ಪ್ಯಾರಿಸ್: ಉಗ್ರರಿಗೆ ಬಹಿರಂಗವಾಗಿ ಸಹಕಾರ ನೀಡುತ್ತಿರುವ ಪಾಕಿಸ್ತಾನಕ್ಕೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗವಾಗಿದ್ದು, ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‍ಎಟಿಎಫ್) ಬೂದು(ಗ್ರೇ) ಪಟ್ಟಿಯಲ್ಲೇ ಮುಂದುವರಿಸಿದೆ.
ಪಾಕಿಸ್ತಾನದ ಮಿತ್ರ ರಾಷ್ಟ್ರ ಟರ್ಕಿ ಅಲ್ಲದೇ ಜೋರ್ಡಾನ್, ಮಾಲಿ ದೇಶಗಳು ಈಗ ಹೊಸದಾಗಿ ಬೂದು ಪಟ್ಟಿಗೆ ಎಂಟ್ರಿ ಕೊಟ್ಟಿದೆ. ಪ್ಯಾರಿಸ್‌ನಲ್ಲಿ ನಡೆದ ಎಫ್‌ಎಟಿಎಫ್‌ನ ನಾಲ್ಕು ದಿನಗಳ ಸಾಮಾನ್ಯಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Advertisement
Advertisement
2018ರಲ್ಲಿ ಉಗ್ರರ ನಿಗ್ರಹಕ್ಕೆ ಪಾಕಿಸ್ತಾನಕ್ಕೆ 27 ಅಂಶಗಳು ಜಾರಿಗೆ ತರುವಂತೆ ಸೂಚಿಸಿತ್ತು. ಈ ಪೈಕಿ 6 ಅಂಶಗಳ ಬಗ್ಗೆ ಕೈಗೊಂಡ ಕ್ರಮಗಳು ಪರಿಣಾಮಕಾರಿಯಾಗದ ಕಾರಣ ಬೂದು ಪಟ್ಟಿಯಲ್ಲೇ ಮುಂದುವರಿದಿದೆ. ವಿಶೇಷ ಏನೆಂದರೆ ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿ ಪಾಕಿಸ್ತಾನದ ಪರ ಮಾತನಾಡಿದ ಟರ್ಕಿ ಕೂಡ ಸ್ಥಾನ ಪಡೆದಿದೆ. ಬೂದು ಪಟ್ಟಿಯಿಂದ ಪಾಕಿಸ್ತಾನವನ್ನು ತೆಗೆಯುವಂತೆ ನಾನು ಕೆಲಸ ಮಾಡುವುದಾಗಿ ಟರ್ಕಿ ಪಾಕಿಸ್ತಾನಕ್ಕೆ ಭರವಸೆ ನೀಡಿತ್ತು.
Advertisement
ಚೀನಾ, ಮಲೇಷಿಯಾ, ಟರ್ಕಿ ದೇಶಗಳು ಪಾಕಿಸ್ತಾನದ ಪರವಾಗಿ ಮತ ಹಾಕಿತ್ತು. ಸದಸ್ಯ ರಾಷ್ಟ್ರಗಳ ಪೈಕಿ 38 ಸದಸ್ಯರ ಮತಗಳ ಎಣಿಕೆ ಮೇರೆಗೆ ದೇಶಗಳ ಸ್ಥಿತಿಗತಿ ನಿರ್ಧಾರವಾಗುತ್ತದೆ. ಭಾರತದ ಒತ್ತಡದ ಮೇರೆಗೆ ಪಾಕಿಸ್ತಾನವನ್ನು ಜೂನ್ 2018ರಲ್ಲಿ ಬೂದು ಪಟ್ಟಿಗೆ ಸೇರಿಸಲಾಗಿತ್ತು.
Advertisement
2019ರ ಒಳಗಡೆ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದು ಮತ್ತು ಅಕ್ರಮ ಹಣ ವರ್ಗಾವಣೆಯನ್ನು ನಿಯಂತ್ರಿಸುವಂತೆ ಸೂಚಿಸಿತ್ತು.ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ನೀಡಿದ್ದ ಗಡುವನ್ನು ವಿಸ್ತರಿಸಿತ್ತು. ಮುಂದಿನ ವರ್ಷದ ಏಪ್ರಿಲ್‌ವರೆಗೂ ಈ ದೇಶಗಳು ಬೂದು ಪಟ್ಟಿಯಲ್ಲೇ ಮುಂದುವರಿಯಲಿವೆ.
1989ರಲ್ಲಿ ಎಫ್‍ಎಟಿಎಫ್ ಸ್ಥಾಪಿಸಲಾಗಿದ್ದು, ಉಗ್ರರಿಗೆ ಹಣಕಾಸು ಪೂರೈಕೆ ತಡೆ, ಅಕ್ರಮ ಹಣ ವರ್ಗಾವಣೆ, ಅಂತರಾಷ್ಟ್ರೀಯ ಹಣಕಾಸು ವ್ಯವಸ್ಥೆ ಬೆದರಿಕೆ ಒಡ್ಡುವ ಕೃತ್ಯಗಳನ್ನು ತಡೆಯುವ ಕೆಲಸವನ್ನು ಈ ಕ್ರಿಯಾಪಡೆ ಮಾಡುತ್ತದೆ. ವಿಶ್ವದ ಒಟ್ಟು 38 ರಾಷ್ಟ್ರಗಳು ಎಫ್‍ಎಟಿಎಫ್ ಸದಸ್ಯ ರಾಷ್ಟ್ರಗಳಾಗಿವೆ. ತಾನು ನಿಗದಿಪಡಿಸಿದ ಕ್ರಮಗಳನ್ನು ಅನುಸರಿಸದೇ ಇದ್ದರೆ ಎಫ್‍ಎಟಿಎಫ್ ದೇಶಗಳನ್ನು ಗ್ರೇ ಅಥವಾ ಬ್ಲಾಕ್ ಲಿಸ್ಟ್ ಗೆ ಹಾಕುತ್ತದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭೀಕರ ಅಪಘಾತ – ಇಬ್ಬರ ಪ್ರಾಣ ಉಳಿಸಿದ ಏರ್ ಬ್ಯಾಗ್
ಏನಿದು ಗ್ರೇ ಲಿಸ್ಟ್?
ಫುಟ್ ಬಾಲ್ ಪಂದ್ಯಗಳಲ್ಲಿ ತಪ್ಪು ಮಾಡಿದ ಆಟಗಾರಿಗೆ ಹೇಗೆ ಹಳದಿ ಕಾರ್ಡ್ ನೀಡಿ ಎಚ್ಚರಿಕೆ ನೀಡುತ್ತಾರೋ ಅದೇ ರೀತಿಯಾಗಿ ರಾಷ್ಟ್ರವೊಂದಕ್ಕೆ ಮೊದಲ ಎಚ್ಚರಿಕೆ ನೀಡಲು ಈ ಪಟ್ಟಿಗೆ ಸೇರಿಸಲಾಗುತ್ತದೆ. ಗ್ರೇ ಪಟ್ಟಿಗೆ ಒಂದು ದೇಶ ಸೇರಿದರೆ ಅದಕ್ಕೆ ಹಲವು ಸಮಸ್ಯೆಗಳಾಗುತ್ತದೆ. ವಿವಿಧ ಹಣಕಾಸು ಸಂಸ್ಥೆಗಳು(ಐಎಂಎಫ್, ವಿಶ್ವಬ್ಯಾಂಕ್) ಸಾಲ ನೀಡಲು ಹಿಂದೇಟು ಹಾಕಬಹುದು. ಆರ್ಥಿಕ ನಿರ್ಬಂಧ ಹೇರಬಹುದು. ರಾಷ್ಟ್ರಗಳು ವ್ಯಾಪಾರವನ್ನು ಕಡಿತಗೊಳಿಸಬಹುದು. ರೇಟಿಂಗ್ ಏಜೆನ್ಸಿಗಳು ದೇಶಕ್ಕೆ ಕಡಿಮೆ ರೇಟಿಂಗ್ ಕೊಡಹುದು.
ಏನಿದು ಕಪ್ಪು ಪಟ್ಟಿ?
ಎಫ್‍ಎಟಿಎಫ್ ನಿಗದಿ ಪಡಿಸಿದ ಮಾನದಂಡಕ್ಕೆ ಅನುಗುಣವಾಗಿ ಕೆಲಸ ಮಾಡದೇ ಇದ್ದರೆ ಗ್ರೇ ಪಟ್ಟಿಯಲ್ಲಿರುವ ದೇಶವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ. ಪ್ರಸ್ತುತ ಇರಾನ್ ಮತ್ತು ಉತ್ತರ ಕೊರಿಯಾ ಕಪ್ಪು ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಪಾಕಿಸ್ತಾನಕ್ಕೆ ಹೊಸದೇನಲ್ಲ:
ಪಾಕಿಸ್ತಾನ ಗ್ರೇ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಹೊಸದೆನಲ್ಲ. ಈ ಹಿಂದೆ 2012 ರಿಂದ 2015 ರವರೆಗೆ ಗ್ರೇ ಪಟ್ಟಿಯಲ್ಲಿತ್ತು. ಭಾರತದ ನಿರಂತರ ಒತ್ತಡದ ಬಳಿಕ 2018ರ ಜೂನ್ ಕೊನೆಯಲ್ಲಿ ಗ್ರೇ ಪಟ್ಟಿಗೆ ಪಾಕಿಸ್ತಾನವನ್ನು ಸೇರಿಸಲಾಗಿತ್ತು. ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನ ಸಿಲುಕಿದ್ದು ವಿಶ್ವದ ರಾಷ್ಟ್ರಗಳಿಂದ ಭಿಕ್ಷೆ ಬೇಡಿ ತಿನ್ನುವ ಪರಿಸ್ಥಿತಿಗೆ ಬಂದಿದೆ. ಒಂದು ವೇಳೆ ಕಪ್ಪು ಪಟ್ಟಿಗೆ ಸೇರ್ಪಡೆಯಾದರೆ ಈಗಾಗಲೇ ವಿವಿಧ ರಾಷ್ಟ್ರಗಳಿಂದ ಸಾಲ ಮಾಡಿ ಪಾಕಿಸ್ತಾನದ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಟ್ಟು ಡೋಲಾಯಮಾನವಾಗಬಹುದು.