ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ನೀಡಿದ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಅಡಿ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.
Advertisement
Advertisement
ವಿಪಕ್ಷಗಳು ಪ್ರತಿಭಟನೆಗೆ ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಈಗ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಇದನ್ನೂ ಓದಿ: ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ – ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ
Advertisement
Advertisement
ದೂರಿನಲ್ಲಿ ಏನಿದೆ?
ರಾಜ್ಯಸಭಾ ಚುನಾವಣೆ ನಂತರ ನಾಸೀರ್ ಹುಸೇನ್ (Naseer Hussain) ಅವರ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಮಂಗಳವಾರ ಸಂಜೆ 6 ಗಂಟೆಯಿಂದ 6:30 ರ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪಾಕಿಸ್ತಾನ ಜಿಂದಬಾದ್ ಎಂದು ಘೋಷಣೆ ಕೂಗಿದ ಎಂಬ ಸುದ್ದಿ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಬರುತ್ತಿದೆ. ಈ ಸಂಬಂಧವಾಗಿ ಲಭ್ಯವಿರುವ ಪೂಟೇಜ್ ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ. ಇದನ್ನೂ ಓದಿ: ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಮೋದಿ
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೇ ಬುಧವಾರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಲು ವಿಪಕ್ಷ ಬಿಜೆಪಿ ಕರೆ ನೀಡಿದೆ.