ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್‌ – ಶಾಂತಿ ಮಾತುಕತೆಗೆ ಪಾಕ್‌ ಪ್ರಧಾನಿ ಆಹ್ವಾನ

Public TV
2 Min Read
Shehbaz Sharif Narendra Modi

– ಪಾಕಿಸ್ತಾನ ಶಾಂತಿಗಾಗಿ ತೊಡಗಿಸಿಕೊಳ್ಳು ಸಿದ್ಧ: ಶೆಹಬಾಜ್‌ ಷರೀಫ್‌

ಇಸ್ಲಾಮಾಬಾದ್: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆದ ‘ಆಪರೇಷನ್‌ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ತತ್ತರಿಸಿದ ಪಾಕಿಸ್ತಾನ (Pakistan) ಕೊನೆಗೂ ಭಾರತದ (India) ಮುಂದೆ ಮಂಡಿಯೂರಿದೆ. ಪಾಕಿಸ್ತಾನ ಶಾಂತಿಗಾಗಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಪ್ರಧಾನಿ ಶೆಹಬಾಜ್‌ ಶರೀಫ್‌ ಭಾರತದ ಮುಂದೆ ಮಾತುಕತೆ ಪ್ರಸ್ತಾಪ ಇಟ್ಟಿದ್ದಾರೆ.

ಭಾರತದೊಂದಿಗಿನ ಮಿಲಿಟರಿ ಮುಖಾಮುಖಿಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲು ಗುರುವಾರ ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

Pune man claims he captured Pahalgam Two terrorists on video while making reel days before the attack

ಶಾಂತಿಗಾಗಿ ನಾವು ಅದರೊಂದಿಗೆ (ಭಾರತ) ಮಾತುಕತೆಗೆ ಸಿದ್ಧರಿದ್ದೇವೆ. ಶಾಂತಿಗಾಗಿ ಷರತ್ತುಗಳು ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡಿವೆ ಎಂದು ಶೆಹಬಾಜ್‌ (Shehbaz Sharif) ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗಗಳಾಗಿರುತ್ತವೆ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

operation sindoor India intercepts Pakistans Fatah ballistic missile fired at Delhi

ಶೆಹಬಾಜ್ ಅವರೊಂದಿಗೆ ಉಪ ಪ್ರಧಾನಿ ಇಶಾಕ್ ದಾರ್, ರಕ್ಷಣಾ ಸಚಿವ ಖವಾಜಾ ಆಸಿಫ್, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ವಾಯುಪಡೆಯ ಮುಖ್ಯಸ್ಥ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಜಹೀರ್ ಅಹ್ಮದ್ ಬಾಬರ್ ಸಿಧು ಕೂಡ ಗುರುವಾರ ವಾಯುನೆಲೆಗೆ ಬಂದಿದ್ದರು.

ಪಹಲ್ಗಾಮ್‌ ಭಯೋತ್ಪಾದಕ ದಾಳಿಯಿಂದಾಗಿ 26 ಪ್ರವಾಸಿಗರು ಪ್ರಾಣ ಕಳೆದುಕೊಂಡರು. ಇದಕ್ಕೆ ಪ್ರತೀಕಾರವಾಗಿ ಉಗ್ರರ ವಿರುದ್ಧ ಭಾರತ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಇದನ್ನೂ ಓದಿ: ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಹಲವಾರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಪ್ರತ್ಯುತ್ತರವಾಗಿ ಭಾರತೀಯ ಸಶಸ್ತ್ರ ಪಡೆಗಳು ರಫೀಕಿ, ಮುರಿಯದ್, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್ ಸೇರಿದಂತೆ ಹಲವಾರು ಪಾಕಿಸ್ತಾನಿ ಮಿಲಿಟರಿ ನೆಲೆಗಳ ಮೇಲೆ ಭೀಕರ ಪ್ರತಿದಾಳಿ ನಡೆಸಿದವು.

Share This Article