್ಮು-ಕಾಶ್ಮೀರದ ಪುನ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿಯ ನಡೆದ ನಂತರ ಅನೇಕ ಯುವಕ-ಯುವತಿಯರು ಸಾಮಾಜಿಕ ಜಾಲತಾಣಗಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕುತ್ತಿದ್ದಾರೆ. ಅಂತಹ ದೇಶದ್ರೋಹಿಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದು, ಕೆಲವರನ್ನು ಬಂಧಿಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *