ಒಟ್ಟಾವಾ: ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪಿನ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಭಾರತ ಮತ್ತು ಕೆನಡಾ (India – Canada) ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿದೆ. ಈ ನಡುವೆ ಕೆನಡಾದ ಖಲಿಸ್ತಾನಿಗಳಿಗೆ ಪಾಕ್ ಬೆಂಬಲ ನೀಡುತ್ತಿದೆ ಎಂದು ಕೆನಡಾ ಗುಪ್ತಚರ ಸಂಸ್ಥೆಯ (CSIS) ನಿರ್ದೇಶಕಿ ವನೆಸ್ಸಾ ಲಾಯ್ಡ್ ಅವರು ಹೇಳಿದ್ದ ವೀಡಿಯೋ ಸದ್ದು ಮಾಡುತ್ತಿದೆ.
Last year I said that the whole Hardeep Singh Nijjar case was:
“Pakistani Foreign interference, marketed as Indian Foreign interference, to distract from Chinese foreign interference.” Looks like I was right. https://t.co/VEXKInuNBK
— Daniel Bordman (@DanielBordmanOG) October 15, 2024
Advertisement
ಇತ್ತೀಚೆಗೆ ನಡೆದ ವಿದೇಶಿ ಹಸ್ತಕ್ಷೇಪ ಸಮಿತಿಯ ಅಧಿವೇಶನದಲ್ಲಿ ವನೆಸ್ಸಾ ಲಾಯ್ಡ್, ನಿಜ್ಜರ್ ಹತ್ಯೆಗೆ ಸಂಬಂಧಿಸಿಂತೆ ಪ್ರತಿಕ್ರಿಯೆ ನೀಡುತ್ತಿದ್ದರು. ಈ ವೇಳೆ ಕೆನಡಾದ ರಾಜಕೀಯದ ಮೇಲೆ ಪ್ರಭಾವ ಬೀರುವಲ್ಲಿ ಪಾಕಿಸ್ತಾನದ ಪಾತ್ರವೂ ಇದೆ. ಜೊತೆಗೆ ಖಲಿಸ್ತಾನಿಗಳಿಗೆ ಪಾಕ್ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರಭಾವ ಕಡಿಮೆಗೊಳಿಸಲು ಪಾಕ್ ಪ್ರಯತ್ನಿಸುತ್ತಿದೆ. ಅದಕ್ಕಾಗಿ ಖಲಿಸ್ತಾನಿಗಳ ಉಗ್ರವಾದಕ್ಕೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಭಾರತ-ಕೆನಡಾ ನಡುವೆ ಮತ್ತೆ ಬಿಕ್ಕಟ್ಟು ಎದುರಾದ ಬೆನ್ನಲ್ಲೇ ಈ ವೀಡಿಯೋ ಭಾರಿ ಸದ್ದು ಮಾಡುತ್ತಿದೆ.
Advertisement
Advertisement
ಹರ್ದೀಪ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಭಾರತದ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನೂ ತನಿಖೆಗೆ ಒಳಪಡಿಸುವುದಾಗಿ ಕೆನಡಾ ಸರ್ಕಾರ ಹೇಳಿತ್ತು. ಈ ಬೆನ್ನಲ್ಲೇ ಭಾರತ ಸರ್ಕಾರ (Indian Gooovernment) ಕೆನಡಾದಲ್ಲಿರುವ ತನ್ನ ಹೈಕಮಿಷನರ್ ಅವರನ್ನು ವಾಪಸ್ ಕರೆಸಿಕೊಳ್ಳುವ ನಿರ್ಧಾರಕ್ಕೆ ಮುಂದಾಗಿದೆ. ಇದನ್ನೂ ಓದಿ: ಟ್ರಂಪ್‌ಗಿಂತಲೂ ಕಮಲಾ ಹ್ಯಾರಿಸ್‌ಗೆ ಹೆಚ್ಚಿನ ಕೋಟ್ಯಧಿಪತಿಗಳ ಬೆಂಬಲ – ಇಲ್ಲಿದೆ ಬಿಲಿಯನೇರ್ಸ್ ಲಿಸ್ಟ್
Advertisement
ಸೋಮವಾರ (ಅ.14) ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ 6 ರಾಜತಾಂತ್ರಿಕ ಅಧಿಕಾರಿಗಳನ್ನು ಕೆನಡಾ ಸರ್ಕಾರ ಗಡಿಪಾರು ಮಾಡಿದೆ. ಇದಕ್ಕೆ ಪ್ರತಿಯಾಗಿ ಭಾರತವೂ ಸರ್ಕಾರವೂ ನವದೆಹಲಿಯಲ್ಲಿರುವ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳನ್ನು ದೇಶ ತೊರೆಯುವಂತೆ ಹೇಳಿದೆ. ಇದರಿಂದ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಬಿಗಡಾಯಿಸಿದೆ. ಇದನ್ನೂ ಓದಿ: ನಿಜ್ಜರ್ ಹತ್ಯೆ ಕೇಸ್ ಸಂಘರ್ಷ – ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಸಮರ; ಏನಿದು ಬಿಕ್ಕಟ್ಟು?
ಈ ಬೆನ್ನಲ್ಲೇ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಭಾರತೀಯ ಸರ್ಕಾರಿ ಏಜೆಂಟ್ ಜೊತೆ ಸಂಪರ್ಕ ಹೊಂದಿದೆ ಎಂದು ಕೆನಡಾದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಬಿಷ್ಣೋಯ್ ಗ್ಯಾಂಗ್‌ಗೆ ಭಾರತದ ಸರ್ಕಾರಿ ಏಜೆಂಟ್ ಜೊತೆ ನಂಟಿದೆ: ಕೆನಡಾ ಪೊಲೀಸರ ಗಂಭೀರ ಆರೋಪ