ಇಸ್ಲಾಮಾಬಾದ್: ತೀವ್ರ ಕುತೂಹಲ ಮೂಡಿಸಿರುವ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕ್ರಿಕೆಟ್ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸುವ ಸಂಬಂಧ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಒಮ್ಮತದ ನಿರ್ಣಯ ಕೈಗೊಂಡಿದೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಟ್ರೋಫಿಯಲ್ಲಿ ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡುವುದಕ್ಕೆ ಐಸಿಸಿ ಅನುಮತಿ ನೀಡಿದೆ. ಈ ನಡುವೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಮಾಜಿ ಕೋಚ್ ರಶೀದ್ ಲತೀಫ್ (Rashid Latif) ಹೊಸ ಕ್ಯಾತೆ ತೆಗೆದಿದ್ದಾರೆ.
Rashid Latif said “Pakistan should boycott the Champions Trophy now. Before BCCI takes this step, PCB should take it. Champions Trophy shouldn’t happen anymore” 🇵🇰🇮🇳🤯
— Farid Khan (@_FaridKhan) December 10, 2024
Advertisement
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಲತೀಫ್, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂದಿನ ಹೆಜ್ಜೆ ಇಡುವ ಮೊದಲು ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯನ್ನ ಬಾಯ್ಕಾಟ್ ಮಾಡಬೇಕು. ಇನ್ಮುಂದೆ ಚಾಂಪಿಯನ್ ಟ್ರೋಫಿ ನಡೆಯಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಐಸಿಸಿ ಅಂಗಳ ತಲುಪಿದ ಸಿರಾಜ್ vs ಹೆಡ್ ವಾಗ್ವಾದ – ಇಬ್ಬರಿಗೂ ಬ್ಯಾನ್ ಭೀತಿ?
Advertisement
Advertisement
ಚಾಂಪಿಯನ್ಸ್ ಟ್ರೋಫಿ ಪೂರ್ಣ ಪಂದ್ಯಗಳು ಪಾಕಿಸ್ತಾನದಲ್ಲಿ (Pakistan) ನಡೆಯಬೇಕಿತ್ತು. ಆದ್ರೆ ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ, ಭಾರತ ತನ್ನ ಪಂದ್ಯಗಳನ್ನಾಡಲು ನಿರಾಕರಿಸಿದೆ. ಐಸಿಸಿ ಹೈಬ್ರಿಡ್ ಮಾದರಿಗೆ ಒಪ್ಪಿಗೆ ಸೂಚಿಸಿದ್ದರೂ ಬಿಸಿಸಿಐ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಮ್ಮನ್ನು ಯಾವಾಗಲೂ ಬಲಿಪಶುಗಳಾಗಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತಕ್ಕಿಂದು ಹ್ಯಾಟ್ರಿಕ್ ಶಾಕ್ – ಸತತ 2ನೇ ಬಾರಿಗೆ ಬಾಂಗ್ಲಾಗೆ U19 ಏಷ್ಯಾಕಪ್ ಕಿರೀಟ
Advertisement
ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB), ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ (ACB) ಆಗಿರಲಿ ಅಥವಾ ಐಸಿಸಿ ಆಗಿರಲಿ, ಬಿಸಿಸಿಐ ಎದುರು ಫೈಟ್ ಮಾಡೋಕೆ ಸಾಧ್ಯವಿಲ್ಲ. ಭಾರತ ಬಹಿಷ್ಕರಿಸಿದ್ರೆ, ನಾವು ಎಲ್ಲಿಗೆ ಹೋಗಿ ನಿಲ್ಲಬೇಕಾಗುತ್ತೆ ಅನ್ನೋ ಭಯ ಇದೆ. ಅದಕ್ಕಾಗಿ ಪಾಕಿಸ್ತಾನವನ್ನು ಬಲಿಪಶುಗಳಾಗಿ ಮಾಡ್ತಾರೆ. ಆದ್ದರಿಂದ ಬಿಸಿಸಿಐ ಮುಂದಿನ ನಡೆದ ತೆಗೆದುಕೊಳ್ಳುವ ಮೊದಲು ಪಾಕಿಸ್ತಾನ ಟೂರ್ನಿಯನ್ನ ಬಹಿಷ್ಕರಿಸಬೇಕು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಆಸೀಸ್ ವಿರುದ್ಧ ಹೀನಾಯ ಸೋಲು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದ ಭಾರತ, ಫೈನಲ್ ಹಾದಿ ಕಠಿಣ
2025ರ ಫೆಬ್ರವರಿ- ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಶೀಘ್ರದಲ್ಲಿಯೇ ವೇಳಾಪಟ್ಟಿ ಪ್ರಕಟವಾಗಲಿದೆ. ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ತಾನು ಹೈಬ್ರಿಡ್ ಮಾದರಿಗೆ ಸುತಾರಾಂ ಒಪ್ಪುವುದಿಲ್ಲ ಎಂದು ಕಳೆದ ವಾರ ಹಠ ಹಿಡಿದಿದ್ದ ಪಾಕಿಸ್ತಾನ, ಬಹಿಷ್ಕಾರದ ಬೆದರಿಕೆ ಹಿಂಪಡೆದು, ಹೈಬ್ರಿಡ್ ಮಾದರಿಗೆ ಒಪ್ಪಿಕೊಂಡಿರುವುದಲ್ಲದೆ, ಈ ವ್ಯವಸ್ಥೆ 2031ರವರೆಗೂ ಮುಂದುವರಿಯಬೇಕು ಎಂದು ಆಗ್ರಹಿಸಿತ್ತು. ಅಲ್ಲದೇ ಫೈನಲ್ ಪಂದ್ಯ ಲಾಹೋರ್‌ನಲ್ಲೇ ನಡೆಯಬೇಕು ಎಂದು ಷರತ್ತು ವಿಧಿಸಿದೆ. ಸದ್ಯಕ್ಕೆ ಐಸಿಸಿ ತನ್ನ ಟೂರ್ನಿಗಳನ್ನು ಹೈಬ್ರಿಡ್ ಮಾದರಿಯಲ್ಲಿ 2027ರ ವರೆಗೆ ನಡೆಸಲು ಒಪ್ಪಿಕೊಂಡಿದೆ. ಆದ್ರೆ ಫೈನಲ್ ಪಂದ್ಯವನ್ನು ಲಾಹೋರ್‌ನಲ್ಲೇ ನಡೆಸುವ ಬಗ್ಗೆ ಒಪ್ಪಿಗೆ ಸೂಚಿಸಿಲ್ಲ.