ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗಡಿ ನಿಯಂತ್ರಣ ರೇಖೆಯ(ಎಲ್‍ಒಸಿ) ಬಳಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದೆ. ಎಲ್‍ಒಸಿ ಉದ್ದಕ್ಕೂ ಫಾರ್ವರ್ಡ್ ಪೋಸ್ಟ್‌ಗಳು ಮತ್ತು ಹಳ್ಳಿಗಳ ಮೇಲೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ.
ಇಂದು ಬೆಳಗ್ಗೆ 11:30ರ ವೇಳೆಗೆ ರಜೌರಿ ಜಿಲ್ಲೆಯ ಸುಂದರ್‍ಬಾನಿ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದೆ. ಸುಂದರ್‌ಬಾನಿ ವಲಯದಲ್ಲಿ ಶಸ್ತ್ರಾಸ್ತ್ರ ಮತ್ತು ಶೆಲ್ ದಾಳಿ ಮಾಡಲು ಪಾಕ್ ಆರಂಭಿಸಿತು. ಇದಕ್ಕೆ ಭಾರತೀಯ ಸೇನೆ ಕೂಡ ಪ್ರತ್ಯುತ್ತರ ನೀಡಿದೆ. ಆದರೆ ಈ ವೇಳೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
Advertisement
Advertisement
ನ. 17ರಂದು ಅಖ್ನೂರ್ ಸೆಕ್ಟರ್ ಬಳಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿತ್ತು. ಈ ವೇಳೆ ಅಲ್ಲಿ ಟ್ರಕ್‍ನಲ್ಲಿ ತೆರೆಳುತ್ತಿದ್ದ ಓರ್ವ ಯೋಧ ಹುತಾತ್ಮರಾಗಿ ಇಬ್ಬರು ಯೋಧರು ಗಾಯಗೊಂಡಿದ್ದರು. ಅವರನ್ನು ಉಧಂಪುರ್ ಪ್ರದೇಶದ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement
ಹಾಗೆಯೇ ನ.16ರಂದು ಪಾಕಿಸ್ತಾನವು ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಪಾಕಿಸ್ತಾನ ಪಡೆಗಳು ಈ ಪ್ರದೇಶದ ನಾಗರಿಕರನ್ನು ಗುರಿಯಾಗಿಸಿಕೊಂಡು ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಶೆಲ್ ದಾಳಿ ನಡೆಸಿದ್ದವು.