ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್‌ಎಸ್‌ಎಲ್‌ ವರದಿಗೆ ಪರಮೇಶ್ವರ್‌ ಗರಂ

Public TV
1 Min Read
G Parameshwar 2

ಬೆಂಗಳೂರು: ಖಾಸಗಿ ವಿಧಿ ವಿಜ್ಞಾನ ಪ್ರಯೋಗಾಲಯದವರು (FSL) ಯಾರ ಅನುಮತಿ ತೆಗೆದುಕೊಂಡು ಧ್ವನಿ ಪರೀಕ್ಷೆ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಪ್ರಶ್ನೆ ಮಾಡಿದ್ದಾರೆ.

ಖಾಸಗಿ ಎಫ್‌ಎಸ್‌ಎಲ್‌ನವರು ನಡೆಸಿದ ಪರೀಕ್ಷೆಯಲ್ಲಿ ಪಾಕಿಸ್ತಾನ ಜಿಂದಾಬಾದ್‌ (Pakistan zindabad) ಎಂದು ಘೋಷಣೆ ಕೂಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಮಾಧ್ಯಮದವರು ಇಂದು ಪರಮೇಶ್ವರ್‌ ಅವರನ್ನು ಎಫ್‌ಎಸ್‌ಎಲ್‌  ವರದಿ ಯಾವಾಗ ರಿಲೀಸ್‌ ಆಗಲಿದೆ ಎಂದು ಪ್ರಶ್ನಿಸಿದರು.

 

ಈ ಪ್ರಶ್ನೆಗೆ, ಯಾರ ಅನುಮತಿ ತೆಗೆದುಕೊಂಡು ಅವರು ಪರೀಕ್ಷೆ ಮಾಡಿದ್ದಾರೆ ಅಂತಾ ವಿಚಾರಿಸುತ್ತೇವೆ. ಈ ರೀತಿಯ ವರದಿಗಳನ್ನು ಬಹಿರಂಗಗೊಳಿಸುವುದಕ್ಕೆ ಅಧಿಕಾರ ಯಾರು ಕೊಟ್ಟಿದ್ದಾರೆ ಎಂದು ಪರಿಶೀಲಿಸುತ್ತೇವೆ ಎಂದು ಗರಂ ಆಗಿ ಉತ್ತರಿಸಿದರು. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದು ನಿಜ : ಉನ್ನತ ಪೊಲೀಸ್‌ ಮೂಲಗಳು

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರವನ್ನು ಸರ್ಕಾರ ಮುಚ್ಚಿಡುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ, ಎಫ್‌ಎಸ್‌ಎಲ್ ವರದಿಯನ್ನು ಮುಚ್ಚಿಡುವಂತಹ ಪ್ರಶ್ನೆಯೇ ಇಲ್ಲ. ವರದಿ ಬಂದ ಕೂಡಲೇ ಪ್ರಕಟ ಮಾಡುತ್ತೇವೆ. ಘೋಷಣೆ ಕೂಗಿದ್ದು ನಿಜವಾಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಭಾನುವಾರ ನಡೆದ ಪೊಲೀಸ್‌ ಅಧಿಕಾರಿಗಳ ಸಭೆಯಲ್ಲೂ ಸಹ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

 

Share This Article