– ವಿಧಾನಸೌಧದಲ್ಲಿ ಆಗಿದ್ದೇನು? ವಿವಾದ ಹುಟ್ಟಿಕೊಂಡದ್ದು ಹೇಗೆ? ಇಲ್ಲಿದೆ ವಿವರ
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪ ಮೇಲೆ ಮೂವರನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ದೆಹಲಿ ಮೂಲದ ಇಲ್ತಾಜ್, ಆರ್.ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂಬ ಆರೋಪಿಗಳನ್ನು ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
ಈಗಾಗಲೇ ಆರೋಪಿಗಳಿಗೆ ವೈದ್ಯಕೀಯ ತಪಾಸಣೆ ಮಾಡಿಸಿದ್ದು, ಕೋರಮಂಗಲದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಖಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್ ಮಾಡಿ: ಅಶೋಕ್ ಆಗ್ರಹ
Advertisement
Advertisement
ಪ್ರಕರಣದ ಹಾದಿ ಹೀಗಿದೆ:
ಫೆಬ್ರವರಿ 27ರಂದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಕಂಡುಬಂದಿತ್ತು. ಈ ಬಗ್ಗೆ `ಪಬ್ಲಿಕ್ ಟಿವಿ’ ವರದಿ ಮಾಡಿತ್ತು. ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಅವರನ್ನು `ಪಬ್ಲಿಕ್ ಟಿವಿ’ ವರದಿಗಾರರು ಮಾತನಾಡಿಸಲು ಮುಂದಾಗಿದ್ದರು. ಈ ವೇಳೆ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದರು. ಈ ಬಗ್ಗೆ ಪ್ರಶ್ನೆ ನಾಸೀರ್ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ, ಪಾಕಿಸ್ತಾನ ಜಿಂದಾಬಾದ್ ಅಂದಿದ್ದು ನನಗೆ ಗೊತ್ತಿಲ್ಲ ಎಂದು ನಾಸೀರ್ ಹುಸೇನ್ ಉತ್ತರಿಸಿದ್ದರು. ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ – ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ
Advertisement
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. 153ಬಿ(ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ನೀಡಿದ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಅಡಿ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ವಿಧಾನಸೌಧ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು. ನಂತರ ಮಾಧ್ಯಮಗಳಿಂದ ಖಚಿತ Raw footage ಪಡೆದು ಪರಿಶೀಲನೆ ನಡೆಸಿದ್ದ ಪೊಲೀಸರು ಎಫ್‌ಎಸ್‌ಎಲ್‌ಗೆ ಕಳಿಸಿಕೊಟ್ಟಿದ್ದರು.
ಆರೋಪಿಗಳ ಪತ್ತೆಗೆ ಭಾರೀ ಕಸರತ್ತು:
ಪೊಲೀಸರಿಂದ ವೀಡಿಯೋ ಆಧಾರಗಳನ್ನು ಪಡೆದಿದ್ದ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಆರೋಪಿಗಳ ಪತ್ತೆಗೆ ಭಾರೀ ಕಸರತ್ತು ನಡೆಸಿತ್ತು. 15 ಧ್ವನಿ ಮಾದರಿಗಳನ್ನ ಸಂಗ್ರಹಿಸಿತ್ತು. ಪ್ರತಿಯೊಂದು ಧ್ವನಿಗಳನ್ನು ಆಲಿಸುವ ಮೂಲಕ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿತ್ತು. ಕೊನೆಗೆ 15 ಜನರಲ್ಲಿ ಮೂವರು ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬುದನ್ನು ವರದಿಯಲ್ಲಿ ದೃಢಪಡಿಸಿತು. ಈ ಬೆನ್ನಲ್ಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ- ಮೂವರ ಬಂಧನ