ಇಸ್ಲಾಮಾಬಾದ್: ಪಾಕಿಸ್ತಾನ ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶರಾಗಿ ಆಯೆಷಾ ಮಲಿಕ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾನೂನನ್ನು ಮಹಿಳಾ ವಿರೋದ್ಧ ಪ್ರಯೋಜಿಸಲಾಗುತ್ತದೆ ಎಂಬ ಆರೋಪ ಹೊತ್ತಿರುವ ರಾಷ್ಟ್ರದಲ್ಲಿ ಈ ಬೆಳವಣಿಗೆ ನಿಜಕ್ಕೂ ಹೆಗ್ಗುರುತಾಗಿದೆ ಎಂದು ವಿಶ್ಲೇಷಿಸಲಾಗಿದೆ. ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಮಲಿಕ್ ಪಾಲ್ಗೊಂಡು ಪ್ರಮಾಣ ವಚನ ಸ್ವೀಕರಿಸಿದರು. ಪಾಕಿಸ್ತಾನದ ಅತ್ಯುನ್ನತ ನ್ಯಾಯಾಲಯದಲ್ಲಿ 16 ಪುರುಷ ನ್ಯಾಯಾಧೀಶರ ನಡುವೆ ಒಬ್ಬರೇ ಮಹಿಳಾ ನ್ಯಾಯಾಧೀಶೆಯಾಗಿ ಮಲಿಕ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮೊದಲ ಮಹಿಳಾ ನ್ಯಾಯಾಧೀಶೆಯಾಗಿ ಆಯಿಷಾ ಮಲಿಕ್ ನೇಮಕ
ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯಲ್ಲಿ ಇದು ಐತಿಹಾಸಿಕ ಕ್ಷಣವಾಗಿದೆ. ಪ್ರಗತಿಯ ಪ್ರಮುಖ ಹೆಜ್ಜೆ ಇದಾಗಿದೆ ಎಂದು ವಕೀಲೆ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ನಿಗತ್ ದಾದ್ ಅಭಿಪ್ರಾಯಪಟ್ಟಿದ್ದಾರೆ.
ಹಾರ್ವರ್ಡ್ ಯೂನಿವರ್ಸಿಟಿಯಲ್ಲಿ ಉನ್ನತ ಶಿಕ್ಷಣ ಪೂರೈಸಿರುವ ಮಲಿಕ್ ಅವರು, ಕಳೆದೆರಡು ದಶಕಗಳಿಂದ ಲಾಹೋರ್‌ನ ಹೈಕೋರ್ಟ್ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕ ನಿರ್ಣಾಯಕ ಹಂತದಲ್ಲಿದೆ: WHO ಮುಖ್ಯಸ್ಥ
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯವನ್ನು ಪಡೆಯಲು ಪಾಕಿಸ್ತಾನದಲ್ಲಿ ಮಹಿಳೆಯರು ಹೆಚ್ಚು ಹೆಣಗಾಡುತ್ತಾರೆ. ಇಂತಹ ಸಂದರ್ಭದಲ್ಲಿ ಮಹಿಳೆಯೊಬ್ಬರು ಆ ದೇಶದ ಸುಪ್ರೀಂ ಕೋರ್ಟ್ ನ್ಯಾಯಾಧೀಶೆಯಾಗಿರುವುದು ಮಹಿಳೆಯರಲ್ಲಿ ಆಶಾಭಾವನೆ ಮೂಡಿಸಿದೆ.
ಮಲಿಕ್ ಅವರು ನ್ಯಾಯಾಂಗ ವ್ಯವಸ್ಥೆಯಲ್ಲಿನ ಎಲ್ಲಾ ಅಡೆತಡೆಗಳನ್ನು ಮುರಿದಿದ್ದಾರೆ. ವ್ಯವಸ್ಥೆಯಲ್ಲಿ ಇತರ ಮಹಿಳೆಯರು ಮುಂದುವರಿಯಲು ಇದು ಅನುವು ಮಾಡಿಕೊಟ್ಟಂತಾಗಿದೆ ಎಂದು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಖದಿಜಾ ಸಿದ್ದಿಕಿ ತಿಳಿಸಿದ್ದಾರೆ.
ಮಲಿಕ್ ಅವರು ಸುಪ್ರೀಂ ಕೋರ್ಟ್‌ಗೆ ನಾಮನಿರ್ದೇಶನಗೊಂಡಾಗ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಬಾರ್ ಕೌನ್ಸಿಲ್, ಮಲಿಕ್ ಅವರ ನಾಮನಿರ್ದೇಶನವನ್ನು ವಿರೋಧಿಸಿ ಮುಷ್ಕರ ನಡೆಸಿತ್ತು. ಇದನ್ನೂ ಓದಿ: ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ