ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ (Pakistan Zindabad) ಘೋಷಣೆ ಆರೋಪದ ತನಿಖೆ ಚುರುಕುಗೊಂಡಿದೆ. ಪೊಲೀಸರು (Police) ಮಾಧ್ಯಮಗಳಿಂದ ಘಟನೆಯ ಮೂಲ ದೃಶ್ಯಾವಳಿಗಳನ್ನು ಪಡೆಯುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು (PUBLiC TV) ಸಂಪರ್ಕಿಸಿದ ವಿಧಾನಸೌಧ ಠಾಣೆ ಪೊಲೀಸರು ಮೂಲ ದೃಶ್ಯಾವಳಿ ಒದಗಿಸುವಂತೆ ಕೋರಿದ್ದರು. ಇದಕ್ಕೆ ಸ್ಪಂದಿಸಿದ ಪಬ್ಲಿಕ್ ಟಿವಿ, ಎಡಿಟ್ ಮಾಡದ ಮೂಲ ವಿಡಿಯೋ ತುಣಕನ್ನು ಪೊಲೀಸರಿಗೆ ನೀಡಿದೆ. ಇದನ್ನೂ ಓದಿ: BCCI ವಾರ್ಷಿಕ ಆಟಗಾರರ ರಿಟೈನರ್‌ಶಿಪ್ ಪಟ್ಟಿ ರಿಲೀಸ್ – ಯಶಸ್ವಿ, ರಿಂಕು ಪಡೆಯೋ ಸಂಬಳ ಎಷ್ಟು ಗೊತ್ತಾ?
Advertisement
Advertisement
2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ (Nasser Hussain) ಅವರು ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಇದನ್ನು ನಮ್ಮ ವರದಿಗಾರರು ಚಿತ್ರೀಕರಿಸುತ್ತಿದ್ದರು. ಇದನ್ನೂ ಓದಿ: ಇಸ್ರೋ ರಾಕೆಟ್‌ನಲ್ಲಿ ಚೀನಾ ಧ್ವಜ – ಭಾರತದ ಸಾಧನೆ ಒಪ್ಪಿಕೊಳ್ಳಲು ಡಿಎಂಕೆಗೆ ಆಗಲ್ಲ ಎಂದ ಮೋದಿ
Advertisement
Advertisement
ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಕಿರು ಸಂದರ್ಶನ ಮಾಡಲು ಮುಂದಾದಾಗ ಅವರ ಬೆಂಬಲಿಗರಿದ್ದ ಗುಂಪುನಿಂದ ಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೇಳಿಬಂದಿದೆ. ಆ ಮೂಲ ದೃಶ್ಯಾವಳಿಯನ್ನು ತಮಗೆ ನೀಡುತ್ತಿದ್ದೇವೆ ಮತ್ತು ಈ ಮೂಲಕ ತನಿಖೆಗೆ ಸಹಕರಿಸುತ್ತಿದ್ದೇವೆ ಎಂದು ಲಿಖಿತ ರೂಪದಲ್ಲಿ ಪೊಲೀಸರಿಗೆ ವಿವರಣೆ ಕೊಟ್ಟಿದ್ದೇವೆ. ಪೊಲೀಸರು ಆ ವಿಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಸಿದ್ದಾರೆ.