ಬೆಂಗಳೂರು: ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿ ಇನ್ನೂ ಬಂದಿಲ್ಲ. ವರದಿ ಬಂದ ನಂತರ ಕ್ರಮ ಜರುಗಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ (G Parmeshwar) ಹೇಳಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ (RameshwaramCafeBlast) ಪ್ರಕರಣ ಸೇರಿದಂತೆ ಪರಮೇಶ್ವರ್ ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದರು.
ಸಭೆಯ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಎಫ್‌ಎಸ್‌ಎಲ್ ವರದಿಗೆ ಕಾಯುತ್ತಿದ್ದೇವೆ. ವರದಿಯಲ್ಲಿ ಕೃತ್ಯ ಎಸಗಿದ್ದು ಸಾಬೀತಾದರೇ ಅವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇವೆ. ವರದಿ ಬರುವವರೆಗೂ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ – ರಥಯಾತ್ರೆಗೆ ಹೈಕೋರ್ಟ್ ಅಸ್ತು
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತನಿಖಾ ತಂಡದ ಇನ್ಸ್‌ಪೆಕ್ಟರ್, ಎಸಿಪಿ, ಡಿಸಿಪಿ ಸೇರಿದಂತೆ ಎಲ್ಲ ಸದಸ್ಯರು ಹಾಜರಿರಬೇಕೆಂದು ಸೂಚಿಸಲಾಗಿತ್ತು. ಇದನ್ನೂ ಓದಿ: ಒತ್ತುವರಿ ತೆರವು – ಮದ್ಯದ ಉದ್ಯಮಿಯ 400 ಕೋಟಿ ರೂ. ಮೌಲ್ಯದ ಫಾರ್ಮ್‌ಹೌಸ್ ಧ್ವಂಸ
ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಕಾಂಗ್ರೆಸ್ಸಿನ ನಾಸೀರ್ ಹುಸೇನ್ (Naseer Hussain) ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರು. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ್ದು ವಿವಾದಕ್ಕೆ ಕಾರಣವಾಗಿದೆ.