ಮಂಡ್ಯ: ತನ್ನ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ (BJP) ವಿರುದ್ಧ ದ್ವೇಷದ ರಾಜಕೀಯಕ್ಕೆ ಕಾಂಗ್ರೆಸ್ (Congress) ಮುಂದಾಯಿತಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.
ಈ ಪ್ರಶ್ನೆ ಏಳಲು ಕಾರಣ 2022ರಲ್ಲಿ ಮಂಡ್ಯದಲ್ಲಿ (Mandya) ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಪಾಕ್ ಪರ ಘೋಷಣೆ ಕೂಗಿದ ವಿಚಾರವನ್ನೇ ಮುಂದಿಟ್ಟುಕೊಂಡು ಈಗ ಕಾಂಗ್ರೆಸ್ ಪ್ರಕರಣ ದಾಖಲಿಸಿದೆ.
Advertisement
ಮಂಡ್ಯದ ಸಂಜಯ್ ವೃತ್ತದಲ್ಲಿ 2022ರ ಡಿಸೆಂಬರ್ 17 ರಂದು ಅಂದಿನ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಇದನ್ನೂ ಓದಿ: ಸರ್, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?
Advertisement
Advertisement
ಈ ವೇಳೆ “ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್” ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ ಮುರ್ದಾಬಾದ್ ಎಂದು ಹೇಳುವ ಬದಲು ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ್ದ. ಕೂಡಲೇ ಎಚ್ಚೆತ್ತ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ ಕಾರ್ಯಕರ್ತನ ಬಾಯಿ ಮುಚ್ಚಿಸಿದ್ದರು.
Advertisement
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕೈ ಕಾರ್ಯಕರ್ತರು ಬಂಧನಕ್ಕೆ ಒಳಗಾದ ಬೆನ್ನಲ್ಲೇ ಈಗ ಕಾಂಗ್ರೆಸ್ ಮಂಡ್ಯದ ಬಿಜೆಪಿ ಕಾರ್ಯಕರ್ತರ ಮೇಲೆ ದೂರು ನೀಡಿದೆ. ಇದನ್ನೂ ಓದಿ: ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ
ಕನ್ನಂಬಾಡಿ ಕುಮಾರ್ ದೂರು ನೀಡಿದ್ದು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ತರುವ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಮೇರೆಗೆ ಆರಾಧ್ಯ, ರವಿ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಬಿಜೆಪಿ ಕಾರ್ಯಕರ್ತ ರವಿಯನ್ನು ವಶಕ್ಕೆ ಪಡೆದಿದ್ದಾರೆ.
ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್‌ನ ಕಟುಕ ಇನ್ನೂ ಬದುಕಿದ್ದಾನೆ ಮತ್ತು ಆತ ಭಾರತದ ಪ್ರಧಾನ ಮಂತ್ರಿ ಎಂಬ ಬಿಲಾವಲ್ ಭುಟ್ಟೋ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತ್ತು.